Tuesday, October 1, 2024
Tuesday, October 1, 2024

State Education Department ಕಡಸೂರು ನಾಗರಹಳ್ಳಿ ಶಾಲೆಯ ಕು.ಕವನಾಗೆ ರಾಷ್ಟ್ರೀಯ ಆವಿಷ್ಕಾರ ಅಭಿಯಾನ ಪುರಸ್ಕಾರ

Date:

State Education Department ರಾಜ್ಯ ಶಿಕ್ಷಣ ಇಲಾಖೆಯು ’ರಾಷ್ಟೀಯ ಆವಿಷ್ಕಾರ ಅಭಿಯಾನ’ ಕಾರ್ಯಕ್ರಮದಡಿಯಲ್ಲಿ ಶಾಲಾ ಹಂತದಿಂದ ರಾಜ್ಯಮಟ್ಟದವರೆಗೂ ನಡೆಸುವ ರಸಪ್ರಶ್ನೆ ಕಾರ್ಯಕ್ರಮದ ಜ್ಯೂನಿಯರ್‌ ವಿಭಾಗದಲ್ಲಿ ಕಡಸೂರು ನಾಗರಹಳ್ಳಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 6ನೇ ತರಗತಿ ಓದುತ್ತಿರುವ ಕುಮಾರಿ ಕವನ ಎಸ್‌.ಕೆ, ಬೆಂಗಳೂರಿನಲ್ಲಿ ನಡೆದ ವಿಭಾಗ ಮಟ್ಟದಲ್ಲಿ ನಡೆದ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಗಳಿಸಿ ತಾಲ್ಲೂಕಿಗೆ, ಜಿಲ್ಲೆಗೆ ಕೀರ್ತಿ ತಂದಿದ್ದಾಳೆ.

’ರಾಷ್ಟೀಯ ಆವಿಷ್ಕಾರ ಅಭಿಯಾನ’ ಕಾರ್ಯಕ್ರಮದ ರಸಪ್ರಶ್ನೆ ಸ್ಪರ್ಧೆಯಲ್ಲಿ ಭಾಗವಹಿಸಿದ್ದ ಕವನ ತಾಲ್ಲೂಕು ಮಟ್ಟದ ಆನ್ಲೈನ್ ರಸಪ್ರಶ್ನೆಯಲ್ಲಿ ಪ್ರಥಮ ಸ್ಥಾನ ಪಡೆದು, ಜಿಲ್ಲಾ ಮಟ್ಟದ ಮುಖಾಮುಖಿಯಲ್ಲಿ ಪ್ರಥಮ ಸ್ಥಾನ ಗಳಿಸಿ ಬೆಂಗಳೂರಿನಲ್ಲಿ ನಡೆಯುವ ವಿಭಾಗ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಳು. ವಿಭಾಗ ಮಟ್ಟದಲ್ಲಿ ಸ್ಪರ್ಧಿಸಿ ದ್ವಿತೀಯ ಸ್ಥಾನ ಪಡೆದ ಕವನ ಗ್ರಾಮೀಣ ಭಾಗದ ಸರ್ಕಾರಿ ಶಾಲಾ ಮಕ್ಕಳಿಗೆ ನಿಜವಾದ ಅರ್ಥದಲ್ಲಿ ಸ್ಫೂರ್ತಿಯಾಗಿದ್ದಾಳೆ.

State Education Department ಇವಳ ಸಾಧನೆಗೆ ಹೊಸನಗರ ತಾಲ್ಲೂಕು ಶಿಕ್ಷಣ ಇಲಾಖೆ ಅಧಿಕಾರಿಗಳು, ಶಾಲಾ ಸಿಬ್ಬಂದಿ ವರ್ಗ, ಎಸ್‌ಡಿಎಂಸಿ, ಗ್ರಾಮ ಪಂಚಾಯ್ತಿ ಹುಂಚ, ಪೋಷಕರು, ಅಡುಗೆ ಸಿಬ್ಬಂದಿ ವರ್ಗದವರು ಅಭಿನಂದನೆ ಸಲ್ಲಿಸಿದ್ದಾರೆ.

ಕವನ ತಾಲ್ಲೂಕು ಮಟ್ಟದಲ್ಲಿ ನಡೆದ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಗಳಿಸಿ 3,000 ರೂಪಾಯಿ, ಜಿಲ್ಲಾ ಹಂತದಲ್ಲಿ ಪ್ರಥಮ ಸ್ಥಾನ ಗಳಿಸಿ 5,000 ರೂಪಾಯಿ ಹಾಗೂ ವಿಭಾಗ ಮಟ್ಟದಲ್ಲಿ ದ್ವಿತೀಯ ಸ್ಥಾನ ಗಳಿಸಿ 5000 ರೂಪಾಯಿ ನಗದನ್ನು ಬಹುಮಾನವಾಗಿ ಗಳಿಸುವುದರೊಂದಿಗೆ, ಒಟ್ಟು ಬಹುಮಾನ ಮೊತ್ತವಾಗಿ 13,000 ರೂಪಾಯಿಗಳನ್ನು ಗೆದ್ದಿರುತ್ತಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

CM Siddharamaih ಪರಿಹಾರ ರೂಪದಲ್ಲಿ ಪಡೆದಿದ್ದ ನಿವೇಶನಗಳನ್ನ ಪತ್ನಿ ಹಿಂದಿರುಗಿಸಿದ್ದಾರೆ- ಸಿದ್ಧರಾಮಯ್ಯ

CM Siddharamaih ಮೈಸೂರಿನ ಮುಡಾ ಭೂಸ್ವಾಧೀನ ನಡೆಸದೆ ವಶಕ್ಕೆ ಪಡೆದಿದ್ದ...

R. Ashok ಸಿದ್ಧರಾಮಯ್ಯನವರಿಗೆ ತಮ್ಮ ತಪ್ಪಿನ ಅರಿವಾಯಿತಲ್ಲ”-ಆರ್ .ಅಶೋಕ್ ಪ್ರತಿಕ್ರಿಯೆ

R. Ashok ಮೂಡಾ ಹಗರಣದಲ್ಲಿ ಕಾನೂನಿನ ಕುಣಿಕೆ ಬಿಗಿಯಾಗುತ್ತಿದ್ದಂತೆ ಸಿಎಂ ಸಿದ್ಧರಾಮಯ್ಯ...

Shivamogga-Bhadravathi Urban Development Authority ಊರಗಡೂರು ನಿವೇಶನ ಪಡೆಯಲು ಅರ್ಜಿ ಸಲ್ಲಿಕೆ ಅಂತಿಮ ದಿನಾಂಕ ಮುಂದೂಡಿಕೆ

Shivamogga-Bhadravathi Urban Development Authority ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರವು ಶಿವಮೊಗ್ಗ ನಗರದ...