Wednesday, February 4, 2026
Wednesday, February 4, 2026

Madhu Bangarappa ಭದ್ರಾವತಿ ಎಂಪಿಎಂ ಪುನರಾರಂಭಕ್ಕೆ ಮಧು ಬಂಗಾರಪ್ಪ ಅವರಿಂದ ವಿಡಿಯೋ ಸಂವಾದ

Date:

Madhu Bangarappa ಭದ್ರಾವತಿಯ ಎಂಪಿಎಂ ಕಾರ್ಖಾನೆಯು 2015ರಲ್ಲಿ ಮುಚ್ಚಲ್ಪಟ್ಟಿದ್ದು ಅದನ್ನು ಪುನಶ್ಚೇತನ ಗೊಳಿಸಲು ಇರುವ ವಿವಿಧ ಮಾರ್ಗೋಪಾಯಗಳ ಬಗ್ಗೆ ಚರ್ಚಿಸಲು ಜಿಲ್ಲಾಧಿಕಾರಿ ಸಭಾಂಗಣದಲ್ಲಿ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಸಚಿವ ಮಧು ಬಂಗಾರಪ್ಪ ವಿಡಿಯೋ ಸಂವಾದದ ಮೂಲಕ ಬೃಹತ್ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್ ಮತ್ತು ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರ ಜೊತೆ ವಿಡಿಯೋ ಸಂವಾದ ನಡೆಸಿದರು.

ಭದ್ರಾವತಿ ಶಾಸಕ ಹಾಗೂ ಕರ್ನಾಟಕ ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಸಂಗಮೇಶ್ ಉಪಸ್ಥಿತರಿದ್ದರು.

ವೀಡಿಯೋ ಸಂವಾದ ಕಾರ್ಯಕ್ರಮದಲ್ಲಿ ಎಂಪಿಎಂ ಕಾರ್ಖಾನೆಯನ್ನು ಪುನಶ್ಚೇತನ ಗೊಳಿಸುವ ಬಗ್ಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳುವ ಮುಖಾಂತರ ಇಲ್ಲಿಯ ಸಾರ್ವಜನಿಕರ ಹಾಗೂ ನೌಕರರ ಆರ್ಥಿಕ ಶಕ್ತಿಯನ್ನು ವೃದ್ಧಿಗೊಳಿಸಲು ಸಹಾಯ ಮಾಡಬೇಕೆಂದು ಕೋರಿದರು.

ಎಂಪಿಎಂ ಕಾರ್ಖಾನೆಯ ವ್ಯಾಪ್ತಿಯಲ್ಲಿ ಸುಮಾರು 20,000 ಹೆಕ್ಟೇರ್ ಭೂಮಿ ಗುತ್ತಿಗೆ ಆಧಾರದಲ್ಲಿದ್ದು ಈ ಪ್ರದೇಶದಲ್ಲಿ ನೀಲಗಿರಿ ಮರಗಳನ್ನು ಬೆಳೆಸಿದಲ್ಲಿ ಕಾರ್ಖಾನೆಗೆ ಬೇಕಾಗುವ ಮೂಲಾ ಕಚ್ಚಾ ವಸ್ತುವಿನ ಕೊರತೆ ನೀಗಲು ಸಾಧ್ಯ ಎಂದು ಎಂಪಿಎಂ ಅಧಿಕಾರಿಗಳು ತಿಳಿಸಿದರು.

ಆದರೆ,ನೀಲಗಿರಿ ಮರಗಳನ್ನು ಬೆಳೆಸುವುದಕ್ಕೆ ನಿಷೇಧ ಇರುವುದರಿಂದ ಸದರಿ ನಿಷೇಧವನ್ನು ತೆರವುಗೊಳಿಸುವ ಬಗ್ಗೆ ಒಂದು ತಜ್ಞರ ಸಮಿತಿಯನ್ನು ರಚಿಸಿ ಅವರಿಂದ ವರದಿ ಪಡೆದು ಮುಂದಿನ ಕ್ರಮ ವಹಿಸುವ ಬಗ್ಗೆ ತೀರ್ಮಾನಿಸಲಾಯಿತು.

Madhu Bangarappa ವಿಡಿಯೋ ಸಂವಾದದಲ್ಲಿ ಶಿವಮೊಗ್ಗ ಜಿಲ್ಲಾಧಿಕಾರಿ ಗುರುದತ್ ಹೆಗ್ಗಡೆ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಸ್ನೇಹಲ್ ಲೋಕಂಡೆ, ಉಪ ಅರಣ್ಯ ಸಂರಕ್ಷಣಾಧಿಕಾರಿ ಶಿವಶಂಕರ್ ಹಾಗೂ ಎಂಪಿಎಂ ನ ಅಧಿಕಾರಿ ವರ್ಗದವರು ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Department of Posts ಗ್ರಾಮೀಣ ಅಂಚೆ ಸೇವಕರ ನೇಮಕಾತಿಗೆ ಅರ್ಜಿ ಆಹ್ವಾನ

Department of Posts ಅಂಚೆ ಇಲಾಖೆ ವತಿಯಿಂದ  ಶಾಖಾ ಅಂಚೆಪಾಲಕ, ಸಹಾಯಕ...

B.Y. Vijayendra ವಿಕಸಿತ ಭಾರತದತ್ತ ದೃಢ ಹೆಜ್ಜೆಯ ಬಜೆಟ್- ಬಿ.ವೈ.ವಿಜಯೇಂದ್ರ

B.Y. Vijayendra ದೇಶದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು...

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...