Saturday, October 10, 2026
Saturday, October 10, 2026

Shivaji Maharaj Jayanti ಛತ್ರಪತಿ ಶ್ರೀ ಶಿವಾಜಿ ಮಹಾರಾಜರ ಜಯಂತಿ

Date:

Shivaji Maharaj Jayanti ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಶಿವಮೊಗ್ಗ ಇವರ ಸಂಯಕ್ತಾಶ್ರಯದಲ್ಲಿ ಫೆ.19 ರ ಬೆಳಗ್ಗೆ 11 ಗಂಟೆಗೆ ನಗರದ ಕುವೆಂಪು ರಂಗಮಂದಿರದಲ್ಲಿ ಛತ್ರಪತಿ ಶ್ರೀ ಶಿವಾಜಿ ಮಹಾರಾಜರ ಜಯಂತಿಯನ್ನು ಏರ್ಪಡಿಸಲಾಗಿದೆ.
ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖಾ ಹಾಗೂ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಮಧುಬಂಗಾರಪ್ಪ ಇವರು ಕಾರ್ಯಕ್ರಮದ ಉದ್ಘಾಟನೆ ನೆರವೇರಿಸುವರು. ಶಾಸಕ ಎಸ್.ಎನ್. ಚನ್ನಬಸಪ್ಪರವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು. ಕನ್ನಡ ಮತ್ತು ಸಂಸ್ಕøತಿ ಇಲಾಖೆ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ತಂಗಡಗಿ ಶಿವರಾಜ್ ಸಂಗಪ್ಪ ಮತ್ತು ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವ ಹಾಗೂ ಮಲೆನಾಡು ಪ್ರದೇಶ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಡಿ. ಸುಧಾಕರ್ ಇವರುಗಳು ವಿಶೇಷ ಆಹ್ವಾನಿತರಾಗಿ ಉಪಸ್ಥಿತರಿರಲಿದ್ದಾರೆ.
ಕಾರ್ಯಕ್ರಮದಲ್ಲಿ ಸಂಸದರು, ವಿಧಾನಸಭಾ ಮತ್ತು ವಿಧಾನ ಪರಿಷತ್ ಶಾಸಕರು, ಪಾಲಿಕೆ ಮಹಾಪೌರರು, ಜನಪ್ರತಿನಿಧಿಗಳು, ವಿವಿಧ ನಿಗಮ, ಮಂಡಳಿ, ಪ್ರಾಧಿಕಾರಗಳ ಅಧ್ಯಕ್ಷರು, ಜಿಲ್ಲೆಯ ಎಲ್ಲಾ ಗೌರವಾನ್ವಿತ ಜನಪ್ರತಿನಿಧಿಗಳು, ಸರ್ಕಾರಿ ಅಧಿಕಾರಿಗಳು ಹಾಗೂ ಸಿಬ್ಬಂದಿವರ್ಗ ಮತ್ತು ವಿವಿಧ ಸಂಘಟನೆಗಳ ಮುಖಂಡರು, ಪದಾಧಿಕಾರಿಗಳು ಹಾಗು ಸದಸ್ಯರು, ಜಿಲ್ಲಾಧಿಕಾರಿಗಳು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು, ಜಿ.ಪಂ ಸಿಇಓ, ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕರು ಹಾಗೂ ಮಹಾನಗರ ಪಾಲಿಕೆ ಆಯುಕ್ತರು ಮತ್ತು ಇನ್ನಿತರ ಗಣ್ಯರು, ಅಧಿಕಾರಿಗಳು ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು.
Shivaji Maharaj Jayanti ಭದ್ರಾವತಿಯ ದಾಸರಕಲ್ಲಹಳ್ಳಿ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶಿವಾಜಿ ರಾವ್ ಡಿಸ್ಲೇರವರಿಂದ ವಿಶೇಷ ಉಪನ್ಯಾಸ ಆಯೋಜಿಸಲಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Kuvempu University ವನ್ಯಜೀವಿ ಸಂರಕ್ಷಣೆಗೆ ಯುವಜನರ ಪಾಲ್ಗೊಳ್ಳುವಿಕೆ ಮುಖ್ಯ: ಸಮದ್ ಕೊಟ್ಟೂರು

Kuvempu University ವನ್ಯಜೀವಿ ಸಂರಕ್ಷಣೆ, ಪರಿಸರ ವಿಜ್ಞಾನ ಹಾಗೂ ಸಂಶೋಧನಾ ಕ್ಷೇತ್ರಗಳಲ್ಲಿ...