Shivaram Hebbar ಮಂಗಳವಾರ ಕರ್ನಾಟಕದಿಂದ ನಾಲ್ಕು ಸ್ಥಾನಗಳಿಗೆ ರಾಜ್ಯಸಭಾ ಚುನಾವಣೆ ನಡೆಯಲಿದ್ದು, ಜೆಡಿಎಸ್-ಬಿಜೆಪಿ ಅಭ್ಯರ್ಥಿ ಕುಪೇಂದ್ರ ರೆಡ್ಡಿ ಪರ ಮತ ಹಾಕಲು ನಿರಾಕರಿಸಿದ ಮಾಜಿ ಸಚಿವ ಹಾಗೂ ಯಲ್ಲಾಪುರ ಶಾಸಕ ಶಿವರಾಮ ಹೆಬ್ಬಾರ್ ಮೇಲೆ ಎಲ್ಲರ ಗಮನ ಕೇಂದ್ರೀಕೃತವಾಗಿದೆ.
ಪಕ್ಷದ ಅಧ್ಯಕ್ಷ ಜೆಪಿ ನಡ್ಡಾ ಮತ್ತು ಗೃಹ ಸಚಿವ ಅಮಿತ್ ಶಾ ಅವರು ರಾಜ್ಯದಲ್ಲಿನ ಬೆಳವಣಿಗೆಗಳ ಮೇಲೆ ನಿಗಾ ಇಟ್ಟಿದ್ದು, ಅಡ್ಡ ಮತದಾನ ಮಾಡಬಾರದು ಎಂದು ಬಿಜೆಪಿ ಹೈಕಮಾಂಡ್ ಸೂಚನೆ ನೀಡಿದ ಹಿನ್ನೆಲೆಯಲ್ಲಿ, ಪಕ್ಷದ ಮೂಲಗಳು ಹೆಬ್ಬಾರ್ ಅವರೊಂದಿಗೆ ಸಂಪರ್ಕದಲ್ಲಿವೆ. ಹೆಬ್ಬಾರ್ ಅವರು ಕಾಂಗ್ರೆಸ್ ನಾಯಕ ಡಿಕೆ ಶಿವಕುಮಾರ್ ಅವರೊಂದಿಗೆ ಸಂಪರ್ಕದಲ್ಲಿದ್ದು, ಚುನಾವಣೆಯಲ್ಲಿ ಅಡ್ಡ ಮತದಾನ ಮಾಡುವ ಸಾಧ್ಯತೆ ಇದೆ ಎನ್ನಲಾಗಿದೆ.
ಕೇಸರಿ ಪಕ್ಷವು ತನ್ನ ಅಭ್ಯರ್ಥಿಗಳನ್ನು ಗೆಲ್ಲಿಸುವುದರ ಜೊತೆಗೆ ಜೆಡಿಎಸ್‌ನ ಐವರು ರಾಜ್ಯಸಭಾ ಸದಸ್ಯರ ಗೆಲುವನ್ನು ಖಚಿತಪಡಿಸಿಕೊಳ್ಳಲು ನಿರ್ಧರಿಸಿದೆ. ಅದಕ್ಕೆ ಅಡ್ಡಿಯಾಗಿರುವುದು ಯಶವಂತಪುರ ಶಾಸಕ ಎಸ್‌ಟಿ ಸೋಮಶೇಖರ್ ಮತ್ತು ಶಿವರಾಮ್ ಹೆಬ್ಬಾರ್ ಅವರು ಅಡ್ಡ ಮತದಾನ ಮಾಡುವ ಶಂಕೆ ವ್ಯಕ್ತವಾಗಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.
ಶಾಸಕ ಶಿವರಾಮ್ ಹೆಬ್ಬಾರ್
ರಾಜ್ಯಸಭೆ ಚುನಾವಣೆಗೆ ಮುನ್ನ ಕಾಂಗ್ರೆಸ್ ಶಾಸಕರು ರೆಸಾರ್ಟ್‌ಗೆ ಸ್ಥಳಾಂತರ: ಬಿಜೆಪಿ ಟೀಕೆ
ಜೆಡಿಎಸ್ ಅಭ್ಯರ್ಥಿಗೆ ಬೆಂಬಲ ನೀಡುವುದಿಲ್ಲ ಎಂದು ಹೆಬ್ಬಾರ್ ಅವರು ರಾಜ್ಯದ ಪಕ್ಷದ ವರಿಷ್ಠರಿಗೆ ಪರೋಕ್ಷವಾಗಿ ಹೇಳಿದ್ದಾರೆ ಎನ್ನಲಾಗಿದ್ದು, ಇದನ್ನು ಪರಿಗಣಿಸಿ ಬಿಜೆಪಿಯ ಮತ್ತೋರ್ವ ಅಭ್ಯರ್ಥಿ ನಾರಾಯಣ ಬಂಡಿಗೆ ಅವರಿಗೆ ಮತ ಹಾಕುವಂತೆ ಪಕ್ಷ ತಿಳಿಸಿದೆ ಎನ್ನಲಾಗಿದೆ.
Shivaram Hebbar ಆದಾಗ್ಯೂ, ಅವರು ಅಡ್ಡ ಮತದಾನ ಮಾಡಬಹುದು ಎಂದೇ ಪಕ್ಷ ಭಾವಿಸಿದ್ದು, ಅವರ ಮೇಲೆ ನಿಗಾ ವಹಿಸಿದೆ. ಯಾವುದೇ ರೀತಿಯ ಅಡ್ಡ ಮತದಾನ ನಡೆಯುವುದನ್ನು ತಡೆಯಲು ಬಿಜೆಪಿ ಮೂರು ತಂಡಗಳನ್ನು ರಚಿಸಿದ್ದು, ಮತದಾನದ ದಿನದ ಮೇಲೆ ನಿಗಾ ಇರಿಸಿದೆ.
Date: