Saturday, December 6, 2025
Saturday, December 6, 2025

Constitution Awareness Jatha ಮಲೆನಾಡಿನ ತೀರ್ಥಹಳ್ಳಿಯಲ್ಲಿ ಸಂವಿಧಾನ ಜಾಗೃತಿ ಜಾಥಾ

Date:

Constitution Awareness Jatha ಸ್ವಾತಂತ್ರ್ಯ, ಸಮಾನತೆ, ಭ್ರಾತೃತ್ವ, ಸಂವಿಧಾನದ ಆಧಾರ ಸ್ತಂಭಗಳು. ಸಂವಿಧಾನ ಜಾರಿಗೆ ಬಂದು 75 ವರ್ಷಗಳಾದ ಈ ಸಂದರ್ಭದಲ್ಲಿ ಸಂವಿಧಾನದ ಅರಿವು ಸಮಾಜದ ಪ್ರತಿ ಪ್ರಜೆಗಳಿಗೆ ತಲುಪಿಸುವುದು ಸರ್ಕಾರದ ಆಶಯವಾಗಿರುತ್ತದೆ ಎಂದು ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕಿ ಆಶಾಲತಾ ತಿಳಿಸಿದರು.
ಫೆ.15 ರಂದು ತೀರ್ಥಹಳ್ಳಿ ತಾಲ್ಲೂಕಿನ ಹೆಗ್ಗೋಡು ಗ್ರಾಮ ಪಂಚಾಯಿತಿಯಲ್ಲಿ ನಡೆದ ಸಂವಿಧಾನ ಜಾಗೃತಿ ಜಾಥ ಕಾರ್ಯಕ್ರಮದಲ್ಲಿ ಅವರು ಪಾಲ್ಗೊಂಡು ಮಾತನಾಡಿದರು.
ಸಾಲೂರು ಗ್ರಾಮ ಪಂಚಾಯಿತಿ ಮೂಲಕ ತೀರ್ಥಹಳ್ಳಿ ತಾಲ್ಲೂಕು ಪ್ರವೇಶಿಸಿದ ಸಂವಿಧಾನ ಜಾಗೃತಿ ಜಾಥಾ ರಥವನ್ಮ್ನ ಇಲ್ಲಿಯ ಗ್ರಾಮ ಪಂಚಾಯಿತಿ ಅಧ್ಯಕ್ಷರು, ಉಪಾಧ್ಯಕ್ಷರು, ಹಾಗೂ ಇತರೆ ಸದಸ್ಯರುಗಳು, ವಿವಿಧ ಇಲಾಖೆಗಳ ಅಧಿಕಾರಿ/ಸಿಬ್ಬಂದಿಗಳು, ಮಹಿಳೆಯರು, ವಿವಿಧ ಸಂಘ ಸಂಸ್ಥೆಗಳ ಮುಖಂಡರು, ಶಾಲಾ ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದು ಪೂರ್ಣ ಕುಂಭ ಮೆರವಣಿಯೊಂದಿಗೆ ಸ್ವಾಗತಿಸಿದರು.
Constitution Awareness Jatha ಸ್ಥಳೀಯ ಸಂಪನ್ಮೂಲ ವ್ಯಕ್ತಿಗಳಾದ ಶ್ರೀಧರ್ ಆಚಾರ್ ಮಾತನಾಡಿ, ಸಂವಿಧಾನದ ಮಹತ್ವವನ್ನು ಸಭೆಗೆ ತಿಳಿಸಿದರು. ಜಾಥವು ಹೊಸಹಳ್ಳಿ, ಹೆಗ್ಗೋಡು ಗ್ರಾಮ ಪಂಚಾಯಿತಿ ಮೂಲಕ ಚಲಿಸಿ ತೀರ್ಥಮತ್ತೂರು ಗ್ರಾಮ ಪಂಚಾಯತಿಯಲ್ಲಿ ವಾಸ್ತವ್ಯ ಮಾಡಲಾಯಿತು. ಅರೆಹಳ್ಳಿ, ಬಿದರಗೋಡು, ಆಗುಂಬೆ, ಹೊನ್ನೆತಾಳು, ನಾಲೂರು, ಮೇಘರವಳ್ಳಿ, ಮುಳಾಗಿಲು, ಬಸವಾನಿ ಗ್ರಾಮ ಪಂಚಾಯಿತಿಗಳ ಮೂಲಕ ಜಾಗೃತಿ ಜಾಥಾದ ಎರಡು ಟ್ಯಾಬ್ಲೊಗಳು ಫೆಬ್ರವರಿ-14 ರಿಂದ 19ರವೆರೆಗೆ ಒಟ್ಟು 4 ದಿನಗಳವೆರೆಗೆ ತಾಲ್ಲೂಕಿನ 36 ಗ್ರಾಮ ಪಂಚಾಯಿತಿಗಳು ಹಾಗೂ ಪಟ್ಟಣ ಪಂಚಾಯತ್‍ಗಳಲ್ಲಿ ಸಂಚರಿಸಲಿದ್ದು, ಸಂವಿಧಾನದ ಆಶಯಗಳನ್ನು ಜನಸಾಮಾನ್ಯರಿಗೆ ತಿಳಿಸಿಕೊಡಲಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Bangalore Television Centre ಕಲಾತ್ಮಕ ಧಾರಾವಾಹಿ ನಿರ್ಮಾಣ & ಫೋಕ್ ರಿಯಾಲಿಟಿ ಶೋ ನಲ್ಲಿ ಭಾಗವಹಿಸಲು ಅರ್ಜಿ ಆಹ್ವಾನ

Bangalore Television Centre ಬೆಂಗಳೂರು ದೂರದರ್ಶನ ಕೇಂದ್ರವು ನಿರ್ಮಿಸಲಿರುವ ಕಲಾತ್ಮಕ ಧಾರಾವಾಹಿಯನ್ನು...

ಭಗವದ್ಗೀತೆ ಪಠ್ಯದಲ್ಲಿ ಅಳವಡಿಸಲು ಸಚಿವ ಕುಮಾರಣ್ಣ ಬರೆದ ಪತ್ರಕ್ಕೆ ಅಶೋಕ ಜಿ.ಭಟ್ ಕೃತಜ್ಞತೆ

ಶಿವಮೊಗ್ಗದಲ್ಲಿ ಇತ್ತೀಚೆಗೆ ಭಗವದ್ಗೀತಾ ಅಭಿಯಾನವು ಅತ್ಯಂತ ಯಶಸ್ವಿಯಾಗಿ ನೆರವೇರಿತು.ರಾಜ್ಯಮಟ್ಟದ ಬೃಹತ್ಸಮಾರಂಭದಲ್ಲಿ ವಿವಿಧ...

Indian Medical Association 30 ವರ್ಷ ದಾಟಿದ ಮಹಿಳೆಯರು ಪ್ಯಾಪ್ಸ್ ಮಿಯರ್ ಟೆಸ್ಟ್ ಅನ್ನು 3 ವರ್ಷಕ್ಕೆ ಒಂದು ಬಾರಿ‌ ಮಾಡಿಸಬೇಕು- ಡಾ.ರಕ್ಷಾರಾವ್

Indian Medical Association ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಜಾಗ್ರತೆ ವಹಿಸಬೇಕು...

MESCOM ಡಿಸೆಂಬರ್ ‌9. ಕುಂಸಿ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪವಿಭಾಗದಲ್ಲಿ ಡಿ. 09 ರಂದು ಬೆಳಗ್ಗೆ 11.00...