Thursday, September 17, 2026
Thursday, September 17, 2026

Lok Sabha Elections ಮೋದಿಯವರು ಸೋತರೆ ಮಾತ್ರ ಹಿಂದೂ ರಾಷ್ಟ್ರ ಸಾಧ್ಯ- ಸುಬ್ರಮಣಿಯನ್ ಸ್ವಾಮಿ ಟೀಕೆ

Date:

Lok Sabha Elections ಬಿಜೆಪಿ ಮತ್ತು ಪ್ರಧಾನಿ ನರೇಂದ್ರ ಮೋದಿಯ ಪ್ರಮುಖ ಟೀಕಾಕಾರರಾಗಿರುವ ಬಿಜೆಪಿಯ ಹಿರಿಯ ನಾಯಕ ಸುಬ್ರಮಣಿಯನ್ ಸ್ವಾಮಿ, ಮೋದಿ ವಿರುದ್ಧ ಮತ್ತೆ ವಾಗ್ಧಾಳಿಯನ್ನು ನಡೆಸಿದ್ದು, ಪ್ರಧಾನಮಂತ್ರಿ ನರೇಂದ್ರ ಮೋದಿ ಸೋತರೆ ಮಾತ್ರ ಹಿಂದೂ ರಾಷ್ಟ್ರವಾಗಲು ಸಾಧ್ಯ ಎಂದು ಹೇಳಿದ್ದಾರೆ.

ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ಬಿಜೆಪಿ ನಾಯಕ ಸುಬ್ರಮಣಿಯನ್ ಸ್ವಾಮಿ, ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಬಹುಮತ ಗಳಿಸಿದರೆ, ವಾರಣಾಸಿಯಲ್ಲಿ ಮೋದಿ ಸೋತರೆ ಮಾತ್ರ ಹಿಂದೂ ರಾಷ್ಟ್ರವಾಗುವುದು ಎಂದು ಹೇಳಿದ್ದು, ಲೋಕಸಭೆ ಚುನಾವಣೆಯಲ್ಲಿ ಮೋದಿಯನ್ನು ಸೋಲಿಸುವಂತೆ ಪರೋಕ್ಷವಾಗಿ ಜನರಿಗೆ ಕರೆ ನೀಡಿದ್ದಾರೆ.

Lok Sabha Elections ಪ್ರಜ್ಞಾ ಸಿಂಗ್ ಠಾಕೂರ್‌ ಅವರಿಗೆ ಬಿಜೆಪಿ ಟಿಕೆಟ್‌ ನೀಡದೆ, ಆರೆಸ್ಸೆಸ್‌ನ್ನು ‘ಹಿಂದೂ ಭಯೋತ್ಪಾದನೆ’ ಎಂದು ಆರೋಪಿಸಿದ ಕೃಪಾ ಶಂಕರ್ ಅವರನ್ನು ಬಿಜೆಪಿ ಕಣಕ್ಕಿಳಿಸಿದೆ ಎಂದು ಎಕ್ಸ್ ಬಳಕೆದಾರರೊಬ್ಬರು ಮಾಡಿರುವ ಪೋಸ್ಟ್‌ಗೆ ಪ್ರತಿಕ್ರಿಯಿಸಿರುವ ಸುಬ್ರಮಣಿಯನ್ ಸ್ವಾಮಿ, ಮೋದಿಯನ್ನು ಸೋಲಿಸಿದರೆ ಮಾತ್ರ ಹಿಂದೂ ರಾಷ್ಟ್ರ ಮಾಡಲು ಸಾಧ್ಯ ಎಂದು ಹೇಳಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...