Thursday, September 17, 2026
Thursday, September 17, 2026

Delhi Chalo ಇಂದು ರೈತರಿಂದ ದೆಹಲಿ ಚಲೋ ಪಾದಯಾತ್ರೆ ಪುನರಾರಂಭ

Date:

Delhi Chalo ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ದೆಹಲಿ ಚಲೋ’ ಹಮ್ಮಿಕೊಂಡಿರುವ ರೈತರು, ಇಂದು(ಮಾ.6) ತಮ್ಮ ಪಾದಯಾತ್ರೆಯನ್ನು ಪುನರಾರಂಭಿಸಲಿದ್ದಾರೆ.
ಈ ಹಿನ್ನೆಲೆ ಪಂಜಾಬ್-ಹರಿಯಾಣ ಗಡಿಯಲ್ಲಿ ಪೊಲೀಸರು ಭದ್ರತೆ ಹೆಚ್ಚಿಸಿದ್ದಾರೆ.

ದೆಹಲಿ ಚಲೋ ಹೋರಾಟದ ನೇತೃತ್ವ ವಹಿಸಿರುವ ಎರಡು ಸಂಘಟನೆಗಳಾದ ಕಿಸಾನ್ ಮಜ್ದೂರ್ ಮೋರ್ಚಾ ಮತ್ತು ಸಂಯುಕ್ತ ಕಿಸಾನ್ ಮೋರ್ಚಾ (ರಾಜಕೀಯೇತರ) ದೇಶದಾದ್ಯಂತ ರೈತರಿಗೆ ಇಂದು ರಾಷ್ಟ್ರ ರಾಜಧಾನಿ ದೆಹಲಿ ತಲುಪಲು ಮಾರ್ಚ್‌ 3ರಂದು ಮನವಿ ಮಾಡಿತ್ತು.

ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ) ಕಾನೂನು ಖಾತರಿ ನೀಡುವುದು ಸೇರಿದಂತೆ ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಮುಂದಿನ ವಾರ ದೇಶದಾದ್ಯಂತ ನಾಲ್ಕು ಗಂಟೆಗಳ ಕಾಲ “ರೈಲು ತಡೆದು ಪ್ರತಿಭಟಿಸಲು” ರೈತ ಸಂಘಟನೆಗಳು ಕರೆ ನೀಡಿವೆ.

ಫೆ.13ರಂದು ದೆಹಲಿ ಚಲೋ ಪ್ರಾರಂಭಿಸಿರುವ ರೈತರನ್ನು ಪಂಜಾಬ್‌-ಹರಿಯಾಣ ರಾಜ್ಯಗಳ ನಡುವಿನ ಶಂಭು ಮತ್ತು ಖನೌರಿ ಗಡಿಯಲ್ಲಿ ಹರಿಯಾಣದ ಬಿಜೆಪಿ ಸರ್ಕಾರದ ಪೊಲೀಸರು ತಡೆದಿದ್ದಾರೆ. ಹರಿಯಾಣ ಪೊಲೀಸರು ರೈತರು ದೆಹಲಿ ಕಡೆ ತೆರಳಲು ಅವಕಾಶ ನೀಡುತ್ತಿಲ್ಲ.

Delhi Chalo ಹಾಗಾಗಿ, ಪಂಜಾಬ್ ಮತ್ತು ಹರಿಯಾಣದ ರೈತರು ಶಂಭು, ಖನೌರಿ ಗಡಿಗಳಲ್ಲಿ ಪ್ರತಿಭಟನೆ ಮುಂದುವರೆಸಿದರೆ, ಇತರ ರಾಜ್ಯಗಳ ರೈತರು ದೆಹಲಿ ತಲುಪುವಂತೆ ರೈತ ನಾಯಕರು ಕರೆ ನೀಡಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...