Sunday, December 7, 2025
Sunday, December 7, 2025

Supreme Court ಜನಪ್ರತಿನಿಧಿಗಳ ಮತಕ್ಕಾಗಿ ಹಣಬೇಡಿಕೆ & ಸದನದಲ್ಲಿ ಹಣ ಪಡೆದು ಪ್ರಶ್ನೆ ಕೇಳಿದರೆ ಕಾನೂನಿಂದ ವಿನಾಯಿತಿ ಇಲ್ಲ-ಸುಪ್ರೀಂ ಕೋರ್ಟ್

Date:

Supreme Court  ಸಂಸತ್ತಿನಲ್ಲಿ ಭಾಷಣ ಮಾಡಲು ಮತ್ತು ಮತಗಳಿಗಾಗಿ ಲಂಚ ಪಡೆಯುವ ಪ್ರಕರಣಗಳಲ್ಲಿ ಸಂಸದರು, ಶಾಸಕರಿಗೆ ಕಾನೂನು ಕ್ರಮದಿಂದ ವಿನಾಯಿತಿ ನೀಡುವ ಈ ಹಿಂದಿನ ಆದೇಶವನ್ನು ಸುಪ್ರೀಂ ಕೋರ್ಟ್‌ನ ಏಳು ನ್ಯಾಯಾಧೀಶರ ಸಂವಿಧಾನ ಪೀಠ ರದ್ದುಗೊಳಿಸಿದೆ. ಈ ಮೂಲಕ ಮತ್ತೊಂದು ಐತಿಹಾಸಿಕ ತೀರ್ಪು ಪ್ರಕಟಿಸಿದೆ.

ಸಂಸತ್‌ನಲ್ಲಿ ಭಾಷಣ ಮಾಡಲು ಅಥವಾ ಮತದಾನ ಮಾಡಲು ಸಂಸದರು, ಶಾಸಕರು ಲಂಚ ಪಡೆಯುವ ಪ್ರಕರಣಗಳಲ್ಲಿ ಕಾನೂನು ಕ್ರಮದ ವಿನಾಯಿತಿ ಒದಗಿಸಿದ್ದ ಐವರು ಸದಸ್ಯರ ಸಂವಿಧಾನ ಪೀಠದ 1998ರ ತೀರ್ಪನ್ನು ಇಂದಿನ ತೀರ್ಪು ರದ್ದುಗೊಳಿಸಿದೆ.

“ಲಂಚ ಪಡೆಯುದನ್ನು ಸಂಸದೀಯ ಸವಲತ್ತುಗಳಿಂದ ರಕ್ಷಿಸಲಾಗಿಲ್ಲ ಮತ್ತು 1998ರ ತೀರ್ಪಿನ ವ್ಯಾಖ್ಯಾನವು ಸಂವಿಧಾನದ 105 ಮತ್ತು 194 ನೇ ವಿಧಿಗಳಿಗೆ ವಿರುದ್ಧವಾಗಿದೆ ಎಂದು ನ್ಯಾಯಾಲಯ ಹೇಳಿದೆ”. ಈ ಎರಡು ವಿಧಿಗಳು ಚುನಾಯಿತ ಪ್ರತಿನಿಧಿಗಳಿಗೆ ಭಯವಿಲ್ಲದೆ ಕೆಲಸ ಮಾಡಲು ಅನುವು ಮಾಡಿಕೊಡಲು ಕಾನೂನು ಕ್ರಮದಿಂದ ವಿನಾಯಿತಿಯನ್ನು ಒದಗಿಸುತ್ತವೆ.

Supreme Court  ಪಿವಿ ನರಸಿಂಹ ರಾವ್ ಪ್ರಕರಣದ 1998ರ ತೀರ್ಪನ್ನು ನಾವು ಒಪ್ಪುವುದಿಲ್ಲ. ಮತ ಚಲಾಯಿಸಲು ಅಥವಾ ಭಾಷಣ ಮಾಡಲು ಲಂಚ ಪಡೆಯುವ ಪ್ರಕರಣಗಳಲ್ಲಿ ಸಂಸದ, ಶಾಸಕರಿಗೆ ವಿನಾಯಿತಿ ನೀಡುವ ಈ ತೀರ್ಪು ವ್ಯಾಪಕ ಪರಿಣಾಮಗಳನ್ನು ಬೀರುತ್ತವೆ” ಎಂದು ಮುಖ್ಯನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ಹೇಳಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

CM Siddharamaiah ಕಾಂಗ್ರೆಸ್ ಕಾರ್ಯಕರ್ತ ಗಣೇಶ್ ಗೌಡ ಹತ್ಯೆ, ಸೀಎಂ ಸಿದ್ಧರಾಮಯ್ಯ ಖಂಡನೆ

CM Siddharamaiah ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ಸಖರಾಯಪಟ್ಟಣದ ಕಾಂಗ್ರೆಸ್ ಕಾರ್ಯಕರ್ತ...

ಶಾಲಾ ಬಸ್ ಅತಿವೇಗ ಚಾಲನೆ, ಬೈಕಿಗೆ ಢಿಕ್ಕಿ‌ ಸವಾರನ ಸ್ಥಿತಿ ಗಂಭೀರ

ಶಾಲಾ ಪ್ರವಾಸಕ್ಕೆ ಮಕ್ಕಳನ್ನು ಕರೆದೊಯ್ಯುತ್ತಿದ್ದ ಖಾಸಗಿ ಬಸ್ಸು ಮತ್ತು ಬೈಕ್ ನಡುವೆ...

B.Y.Raghavendra ಆರ್.ಎಸ್.ಎಸ್. ಗೃಹ ಸಂಪರ್ಕ ಅಭಿಯಾನದಲ್ಲಿ ಸಂಸದ ರಾಘವೇಂದ್ರ ಭಾಗಿ.

B.Y.Raghavendra ರಾಷ್ಟ್ರೀಯ ಸ್ವಯಂಸೇವಕ ಸಂಘದ ನೂರನೇ ವರ್ಷದ ಪ್ರಯುಕ್ತ, ಇಂದು...