Basavanna ವಿಶ್ವ ಗುರು, ಜಗಜ್ಯೋತಿ ಬಸವಣ್ಣನವರು ಇಂದು ಕರ್ನಾಟಕದ ಸಾಂಸ್ಕೃತಿಕ ನಾಯಕರಾಗಿ ವಿಶ್ವದ ಮಾನ್ಯತೆಯನ್ನು ಪಡೆದಿದ್ದಾರೆ, ಅಂತರಂಗ ಮತ್ತು ಬಹಿರಂಗ ಶುದ್ಧಿಯ ಬಗ್ಗೆ ತಮ್ಮ ವಚನಗಳ ಮೂಲಕ ತಿಳಿಸಿ, ಅನುಭವ ಮಂಟಪದ ಮೂಲಕ ವಿಶ್ವದಲ್ಲೇ ಸಂಸತ್ತಿನ ಕಲ್ಪನೆ ಮೂಡಿಸಿದ ಮಹಾನ್ ಚಿಂತಕರಾಗಿ ನಮ್ಮೆಲ್ಲರ ಹೆಮ್ಮೆಯಾಗಿದ್ದಾರೆ” ಎಂದು ಶಿಕ್ಷಕ ಎನ್.ಎನ್.ಕಬ್ಬೂರ ತಮ್ಮ ಅಭಿಪ್ರಾಯ ಹಂಚಿಕೊಂಡರು.
ಪಟ್ಟಣದ ಸ.ಕಿ.ಪ್ರಾ ಕನ್ನಡ ಶಾಲೆ ನಂ-6 ರಲ್ಲಿ ಕರ್ನಾಟಕದ ಸಾಂಸ್ಕೃತಿಕ ನಾಯಕ, ವಿಶ್ವ ಗುರು ಬಸವಣ್ಣನವರ ಫೋಟೋ ಅನಾವರಣ ಮತ್ತು ಪೂಜಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಜಾತಿ-ಧರ್ಮ ಮೇಲು-ಕೀಳು ಎಲ್ಲವನ್ನು ಮೀರಿ, ಮಾನವ ಕುಲ ಒಂದೇ ಎಂಬ ಸಂದೇಶ ಇಡೀ ವಿಶ್ವಕ್ಕೆ ತಮ್ಮ ವಚನಗಳ ಮೂಲಕ ತಿಳಿಸಿದ್ದಾರೆ ಎಂದರು.
Basavanna ನಂತರ ಬಸವಣ್ಣನವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಲಾಯಿತು, ಮಕ್ಕಳು ಬಸವಣ್ಣನವರ ವಚನಗಳನ್ನು ಹೇಳಿದರು, ಈ ವೇಳೆ ಶಿಕ್ಷಕಿ ಎಮ್.ಆರ್.ಫಂಡಿ, ಅಂಗನವಾಡಿ ಕಾರ್ಯಕರ್ತೆಯರು, ಅಡುಗೆ ಸಿಬ್ಬಂದಿಯವರು, ಪಾಲಕ-ಪೋಷಕರು ಮತ್ತು ಮಕ್ಕಳು ಉಪಸ್ಥಿತರಿದ್ದರು.