Thursday, March 19, 2026
Thursday, March 19, 2026

Shivamogga Dc ಕಚೇರಿಗೆ ಜನಸಾಮಾನ್ಯರನ್ನುಅನಾವಶ್ಯಕ ಅಲೆದಾಡಿಸಬೇಡಿ- ಗುರುದತ್ತ ಹೆಗಡೆ

Date:

Shivamogga Dc ತಮ್ಮ ಅಗತ್ಯ ಕೆಲಸ-ಕಾರ್ಯಗಳ ನಿಮಿತ್ತ ಹಾಗೂ ಸೌಲಭ್ಯವನ್ನು ನಿರೀಕ್ಷಿಸಿ ಕಚೇರಿಗೆ ಬರುವ ಗ್ರಾಮೀಣರಿಗೆ, ಜನಸಾಮಾನ್ಯರಿಗೆ, ಅದರಲ್ಲೂ ವಿಶೇಷವಾಗಿ ಜನಸಾಮಾನ್ಯರಿಗೆ ವಿಳಂಬಕ್ಕೆ ಅವಕಾಶವಿಲ್ಲದಂತೆ ತಮ್ಮ ಕಾರ್ಯವ್ಯಾಪ್ತಿಯಲ್ಲಿನ ಕೆಲಸಗಳನ್ನು ತುರ್ತಾಗಿ ಮಾಡಿಕೊಡುವಂತೆ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರು ಅಧಿಕಾರಿಗಳಿಗೆ ಸೂಚಿಸಿದರು.

ಅವರು ಇಂದು ಭದ್ರಾವತಿ ತಾಲೂಕು ಕಚೇರಿಗೆ ಭೇಟಿ ಮಾಡಿ, ಕಚೇರಿಗೆ ಬಂದಿದ್ದ ಜನಸಾಮಾನ್ಯರೊಂದಿಗೆ ಇಲಾಖಾ ಸೇವೆಗಳ ಬಗ್ಗೆ ಮಾಹಿತಿ ಪಡೆದು, ನಂತರ ಆಯೋಜಿಸಲಾಗಿದ್ದ ಅಧಿಕಾರಿಗಳ ಸಭೆಯಲ್ಲಿ ತಾಲೂಕು ಮಟ್ಟದ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಕಂದಾಯ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ತಮ್ಮ ಇಲಾಖೆಗಳಲ್ಲಿ ಅನುಷ್ಠಾನದಲ್ಲಿರುವ ಯೋಜನೆಗಳನ್ನು ಪ್ರಾಮಾಣಿಕವಾಗಿ ಅರ್ಹರನ್ನು ಗುರುತಿಸಿ ತಲುಪಿಸಬೇಕು. ಕಚೇರಿಗೆ ಬರುವ ಜನಸಾಮಾನ್ಯರಿಗೆ ಅನವಶ್ಯಕವಾಗಿ ಕಚೇರಿಗೆ ಅಲೆದಾಡದಂತೆ ಸರಿಯಾದ ಮಾರ್ಗದರ್ಶನ ನೀಡಿ, ಅವರು ನೀಡುವ ಅರ್ಜಿಗಳನ್ನು ಸಣ್ಣ ಕಾರಣಗಳಿಗಾಗಿ ಹಿಂದಕ್ಕೆ ಕಳುಹಿಸದೇ ಸಹಕರಿಸುವಂತೆ ಹಾಗೂ ಅರ್ಜಿಗಳನ್ನು ಸಕಾಲದಲ್ಲಿ ವಿಲೇವಾರಿ ಮಾಡುವಂತೆ ಅವರು ಅಧಿಕಾರಿಗಳಿಗೆ ಸಲಹೆ ನೀಡಿದರು.

ಅಧಿಕಾರಿಗಳು ತಮ್ಮ ಕಚೇರಿಗೆ ಬರುವ ಜನಸಾಮಾನ್ಯರೊಂದಿಗೆ ಸೌಜನ್ಯುಯುತವಾಗಿ ವರ್ತಿಸುವಂತೆ ಹಾಗೂ ಜನಸ್ನೇಹಿ ಆಡಳಿತ ನೀಡುವಂತೆ ಸೂಚಿಸಿದ ಅವರು, ಸರ್ಕಾರದ ಸೌಲತ್ತುಗಳನ್ನು ಅರ್ಹರಿಗೆ ನಿಗಧಿಪಡಿಸಿದ ಕಾಲಮಿತಿಯೊಳಗಾಗಿ ತಲುಪಿಸುವಂತೆ ಅವರು ಸಲಹೆ ನೀಡಿದರು.

Shivamogga Dc ಈ ಸಂದರ್ಭದಲ್ಲಿ ತಾಲೂಕಿನ ಎಲ್ಲಾ ಇಲಾಖೆಗಳ ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ಗೋಪಾಲ ಗೌಡರು ಶಿವಮೊಗ್ಗ ಜಿಲ್ಲೆಯನ್ನ ಸಮಾಜವಾದದ ತೊಟ್ಟಿಲನ್ನಾಗಿ ರೂಪಿಸಿದವರು- ವೈ.ಎಸ್.ವಿ.ದತ್ತ.

Shimoga News ನಗರದ ಮಥುರಾ ಪ್ಯಾರಡೈಸ್ ಸಭಾಂಗಣದಲ್ಲಿ ಮಾಜಿ ಶಾಸಕ ಹಾಗೂ...

Klive Special Article ಕೆ ಲೈವ್ ವಿಶೇಷ.” ವಿಕ್ರಮ ಮತ್ತು ಶಾಲಿವಾಹನ ಶಕಪುರುಷರು” ಒಂದು ಚಿಂತನೆ.ಲೇ: ದಿಲೀಪ್ ನಾಡಿಗ್,ಶಿವಮೊಗ್ಗ.

ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ. Klive Special Article ತೈತ್ತಿರೀಯ ಅರಣ್ಯಕದಲ್ಲಿರುವ ಶ್ಲೋಕದಂತೆ "ಕ್ವೇದಮಭ್ರಂ ನಿವಿಶತೇ...

Kote SeethaRamanjaneya Temple ಇಂದಿನಿಂದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆ

Kote SeethaRamanjaneya Temple ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ...

Women’s Day ವೃದ್ಧಾಪ್ಯದ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವಿರಲಿ- ಡಾ.ಪ್ರಿಯಾಂಕ ಚೌಹಾಣ್.

Women's Day ಜೆಸಿ ಶಿವಮೊಗ್ಗ ಚಿರಂತನದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು...