Thursday, August 13, 2026
Thursday, August 13, 2026

D. K. Shivakumar ಬೆಂಗಳೂರಿನ ಕೊಳವೆ ಬಾವಿಗಳ ನೀರುಪೂರೈಕೆ ಟ್ಯಾಂಕರ್ ಗಳು ಸರ್ಕಾರದ ಸುಪರ್ದಿಗೆ- ಡಿ. ಕೆ.ಶಿವಕುಮಾರ್

Date:

D. K. Shivakumar ಬೆಂಗಳೂರಿನ ನೀರಿನ ಅಭಾವ ನೀಗಿಸಲು ಕೊಳವೆ ಬಾವಿಗಳಿಂದ ನೀರು ಪೂರೈಸುವ ಟ್ಯಾಂಕರ್‌ಗಳನ್ನು ಸರ್ಕಾರದ ಸುಪರ್ದಿಗೆ ತೆಗೆದುಕೊಳ್ಳಲಾಗುವುದು ಎಂದು ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆಗಿರುವ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

ಸದಾಶಿವನಗರದ ಬಳಿ ಮಾಧ್ಯಮಗಳಿಗೆ ಮಾಹಿತಿ ನೀಡಿದ ಅವರು “ಬೆಂಗಳೂರಿನಲ್ಲಿ ಕುಡಿಯುವ ನೀರಿಗೆ ಆಹಾಕಾರ ಎದುರಾಗಿದೆ. ಪ್ರತಿನಿತ್ಯ ಬಿಡಬ್ಲ್ಯೂಎಸ್ಎಸ್‌ಬಿ ಹಾಗೂ ಪಾಲಿಕೆ ಅಧಿಕಾರಿಗಳು ಸಭೆ ನಡೆಸುತ್ತಿದ್ದಾರೆ. ಕುಡಿಯುವ ನೀರಿನ ದಂಧೆ ತಡೆಯಲು ಕೊಳವೆ ಬಾವಿ ಹಾಗೂ ಅವುಗಳಿಂದ ನೀರು ಪೂರೈಕೆ ಮಾಡುವ ಟ್ಯಾಂಕರ್‌ಗಳು ಮಾ.7ರ ಒಳಗಾಗಿ ನೋಂದಣಿ ಮಾಡಿಕೊಳ್ಳುವಂತೆ ಸೂಚನೆ ನೀಡಿದ್ದೇವೆ ಎಂದರು.

ಕೊಳವೆ ಬಾವಿಗಳ ಮೂಲಕ ಬೆಂಗಳೂರಿನ ಕುಡಿಯುವ ನೀರಿನ ಅಭಾವ ನೀಗಿಸುತ್ತೇವೆ. ಈ ವಿಚಾರವಾಗಿ ಸೋಮವಾರ ಮಧ್ಯಾಹ್ನ 12 ಗಂಟೆಗೆ ಸಭೆ ಕರೆಯಲಾಗಿದೆ. ನನ್ನ ಇಲಾಖೆಯ ಅನುದಾನದಿಂದ ಬೆಂಗಳೂರಿನ ಎಲ್ಲಾ ಕ್ಷೇತ್ರಗಳ ಕುಡಿಯುವ ನೀರಿನ ಪೂರೈಕೆಗೆ ತಲಾ 10 ಕೋಟಿ ರೂ. ನೀಡಲಾಗಿದೆ ಎಂದು ಮಾಹಿತಿ ನೀಡಿದರು.

D. K. Shivakumar ಬೆಂಗಳೂರು ನಗರದ ಅನೇಕ ಪ್ರದೇಶಗಳಲ್ಲಿ ನೀರಿನ ಸಮಸ್ಯೆ ಉಂಟಾಗಿದೆ. ಬೋರ್‌ವೆಲ್‌ಗಳು ಬತ್ತಿ ಹೋಗಿ ಜನರು ಸಂಕಷ್ಟಪಡುವಂತಾಗಿದೆ. ಇದನ್ನೇ ಲಾಭ ಮಾಡಿಕೊಂಡಿರುವ ನೀರು ಪೂರೈಕೆದಾರರು ಟ್ಯಾಂಕರ್‌ಗಳ ಮೂಲಕ ನೀರು ಸರಬರಾಜು ಮಾಡಿ ಜನರಿಂದ ಹೆಚ್ಚಿನ ಹಣ ಪೀಕುತ್ತಿರುವ ಆರೋಪ ಕೇಳಿ ಬಂದಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive special Article ಆಧ್ಯಾತ್ಮದ ಆನಂದ ಹಂಚಿದ ದಾವಣಗೆರೆಯ ಶ್ರೀಶಿವಾನಂದ ತೀರ್ಥರು ...

"ಅಧ್ಯಾತ್ಮಾನಂದ ನೀಡುತ್ತಿದ್ದ ದಾವಣಗೆರೆಯ ಶ್ರೀ ಶಿವಾನಂದ ತೀರ್ಥರು" ( ಅವರ ಜಯಂತ್ಯೋತ್ಸವ ತನ್ನಿಮಿತ್ತಈವಿಶೇಷಲೇಖನ) -Klive...

Kuvempu University ಆಗಸ್ಟ್ 13 & 14. ರಂದು ಕುವೆಂಪು ವಿವಿಯ ಸ್ನಾತಕೋತ್ತರ ಪದವಿಗಳಿಗೆ ಪ್ರವೇಶಾತಿ

2026-27ನೇ ಸಾಲಿಗೆ ಕುವೆಂಪು ವಿಶ್ವವಿದ್ಯಾಲಯದ ಜ್ಞಾನ ಸಹ್ಯಾದ್ರಿ ಕ್ಯಾಂಪಸ್, ಮತ್ತು ವಿವಿ...