ಜಿಲ್ಲೆಯಲ್ಲಿ ತೀವ್ರ ಕುತೂಹಲ ಮೂಡಿಸಿದ್ದಂತಹ ವಿಧಾನಪರಿಷತ್ತಿನ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಡಿ.ಎಸ್.ಅರುಣ್ ಅವರು 2208 ಮತಗಳಿಸುವ ಮೂಲಕ ಗೆಲುವನ್ನು ಸಾಧಿಸಿದ್ದಾರೆ.
ಜಿಲ್ಲೆಯಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ಭಾರೀ ಪೈಪೋಟಿ ನಡೆದಿತ್ತು. 4156 ಮತಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿ ಆರ್.ಪ್ರಸನ್ನಕುಮಾರ್ ಅವರು 1820 ಮತ ಪಡೆದರೆ, ಬಿಜೆಪಿ ಅಭ್ಯರ್ಥಿ ಡಿ.ಎಸ್.ಅರುಣ್ 2208 ಮತಗಳಿಸಿ ಗೆಲುವು ಪಡೆದಿದ್ದಾರೆ. 4156 ಮತಗಳಲ್ಲಿ ತಿರಸ್ಕೃತ ಮತಗಳ ಸಂಖ್ಯೆ 109 ಆಗಿದೆ.
ಒಟ್ಟಾರೆ ಹೇಳುವುದಾದರೆ ಕಳೆದ ಒಂದು ತಿಂಗಳಿನಿಂದ ಜಿಲ್ಲೆಯಾದ್ಯಂತ ಬಿಜೆಪಿ ಮತ್ತು ಕಾಂಗ್ರೆಸ್ ಅಭ್ಯರ್ಥಿಗಳ ಪರ ಭಾರಿ ಪ್ರಚಾರ ನಡೆದಿತ್ತು. ಡಿಸೆಂಬರ್ 10ರಂದು ವಿಧಾನಪರಿಷತ್ತಿನ ಚುನಾವಣೆ ಎದ್ದಿತ್ತು. ಈ ಚುನಾವಣೆಯ ಫಲಿತಾಂಶ ಪ್ರಕಟವಾಗಿದ್ದು, ಮತ್ತೆ ಬಿಜೆಪಿ ಜಯಭೇರಿ ಸಾಧಿಸಿದೆ.