Thursday, June 18, 2026
Thursday, June 18, 2026

D. K. Shivakumar ಈಗ ಧಾರ್ಮಿಕ ದತ್ತಿ ಕಾಯ್ದೆ ಸೋಲಾಗಿರಬಹುದುಮತ್ತೆ ಮೂರುತಿಂಗಳ ನಂತರ ಅನುಮೋದನೆ ಪಡೆಯುತ್ತೇವೆ-ಡಿ.ಕೆ.ಶಿವಕುಮಾರ್

Date:

D. K. Shivakumar ವಿಧಾನಪರಿಷತ್ತಿನಲ್ಲಿ ಬಿಜೆಪಿ ಹಾಗೂ ಜೆಡಿಎಸ್ ನಿಂದ ತಿರಸ್ಕೃತಗೊಂಡಿರುವ ಹಿಂದೂ ಧಾರ್ಮಿಕ ದತ್ತಿ ವಿಧೇಯಕಕ್ಕೆ ಮೂರು ತಿಂಗಳ ನಂತರ ಮೇಲ್ಮನೆಯಲ್ಲಿ ಕಾಂಗ್ರೆಸ್ ಗೆ ಮತ್ತೆ ಬಹುಮತ ಬಂದಾಗ ಅನುಮೋದನೆ ದೊರೆಯಲಿದೆ ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಹೇಳಿದ್ದಾರೆ.

D. K. Shivakumar ಶಿವಮೊಗ್ಗದ ಅಲ್ಲಮ ಪ್ರಭು ಮೈದಾನದಲ್ಲಿ ನಡೆದ ರಾಜ್ಯ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಮಾವೇಶ ಉದ್ಘಾಟಿಸಿ ಮಾತನಾಡಿದ ಡಿಕೆ ಶಿವಕುಮಾರ್, ಅರ್ಚಕರ ಪ್ರಭಾವದಿಂದ ಭಕ್ತರು ಕಲ್ಲಿನಲ್ಲೂ ಶಿವನನ್ನು ಕಾಣುತ್ತಾರೆ. “ನಾವು ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ದತ್ತಿ ಮಸೂದೆ ಮಂಡಿಸಿದ್ದೇವು. ಸರ್ಕಾರ ಈ ಶಾಸನ ಮೂಲಕ ದೊಡ್ಡ ದೇವಾಲಯಗಳಿಂದ ಬರುವ ಆದಾಯದ ಶೇ.10 ರಷ್ಟನ್ನು ಅರ್ಚಕರಿಗೆ ಸಂಬಳ ನೀಡಲು, ವಿಮಾ ರಕ್ಷಣೆ, ಮತ್ತು ಅವರ ಮಕ್ಕಳ ಶಿಕ್ಷಣಕ್ಕೆ ಸಹಾಯ ಮಾಡಲು ಬಯಸಿತ್ತು. ಆದರೆ, ದೇವಸ್ಥಾನ ಮತ್ತು ಧರ್ಮದ ಪರ ವಾದಿಸುವ ಬಿಜೆಪಿ ಮತ್ತು ಜೆಡಿಎಸ್‌ಗಳು ಪರಿಷತ್ತಿನಲ್ಲಿ ಮಸೂದೆಯನ್ನು ಸೋಲಿಸಿದವು. ಮೂರು ತಿಂಗಳಲ್ಲಿ ಮೇಲ್ಮನೆಯಲ್ಲಿ ಬಹುಮತ ಪಡೆದು ಮಸೂದೆ ಮಂಡನೆ ಮಾಡುತ್ತೇವೆ ಎಂದು ಹೇಳಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುತ್ತಿಗೆ ಆಧಾರದ ಮೇಲೆ ಪಶುವೈದ್ಯರ ಒಂದು ಹುದ್ದೆಗೆ ನೇಮಕಾತಿ ಪ್ರಕ್ರಿಯೆ

ಶಿವಮೊಗ್ಗ ವನ್ಯಜೀವಿ ವಿಭಾಗ ವ್ಯಾಪ್ತಿಯಲ್ಲಿನ ಸಕ್ರೆಬೈಲು ಆನೆ ಬಿಡಾರದ ಇಲಾಖಾ ಆನೆಗಳಿಗೆ...

Klive Special Article ನಿರ್ಲಕ್ಷ್ಯ ಮಾಡದ ನಿಶ್ಶಬ್ದ ಕಾಯಿಲೆ, ಕಿಡ್ನಿ ಕ್ಯಾನ್ಸರ್- ಡಾ.ಯು‌.ಎಸ್.ಕಾರ್ತಿಕ್

Klive Special Article ಕಿಡ್ನಿ ಕ್ಯಾನ್ಸರ್ : ನೀವು ನಿರ್ಲಕ್ಷಿಸಬಾರದ ನಿಶ್ಯಬ್ದ...

K.S. Eshwarappa ಮನಸ್ಸು ಬಿಜೆಪಿ: ದೇಹ ಮಾತ್ರ ಹೊರಗೆ : ಕೆ.ಎಸ್.ಈಶ್ವರಪ್ಪ

K.S. Eshwarappa ಪಕ್ಷದ ಬೆಳವಣಿಗೆ ಮತ್ತು ಶುದ್ಧೀಕರಣಕ್ಕೆ ಆಗ್ರಹಿಸಿ ಬಿಜೆಪಿಯಿಂದ ಹೊರ...