Saturday, December 6, 2025
Saturday, December 6, 2025

Bangladesh ಬಾಂಗ್ಲಾದೇಶ್ ಢಾಕಾದಲ್ಲಿ ಅಗ್ನಿ ಅವಘಡ ಕನಿಷ್ಠ 44 ದುರ್ಮರಣ

Date:

Bangladesh ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿ 6 ಅಂತಸ್ತಿನ ಕಟ್ಟಡದಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದೆ. ಘಟನೆಯಲ್ಲಿ ಕನಿಷ್ಠ 44 ಮಂದಿ ಮೃತಪಟ್ಟು ಹಲವರಿಗೆ ಗಾಯವಾಗಿರುವ ಘಟನೆ ಗುರುವಾರ ತಡರಾತ್ರಿ ನಡೆದಿದೆ.

ಢಾಕಾ ಬೈಲಿ ರಸ್ತೆಯಲ್ಲಿರುವ ಬಿರಿಯಾನಿ ರೆಸ್ಟೋರೆಂಟ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ನಂತರ ಬೆಂಕಿಯ ಕೆನ್ನಾಲಿಗೆ ಇತರ ಮಹಡಿಗಳಿಗೂ ವ್ಯಾಪಿಸಿದೆ. ಕೂಡಲೇ ಸ್ಥಳಕ್ಕೆ ದೌಡಾಯಿಸಿದ ಅಗ್ನಿಶಾಮಕ ದಳದ ಸಿಬ್ಬಂದಿಗಳು ಸತತ ಎರಡು ಗಂಟೆ ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸಿದರು.

ಘಟನೆ ನಡೆದ ಪ್ರದೇಶದಲ್ಲಿ ಅನೇಕ ಹೋಟೆಲ್ಗಳು, ಬಟ್ಟೆ ಅಂಗಡಿಗಳು ಮತ್ತು ಮೊಬೈಲ್ ಫೋನ್ ಮಾರಾಟ ಅಂಗಡಿಗಳಿವೆ.

ಸ್ಥಳದಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ 42 ಮಂದಿ ಸೇರಿದಂತೆ 75 ಮಂದಿಯನ್ನು 7 ಅಂತಸ್ತಿನ ಕಟ್ಟಡದಿಂದ ಹೊರ ತೆಗೆಯಲಾಗಿದ್ದು, ಕೆಲವ ಸ್ಥಿತಿ ಗಂಭೀರವಾಗಿದೆ. ಸಾವಿನ ಸಂಖ್ಯೆ ಮತ್ತಷ್ಟು ಏರಿಕೆಯಾಗುವು ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ.

ರೆಸ್ಟೋರೆಂಟ್‌ನಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟದಿಂದಾಗಿ ಅವಘಟ ಸಂಭವಿಸಿದೆ. ಅಗ್ನಿಶಾಮಕ ದಳದ ಅಧಿಕಾರಿಗಳು ಹೇಳಿದ್ದಾರೆ.

Bangladesh ಮೆಟ್ಟಿಲುಗಳ ಮೇಲೆ ಹೊಗೆ ಬರುತ್ತಿತ್ತು. ಸಾಕಷ್ಟು ಜನರು ಮೇಲೆ ಓಡಿ ಬರುತ್ತಿದ್ದರು, ಕೆಲವರು ಕಟ್ಟಡಿಂದ ಇಳಿಯರು ನೀರಿನ ಪೈಪ್ ಗಳನ್ನು ಬಳಸುತ್ತಿದ್ದರು. ಕೆಲವರು ಮಹಡಿಯಿಂದ ಕೆಳಗೆ ಜಿಗಿದು ಗಾಯಗೊಂಡಿದ್ದರು ಎಂದು ರೆಸ್ಟೋರೆಂಟ್ ಮ್ಯಾನೇಜರ್ ಹೇಳಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಡಿಸೆಂಬರ್ 6. ಸಾಮಾಜಿಕ ಭದ್ರತಾ ಸೌಲಭ್ಯ ವಿಸ್ತರಣೆ ಅರಿವು ಕಾರ್ಯಾಗಾರ

Shivamogga District Chamber of Commerce and Industry ಶಿವಮೊಗ್ಗ ಜಿಲ್ಲಾ...

Madhu Bangarappa ಹವಾಮಾನಾಧಾರಿತಬೆಳೆವಿಮೆ ಮೊತ್ತ ಪಾವತಿ ನ್ಯೂನತೆ ಸರಿಪಡಿಸಲು ಶೀಘ್ರ ಕ್ರಮ- ಮಧು ಬಂಗಾರಪ್ಪ

Madhu Bangarappa ಅತಿವೃಷ್ಟಿ, ಅನಾವೃಷ್ಟಿ, ತಾಪಮಾನದ ಏರಿಳಿತದಂತಹ ಹವಾಮಾನ ವೈಪರಿತ್ಯಗಳಿಂದ ತೋಟಗಾರಿಕೆ...

DC Shivamogga ಕೆಎಸ್ಎಫ್ ಸಿ ಎಸ್ ಸಿ ಮಳಿಗೆಗಳಲ್ಲಿ ಸಗಟು ಭತ್ತ ಖರೀದಿ ವ್ಯವಸ್ಥೆ- ಗುರುದತ್ತ ಹೆಗಡೆ

DC Shivamogga 2025-26 ನೇ ಸಾಲಿನ ಮುಂಗಾರು ಋತುವಿನಲ್ಲಿ ಕನಿಷ್ಟ ಬೆಂಬಲ...