Sunday, August 2, 2026
Sunday, August 2, 2026

Board Exam ಸರ್ಕಾರಿ ಶಾಲೆಗಳಲ್ಲಿನ 5,8,9 & 11ನೇ ತರಗತಿ ಬೋರ್ಡ್ ಪರೀಕ್ಷೆ ರದ್ದುಗೊಳಿಸಿದ ಹೈಕೋರ್ಟ್

Date:

Board Exam 5,8,9ನೇ ತರಗತಿಗಳ ಮಕ್ಕಳಿಗೆ ರಾಜ್ಯ ಮಟ್ಟದ ಬೋರ್ಡ್ ಪರೀಕ್ಷೆ ಕುರಿತು ರಾಜ್ಯ ಸರ್ಕಾರ ಹೊರಡಿಸಿದ್ದ ಸುತ್ತೋಲೆಯನ್ನು ಹೈಕೋರ್ಟ್ ರದ್ದುಗೊಳಿಸಿದೆ.

ನ್ಯಾಯಮೂರ್ತಿ ರವಿ ಹೊಸಮನಿ ನೇತೃತ್ವದ ಹೈಕೋರ್ಟ್‌ನ ಏಕಸದಸ್ಯ ಪೀಠ ಈ ಮಹತ್ವದ ಆದೇಶವನ್ನು ನೀಡಿದ್ದು, ರಾಜ್ಯ ಪಠ್ಯಕ್ರಮದ ಶಾಲೆಗಳ 5,8,9ನೇ ತರಗತಿಗಳ ವಿದ್ಯಾರ್ಥಿಗಳಿಗೆ ಶಾಲಾ ಮಟ್ಟದ ಮೌಲ್ಯಮಾಪನದ ಬದಲಾಗಿ ರಾಜ್ಯ ಮಟ್ಟದ ಬೋರ್ಡ್ ಪರೀಕ್ಷೆ ನಡೆಸಲು ತೀರ್ಮಾನಿಸಿದ್ದ ರಾಜ್ಯ ಸರ್ಕಾರದ ಸುತ್ತೋಲೆಯನ್ನು ರದ್ದುಪಡಿಸಿದೆ.

ರಾಜ್ಯ ಸರ್ಕಾರದ ಸುತ್ತೋಲೆಯನ್ನು ಪ್ರಶ್ನಿಸಿ ಅನುದಾನ ರಹಿತ ಖಾಸಗಿ ಶಾಲೆಗಳ ಒಕ್ಕೂಟ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿ ಹೈಕೋರ್ಟ್‌ ಈ ತೀರ್ಪನ್ನು ನೀಡಿದೆ. ಹೈಕೋರ್ಟ್‌ನ ಈ ಆದೇಶದಿಂದ ಇದೇ ಮಾರ್ಚ್ 9 ರಿಂದ 11 ರವರೆಗೆ ನಿಗದಿಯಾಗಿದ್ದ ಬೋರ್ಡ್ ಪರೀಕ್ಷೆಗಳು ರದ್ದಾದಂತಾಗಿದೆ.

ರಾಜ್ಯ ಶಿಕ್ಷಣ ಇಲಾಖೆ ಶಿಕ್ಷಣ ಕಾಯ್ದೆಯಡಿ 2023ರ ಅಕ್ಟೋಬರ್ 6 ಮತ್ತು 9ರಂದು ಎರಡು ಸುತ್ತೋಲೆಗಳನ್ನು ಹೊರಡಿಸಿ ಬೋರ್ಡ್ ಮಟ್ಟದ ಪರೀಕ್ಷೆ ನಡೆಸುವುದಕ್ಕೆ ತೀರ್ಮಾನಿಸಿತ್ತು. ಇದನ್ನು ಪ್ರಶ್ನಿಸಿದ್ದ ಅರ್ಜಿದಾರರ‌ ಸಂಘ, ಶಿಕ್ಷಣ ಇಲಾಖೆ ಸುತ್ತೋಲೆ ಕೇವಲ ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳಿಗೆ ಅನ್ವಯವಾಗುತ್ತದೆ. ಇದು ಪಠ್ಯಕ್ರಮದ ಭಾಗವಲ್ಲ ಎಂದು ಕೋರ್ಟ್‌ ಗಮನಕ್ಕೆ ತಂದಿದೆ.

Board Exam ಬೋರ್ಡ್ ಪರೀಕ್ಷೆಗೆ ಕಲಿಕಾ ಚೇತರಿಕೆ ಪಠ್ಯಕ್ರಮದಿಂದ ಪ್ರಶ್ನೆಗಳನ್ನು ಸಿದ್ಧಪಡಿಸಿರುವುದಾಗಿ ಸರ್ಕಾರ ಹೇಳುತ್ತಿದೆ. ಖಾಸಗಿ ಶಾಲೆಗಳ ಪಠ್ಯಕ್ರಮ ಹಾಗೂ ಸರ್ಕಾರಿ ಶಾಲೆಗಳ ಪಠ್ಯಕ್ರಮ ವಿಭಿನ್ನವಾಗಿವೆ. ಕಲಿಕಾ ಚೇತರಿಕೆ ಪಠ್ಯಕ್ರಮದ ಪ್ರಶ್ನೆಗಳಿಗೆ ಖಾಸಗಿ ಶಾಲಾ ಮಕ್ಕಳು ಉತ್ತರಿಸುವುದು ಸುಲಭವಲ್ಲ. ಆದ್ದರಿಂದ ಎಲ್ಲಾ ಮಕ್ಕಳಿಗೂ ಅನ್ವಯವಾಗುವಂತೆ ಬೋರ್ಡ್ ಮಟ್ಟದ ಪರೀಕ್ಷೆ ನಡೆಸುವ ನಿರ್ಧಾರವನ್ನು ಹಿಂಪಡೆಯಬೇಕೆಂದು ಕೋರ್ಟ್‌ಗೆ ಮನವಿ ಸಲ್ಲಿಸಲಾಗಿತ್ತು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

D.K.Shivakumar ರಾಜಕೀಯಕ್ಕಿಂತ ರಾಜ್ಯದ ರೈತರ ಮತ್ತುಜನರ ಹಿತವೇ ಮುಖ್ಯ,- ಡಿ.ಕೆ.ಶಿವಕುಮಾರ್

D.K.Shivakumar ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಈ...

S.N. Channabasappa ಇಂದು ಪ್ರತಿಭಟನೆ ಎನ್ನುವುದು ಜಗತ್ತಿನ ವರ್ತಮಾನವಾಗಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಇಂಗ್ಲಿಷ್ ಪ್ರಾಧ್ಯಾಪಕ ಡಾ.ಸಿ. ಚನ್ನಪ್ಪ ವಾಲೆಮನೆ ಅವರ ‘ವಾಯ್ಸ್...

D.K.Sivakumar ರಾಜ್ಯದಲ್ಲಿ 70.000 ಕ್ಕೂ ಹೆಚ್ಚು ಸರ್ಕಾರಿ ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆ ಆರಂಭ – ಡಿ.ಕೆ.ಶಿವಕುಮಾರ್

D.K.Sivakumar ರಾಜ್ಯದಲ್ಲಿ ಇದೇ ಮೊದಲ ಬಾರಿಗೆ 70 ಸಾವಿರಕ್ಕೂ ಹೆಚ್ಚು ಸರ್ಕಾರಿ...