Wednesday, August 12, 2026
Wednesday, August 12, 2026

KKSRTC ಮೃತರ ಕುಟುಂಬಕ್ಕೆ ಪರಿಹಾರ ನೀಡದ ವಿಜಯನಗರ ರಾಜ್ಯ ಸಾರಿಗೆ ಸಂಸ್ಥೆ ಬಸ್ ಜಫ್ತಿ ಮಾಡಿಸಿದ ನ್ಯಾಯಾಲಯ

Date:

KKSRTC ಹೊಸಪೇಟೆಯ ಜೆಎಂಎಫ್‌ಸಿ ನ್ಯಾಯಾಲಯದ ಆವರಣಕ್ಕೆ ಕಲ್ಯಾಣ ಕರ್ನಾಟಕ ಸಾರಿಗೆ ಸಂಸ್ಥೆ (ಕೆಕೆಎಸ್‌ಆರ್‌ಟಿಸಿ ) ಬಸ್ ಬಂದು ನಿಂತುಕೊಂಡಿತ್ತು. ನ್ಯಾಯಾಲಯದ ಒಂದಷ್ಟು ಅಧಿಕಾರಿಗಳು, ಪೊಲೀಸರೂ ಜತೆಗಿದ್ದ ಕಾರಣ, ಆ ಬಸ್ ನಂತರ ಮುಂದಕ್ಕೆ ಚಲಿಸಲಿಲ್ಲ. ಅಪಘಾತ ಸಂತ್ರಸ್ತರ ಕುಟುಂಬಕ್ಕೆ ಪರಿಹಾರ ನೀಡಿಲ್ಲ ಎಂಬ ಕಾರಣಕ್ಕೆ ಆ ಬಸ್ ಅನ್ನು ಜಪ್ತಿ ಮಾಡಲಾಗಿತ್ತು.
ಹೌದು, ಅಪಘಾತ ಪ್ರಕರಣವೊಂದಕ್ಕೆ ಸಂಬಂಧಿಸಿ ಮೃತರ ಕುಟುಂಬಸ್ಥರಿಗೆ ಪರಿಹಾರ ನೀಡುವಲ್ಲಿ ವಿಳಂಬ ಮಾಡುತ್ತಿರುವ ಕಾರಣ, ಕಲ್ಯಾಣ ಕರ್ನಾಟಕ ಸಾರಿಗೆ ಸಂಸ್ಥೆಯ ಬಸ್ ಅನ್ನು ಹೊಸಪೇಟೆ ಜೆಎಂಎಫ್‌ಸಿ ಕೋರ್ಟ್ ಶುಕ್ರವಾರ ಜಪ್ತಿ ಮಾಡಿದೆ. ನಾಲ್ಕು ವರ್ಷ ಹಿಂದಿನ ಅಪಘಾತ ಪ್ರಕರಣ ಇದು. ಕೇಸ್ ವಿಚಾರಣೆ ಬಳಿಕ ಮೃತರ ಕುಟುಂಬಗಳಿಗೆ ಪರಿಹಾರ ನೀಡಬೇಕು ಎಂದು ಕೋರ್ಟ್ ಆದೇಶಿಸಿತ್ತು. ಆದರೆ ಅದನ್ನು ನಿಗಮ ಪಾಲಿಸಿರಲಿಲ್ಲ.
ಹೊಸಪೇಟೆ ವ್ಯಾಪ್ತಿಯಲ್ಲಿ ಕಲ್ಯಾಣ ಕರ್ನಾಟಕ ಸಾರಿಗೆ ಸಂಸ್ಥೆಯ ಬಸ್ ೨೦೨೦ರಲ್ಲಿ ಅಪಘಾತಕ್ಕೆ ಈಡಾಗಿತ್ತು. ಆ ಅಪಘಾತದಲ್ಲಿ ಟಿಬಿ ಡ್ಯಾಂ ನಿವಾಸಿಗಳಾದ ವಸಂತ ಕುಮಾರ್ ಮತ್ತು ವಿಜಯಾ ಎಂಬುವವರು ಮೃತಪಟ್ಟಿದ್ದರು. ಈ ಕುರಿತು ಕೇಸ್ ದಾಖಲಾಗಿತ್ತು.
ಈ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯ ೨೦೨೩ರಲ್ಲಿ ಮೃತರ ಕುಟುಂಬದವರಿಗೆ ಅನುಕ್ರಮವಾಗಿ ೧೫ ಲಕ್ಷ ರೂಪಾಯಿ ಮತ್ತು ೨೧ ಲಕ್ಷ ರೂಪಾಯಿ ಪರಿಹಾರ ನೀಡಬೇಕು ಎಂದು ಕಲ್ಯಾಣ ಕರ್ನಾಟಕ ಸಾರಿಗೆ ಸಂಸ್ಥೆಗೆ ಆದೇಶ ನೀಡಿತ್ತು. ಆದರೆ ಕೋರ್ಟ್ KKSRTC ಆದೇಶವನ್ನು ಕಲ್ಯಾಣ ಕರ್ನಾಟಕ ಸಾರಿಗೆ ಸಂಸ್ಥೆ ಪಾಲಿಸಲಿಲ್ಲ. ಈ ವಿಚಾರವಾಗಿ ಕಲ್ಯಾಣ ಕರ್ನಾಟಕ ಸಾರಿಗೆ ಸಂಸ್ಥೆಯ ಗಮನಸೆಳೆದರೂ ನಿರ್ಲಕ್ಷಿಸಿತ್ತು. ಈ ಹಿನ್ನೆಲೆಯಲ್ಲಿ ಬಸ್ ಜಫ್ತಿಗೆ ನ್ಯಾಯಾಲಯ ಆದೇಶಿಸಿತ್ತು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive special Article ಆಧ್ಯಾತ್ಮದ ಆನಂದ ಹಂಚಿದ ದಾವಣಗೆರೆಯ ಶ್ರೀಶಿವಾನಂದ ತೀರ್ಥರು ...

"ಅಧ್ಯಾತ್ಮಾನಂದ ನೀಡುತ್ತಿದ್ದ ದಾವಣಗೆರೆಯ ಶ್ರೀ ಶಿವಾನಂದ ತೀರ್ಥರು" ( ಅವರ ಜಯಂತ್ಯೋತ್ಸವ ತನ್ನಿಮಿತ್ತಈವಿಶೇಷಲೇಖನ) -Klive...

Kuvempu University ಆಗಸ್ಟ್ 13 & 14. ರಂದು ಕುವೆಂಪು ವಿವಿಯ ಸ್ನಾತಕೋತ್ತರ ಪದವಿಗಳಿಗೆ ಪ್ರವೇಶಾತಿ

2026-27ನೇ ಸಾಲಿಗೆ ಕುವೆಂಪು ವಿಶ್ವವಿದ್ಯಾಲಯದ ಜ್ಞಾನ ಸಹ್ಯಾದ್ರಿ ಕ್ಯಾಂಪಸ್, ಮತ್ತು ವಿವಿ...