Thursday, June 18, 2026
Thursday, June 18, 2026

Monkey Fever ಮಂಗನ ಕಾಯಿಲೆ: ಉತ್ತರಕನ್ನಡ ಜಿಲ್ಲೆಯಲ್ಲಿ‌ ವೃದ್ಧ ಮಹಿಳೆ ಸಾವು

Date:

Monkey Fever ಮಲೆನಾಡಿಗರನ್ನು ಕಂಗೆಡಿಸಿರುವ ಮಂಗನ ಕಾಯಿಲೆಗೆ (ಕ್ಯಾಸನೂರು ಫಾರೆಸ್ಟ್ ಡಿಸೀಸ್-ಕೆಎಫ್‌ಡಿ) ಉತ್ತರ ಕನ್ನಡ ಜಿಲ್ಲೆಯ ವೃದ್ಧೆಯೊಬ್ಬರು ಸಾವಿಗೀಡಾಗಿದ್ದು, ರಾಜ್ಯದಲ್ಲಿ ಈ ಕಾಯಿಲೆಯಿಂದ ಮೃತಪಟ್ಟವರ ಸಂಖ್ಯೆ ನಾಲ್ಕಕ್ಕೆ ಏರಿಕೆಯಾಗಿದೆ.
ಮೃತರನ್ನು ಸಿದ್ದಾಪುರ ತಾಲ್ಲೂಕಿನ ಕೊರ್ಲಕೈ ಗ್ರಾಮದ 60 ವರ್ಷದ ಮಹಿಳೆ ಎಂದು ಗುರುತಿಸಲಾಗಿದೆ. ಸಂತ್ರಸ್ತೆ ಮೂರು ದಿನಗಳಿಂದ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಭಾನುವಾರ ರಾತ್ರಿ ಮೃತಪಟ್ಟಿದ್ದಾರೆ.
ಅವರಿಗೆ 20 ದಿನಗಳ ಹಿಂದೆ ಮಂಗನ ಜ್ವರ ಕಾಣಿಸಿಕೊಂಡಿದ್ದು, ತೀವ್ರ ಜ್ವರದಿಂದ ಬಳಲುತ್ತಿದ್ದರು. ಸಿದ್ದಾಪುರ ತಾಲ್ಲೂಕಿನಲ್ಲಿಯೇ ಮಂಗನ ಕಾಯಿಲೆ ಪ್ರಕರಣಗಳ ಸಂಖ್ಯೆ 43ಕ್ಕೆ ಏರಿಕೆಯಾಗಿದೆ.
103 ಸಕ್ರಿಯ ಮಂಗನ ಕಾಯಿಲೆ ಪ್ರಕರಣಗಳನ್ನು ಹೊಂದಿರುವ ರಾಜ್ಯದಲ್ಲಿ ಇದುವರೆಗೆ ಮೂವರು ಸಾವಿಗೀಡಾಗಿದ್ದಾರೆ. Monkey Fever ಚಿಕ್ಕಮಗಳೂರು, ಉತ್ತರ ಕನ್ನಡ ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ತಲಾ ಒಬ್ಬರು ರೋಗದಿಂದ ಮೃತಪಟ್ಟಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ನಿರ್ಲಕ್ಷ್ಯ ಮಾಡದ ನಿಶ್ಶಬ್ದ ಕಾಯಿಲೆ, ಕಿಡ್ನಿ ಕ್ಯಾನ್ಸರ್- ಡಾ.ಯು‌.ಎಸ್.ಕಾರ್ತಿಕ್

Klive Special Article ಕಿಡ್ನಿ ಕ್ಯಾನ್ಸರ್ : ನೀವು ನಿರ್ಲಕ್ಷಿಸಬಾರದ ನಿಶ್ಯಬ್ದ...

K.S. Eshwarappa ಮನಸ್ಸು ಬಿಜೆಪಿ: ದೇಹ ಮಾತ್ರ ಹೊರಗೆ : ಕೆ.ಎಸ್.ಈಶ್ವರಪ್ಪ

K.S. Eshwarappa ಪಕ್ಷದ ಬೆಳವಣಿಗೆ ಮತ್ತು ಶುದ್ಧೀಕರಣಕ್ಕೆ ಆಗ್ರಹಿಸಿ ಬಿಜೆಪಿಯಿಂದ ಹೊರ...

ಸಮಾನತೆ, ಸ್ವಾವಲಂಬನೆ ಸಾಧಿಸುವಲ್ಲಿ ಸಹಕಾರ ಸಂಘಗಳ ಪಾತ್ರ ಅಪಾರ : ಶ್ರೀರಂಭಾಪುರಿಶ್ರೀ

ಸಮಾನತೆ, ಸ್ವಾವಲಂಬನೆ ಸಾಧನೆಯಲ್ಲಿ ಸಹಕಾರ ಸಂಘಗಳ ಪಾತ್ರ ಮಹತ್ವವಾದದು. ಅಭಿವೃದ್ಧಿಯನ್ನು ಸಾಧಿಸಲು...