Karnataka Budget 2024 ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2024-25ನೇ ಸಾಲಿನ ಕರ್ನಾಟಕ ಬಜೆಟ್ ಮಂಡನೆ ಮಾಡಿದ್ದಾರೆ. ಸಿದ್ದರಾಮಯ್ಯ ಮಂಡನೆ ಮಾಡಿದ 15ನೇ ಬಜೆಟ್ ಇದಾಗಿದೆ. ಲೋಕಸಭೆ ಚುನಾವಣೆ ಸಮೀಪಿಸುತ್ತಿರುವುದರಿಂದ ಬಜೆಟ್ ಮೇಲಿನ ನಿರೀಕ್ಷೆ, ಕುತೂಹಲಗಳೂ ಹೆಚ್ಚಾಗಿದ್ದವು. ಸಿದ್ದರಾಮಯ್ಯ ಅವರ ಬಜೆಟ್ನ ಮುಖ್ಯಾಂಶಗಳು ಇಲ್ಲಿವೆ.
ಕಳೆದ ಬಾರಿ ಬಜೆಟ್ ಗಾತ್ರ 3.27 ಲಕ್ಷ ಕೋಟಿ ರೂಪಾಯಿ ಇತ್ತು. ಈ ಬಾರಿ 3.50 ಲಕ್ಷ ಕೋಟಿ ಅಥವಾ 3.80 ಲಕ್ಷ ಕೋಟಿ ತಲುಪುವ ಸಾಧ್ಯತೆ ಇದೆ. ಕಳೆದ ಬಜೆಟ್‌ನಲ್ಲಿ 85,815 ಕೋಟಿ ರೂ. ಸಾಲದ ಮೊರೆ ಹೋಗಿತ್ತು ಸರ್ಕಾರ. ಈ ಬಾರಿ ಅಂದಾಜು 1 ಲಕ್ಷ ಕೋಟಿಗೆ ಸಾಲ ಹೆಚ್ಚಾಗುವ ಸಾಧ್ಯತೆ ಇದೆ.
Karnataka Budget 2024 ಆಡಳಿತ ವ್ಯವಸ್ಥೆ ಬಲಪಡಿಸಲು ತಂತ್ರಜ್ಞಾನ ಬಳಕೆ ಮಾಡಲಾಗುವುದು. ಕೃತಕ ಬುದ್ಧಿಮತ್ತೆ, ಮಿಷನ್ ಲರ್ನಿಂಗ್ ತಂತ್ರಜ್ಞಾನ ಬಳಕೆ ಮಾಡಲಾಗುವುದು. ನೂತನ ಪೊಲೀಸ್ ಠಾಣಾ ಕಟ್ಟಡಗಳಿಗೆ ₹30 ಕೋಟಿ ಮೀಸಲು ಇಡಲಾಗುವುದು. ವಿಧಿ ವಿಜ್ಞಾನ ಪ್ರಯೋಗಾಲಯಗಳ ಮೊಬೈಲ್ ಫೊರೆನ್ಸಿಕ್, ಆಡಿಯೋ ಮತ್ತು ವಿಡಿಯೋ ವಿಭಾಗ ಬಲಪಡಿಸಲು ಕ್ರಮ ಕೈಗೊಳ್ಳಲಾಗುವುದು. 10 ಕೋಟಿ ರೂ. ವೆಚ್ಚದಲ್ಲಿ ಅಗತ್ಯ ಉಪಕರಣ, ತಂತ್ರಾಂಶ ಪೂರೈಕೆ ಮಾಡಲಾಗುವುದು. ಎಲ್ಲಾ ಕಾರಾಗೃಹಗಳ ಸುಗಮ ಆಡಳಿತ ಹಾಗೂ ಭದ್ರತೆಗೆ ಕ್ರಮ ಕೈಗೊಳ್ಳಲಾಗುವುದು. 5 ಕೋಟಿ ರೂ. ವೆಚ್ಚದಲ್ಲಿ ಎಐ ತಂತ್ರಾಂಶ ಬಳಸಲಾಗುವುದು ಎಂದು ಸಿದ್ದರಾಮಯ್ಯ ಹೇಳಿದರು.
ಮಂಗಳೂರು ಬಂದೂರಿನಿಂದ ವರೆಗೆ ಹಾಗೂ ಬೀದರ್ ನಿಂದ ಬೆಂಗಳೂರು ನಡುವೆ ಆರ್ಥಿಕ ಅಭಿವೃದ್ಧಿ ಕಾರಿಡಾರ್ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಲಾಗಿದೆ.
ಮೀನುಗಾರಿಕಾ ಕ್ಷೇತ್ರಕ್ಕೆ 3000 ಕೋಟಿ ರೂಪಾಯಿ ಮತದ ಯೋಜನೆ ಘೋಷಣೆಯನ್ನು ಮಾಡಲಾಗಿದೆ.
ರೈತ ಮಹಿಳೆಯರಿಗೆ ಹಸು ಅಥವಾ ಎಮ್ಮೆ ಖರೀದಿಗೆ ಸಾಲ ಸೌಲಭ್ಯವನ್ನು ನೀಡಲಾಗಿದೆ. ವಿವಿಧ ರೈತಪರ ಯೋಜನೆಗಳನ್ನ ಒಗ್ಗೂಡಿಸಿ ರೈತ ಸಮೃದ್ಧಿ ಯೋಜನೆ ಘೋಷಣೆ ಮಾಡಲಾಗಿದೆ. ಬರದ ತೀವ್ರತೆಯನ್ನು ತಗ್ಗಿಸಲು 20 ಕೋಟಿ ವೆಚ್ಚದಲ್ಲಿ ಮಿನಿ ಮೇಲಿನ ಕಿಟ್ ವಿತರಣೆ ಮಾಡಲಾಗಿದೆ.
ಮಾಜಿ ದೇವದಾಸಿಯರಿಗೆ ಸಾವಿರ ರೂಪಾಯಿ ಮಾಸಾಶನ ನೀಡಲಾಗುತ್ತದೆ. ಕಲ್ಯಾಣ ಕರ್ನಾಟಕ ಅಭಿವೃದ್ಧಿಗೆ ಕಲ್ಯಾಣ ಪಥ ಯೋಜನೆಯನ್ನು ಘೋಷಣೆ ಮಾಡಲಾಗಿದೆ.
ಶಿವಮೊಗ್ಗದ ಸೋಗಾನೆ, ವಿಜಯಪುರದ ಇಟ್ಟಂಗಿ ಹಾಳ, ಬೆಂಗಳೂರು ಗ್ರಾ. ಜಿಲ್ಲೆ ಮೂಗೆನಹಳ್ಳಿ ಬಳಿ ಆಹಾರ ಪಾರ್ಕ್.
ಕೋಟಿ ರೂಪಾಯಿ ವೆಚ್ಚದಲ್ಲಿ ಅಂಗನವಾಡಿ ಕಾರ್ಯಕರ್ತೆಯರಿಗೆ ಮೇಲ್ವಿಚಾರಕೀಯರಿಗೆ, 75, 938 ಸ್ಮಾರ್ಟ್ ಫೋನ್ ನೀಡುವುದಾಗಿ ಬಜೆಟ್ ನಲ್ಲಿ ಘೋಷಿಸಲಾಗಿದೆ.