Thursday, March 19, 2026
Thursday, March 19, 2026

BJP Karnataka Raita Morcha ಸಾಗುವಳಿ ಪತ್ರಕ್ಕೆ ಅರ್ಜಿಹಾಕಲು ಅವಕಾಶ ಮಾಡಿಕೊಡಲು ಬಿಜೆಪಿ ಜಿಲ್ಲ ರೈತ ಮೋರ್ಚಾ ಮನವಿ

Date:

BJP Karnataka Raita Morcha 20-30 ವರ್ಷಗಳಿಂದ ಸರ್ಕಾರಿ ಜಾಗಗಳಲ್ಲಿ ಗೋಮಾಳಗಳಲ್ಲಿ ಸಾಗುವಳಿ ಮಾಡಿಕೊಂಡು ಬರುತ್ತಿರುವ ಹಾಗೂ ತೋಟಗಳನ್ನು ಕಟ್ಟಿಕೊಂಡಿರುವ ಮಲೆನಾಡಿನ ರೈತರಿಗೆ ಇಂದಿಗೂ ಸಹ ಸಾಗುವಳಿ ಪತ್ರ ಸಿಕ್ಕಿಲ್ಲ.

ಸಾಗುವಳಿ ಪತ್ರ ಪಡೆಯಲು ನಮೂನೆ ,57ರ ಅರ್ಜಿ ಹಾಕಲು ಅವಕಾಶ ಮಾಡಿಕೊಡಬೇಕೆಂದು ಜಿಲ್ಲಾ ಬಿಜೆಪಿ ರೈತ ಮೋರ್ಚಾ ಕೃಷಿ ಸಚಿವ ಕೃಷ್ಣಭೈರೆಗೌಡರಿಗೆ ಜಿಲ್ಲಾಧಿಕಾರಿ ಮೂಲಕ ಮನವಿ ಮಾಡಿದೆ.

15ವರ್ಷಕ್ಕೂ ಮೇಲ್ಪಟ್ಟು ಉಳುಮೆ ಮಾಡುತ್ತಿರುವವರಿಗೆ ಮಾತ್ರ ಸಕ್ರಮಕ್ಕೆ ಅವಕಾವಿದೆ ಎಂದು ರಾಜ್ಯ ಸರ್ಕಾರ ತಿಳಿಸಿದೆ. ಅರ್ಜಿಯನ್ನು ತಂತ್ರಜ್ಞಾನ ಬಳಸಿ ವಿಲೇವಾರಿ ಮಾಡುವುದಾಗಿ ತಿಳಿಸಿದ್ದೀರಿ. ಸರ್ಕಾರ ನಮೂನೆ 57ರಲ್ಲಿ ಅರ್ಜಿ ಹಾಕಲು ಅವಕಾಶ ಕೊಟ್ಟಿತ್ತು, ಆದರೆ ಆ ಸಂದರ್ಭದಲ್ಲಿ ಚುನಾವಣೆಗಳು ಹಾಗೂ ನೀತಿ ಸಂಹಿತೆಗಳು ಜಾರಿಯಲ್ಲಿ ಇದ್ದುದರಿಂದ ಸಕಾಲಕ್ಕೆ ಅಧಿಕಾರಿಗಳು ಲಭ್ಯರಿಲ್ಲದೆ ಇದ್ದುದರಿಂದ ಹಾಗೂ ಕಂಪ್ಯೂಟರ್ ಸರ್ವರ್ ನಿರಂತರ ಸಮಸ್ಯೆ ಇದ್ದುದರಿಂದ ರೈತರಿಗೆ ಅರ್ಜಿ ಹಾಕಲು ಆಗಿಲ್ಲ. ಕೂಡಲೇ ಈ ಸೌಲಭ್ಯ ಕಲ್ಪಿಸಬೇಕೆಂದು ಮನವಿಯಲ್ಲಿ ವಿವರಿಸಲಾಗಿದೆ.

ಆದ್ದರಿಂದ 15 ವರ್ಷಗಳಿಗಿಂತ ಹೆಚ್ಚಿಗೆ ವರ್ಷಗಳಿಂದ ಭೂಮಿ ಸಾಗುವಳಿ ಮಾಡುತ್ತಿರುವ ರೈತರಿಗೆ ನಮೂನೆ 57ರಲ್ಲಿ ಸಕ್ರಮಕ್ಕೆ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಟ್ಟು ಸಾಗುವಳಿ ಪತ್ರವನ್ನು ಮಾಡಿಕೊಡಬೇಕಾಗಿ ವಿನಂತಿಸಿದರು.

BJP Karnataka Raita Morcha ಬಿಜೆಪಿ ರೈತ ಮೋರ್ಚ ಜಿಲ್ಲಾಧ್ಯಕ್ಷ ಸಿದ್ದಲಿಂಗಪ್ಪ ನಿಂಬೆಗೊ0ದಿ, ರಾಜ್ಯ ರೈತ ಮೋರ್ಚ ಪ್ರಧಾನ ಕಾರ್ಯದರ್ಶಿ ಡಾ.ನವೀನ್, ಬಿಜೆಪಿ ಜಿಲ್ಲಾ ಕಾರ್ಯದರ್ಶಿ ವಿನ್ಸೆಂಟ್ ರೊಡ್ರಿಗಸ್, ಜಿಲ್ಲಾ ರೈತ ಮೋರ್ಚ ಪ್ರಧಾನ ಕಾರ್ಯದರ್ಶಿ ಕುಮಾರ್ ನಾಯ್ಡು, ಗಣೇಶ್ ಬಿಳಿಕಿ, ಆನಂದ್ ಇತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ಗೋಪಾಲ ಗೌಡರು ಶಿವಮೊಗ್ಗ ಜಿಲ್ಲೆಯನ್ನ ಸಮಾಜವಾದದ ತೊಟ್ಟಿಲನ್ನಾಗಿ ರೂಪಿಸಿದವರು- ವೈ.ಎಸ್.ವಿ.ದತ್ತ.

Shimoga News ನಗರದ ಮಥುರಾ ಪ್ಯಾರಡೈಸ್ ಸಭಾಂಗಣದಲ್ಲಿ ಮಾಜಿ ಶಾಸಕ ಹಾಗೂ...

Klive Special Article ಕೆ ಲೈವ್ ವಿಶೇಷ.” ವಿಕ್ರಮ ಮತ್ತು ಶಾಲಿವಾಹನ ಶಕಪುರುಷರು” ಒಂದು ಚಿಂತನೆ.ಲೇ: ದಿಲೀಪ್ ನಾಡಿಗ್,ಶಿವಮೊಗ್ಗ.

ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ. Klive Special Article ತೈತ್ತಿರೀಯ ಅರಣ್ಯಕದಲ್ಲಿರುವ ಶ್ಲೋಕದಂತೆ "ಕ್ವೇದಮಭ್ರಂ ನಿವಿಶತೇ...

Kote SeethaRamanjaneya Temple ಇಂದಿನಿಂದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆ

Kote SeethaRamanjaneya Temple ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ...

Women’s Day ವೃದ್ಧಾಪ್ಯದ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವಿರಲಿ- ಡಾ.ಪ್ರಿಯಾಂಕ ಚೌಹಾಣ್.

Women's Day ಜೆಸಿ ಶಿವಮೊಗ್ಗ ಚಿರಂತನದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು...