International Women’s Day ಮಾರ್ಚ್ 10 ರಂದು ಅಂತರಾಷ್ಟಿಯ ಮಹಿಳಾ ದಿನಾಚರಣೆಯ ಅಂಗವಾಗಿ ಪೆಮಥಾನ್ ಕಾರ್ಯಕ್ರಮವನ್ನು ಜೈನ್ ಪಬ್ಲಿಕ್ ಸ್ಕೂಲ್ ಹಾಗೂ ನಾರಾಯಣ ಮಲ್ಟಿಸ್ಪೆಷಲಿಟಿ ರೋಟರಿ ಕ್ಲಬ್ ವತಿಯಿಂದ ನೆಹರು ಕ್ರೀಡಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.
ಈ ವಿಷಯದ ಕುರಿತು ಶಿವಮೊಗ್ಗದ ಪತ್ರಿಕಾ ಭವನದಲ್ಲಿ ಮಾತನಾಡಿದ ಜೈನ್ ಪಬ್ಲಿಕ್ ಸ್ಕೂಲ್ ನ ಪ್ರಾಂಶುಪಾಲರಾದ ಪ್ರಿಯದರ್ಶಿನಿ ಅವರು ಮಾತನಿಡಿ, ಈ ಕಾರ್ಯಕ್ರಮವು ಮಹಿಳೆಯರ ಆರೋಗ್ಯವನ್ನು ಬೆಂಬಲಿಸುವ ದೃಷ್ಟಿಯಿಂದ ಇತ್ತೀಚಿನ ದಿನದಲ್ಲಿ ಹೆಚ್ಚಾಗುತ್ತಿರುವ ಗರ್ಭಕಂಠ ಮತ್ತು ಸ್ತನ ಕ್ಯಾನ್ಸರ್ ವಿರುದ್ಧದ ಹೋರಾಟ ಹಾಗೂ ಜಾಗೃತಿ ಮೂಡಿಸುವ ಉದ್ದೇಶದೊಂದಿಗೆ ಫೆಮಥಾನ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.
ಈ ಕಾರ್ಯಕ್ರಮದ ಮೂಲಕ ಸ್ತನ ಕ್ಯಾನ್ಸರ್ ಹಾಗೂ ಗರ್ಭಕಂಠ ಕ್ಯಾನ್ಸರ್ ನಿಂದ ಬಳಲುತ್ತಿರುವ ಹಾಗೂ ಆರ್ಥಿಕ ಸಹಾಯ ನಿರೀಕ್ಷಿಸುವವರಿಗೆ ಫೇಮಥಾನ್ ಮೂಲಕ ಸಂಗ್ರಹವಾಗುವ ಹಣವನ್ನು ದೇಣಿಗೆಯಾಗಿ ನೀಡಲಾಗುತ್ತಿದೆ ಎಂದು ಮಾಹಿತಿ ನೀಡಿದರು.
ಸಮಾಜಮುಖಿ ಕಾಳಜಿಯ ಜವಾಬ್ದಾರಿಯನ್ನು ಹೆಚ್ಚಿಸುವ ಹಾಗೂ ಅರಿವು ಮೂಡಿಸುವ ಸಲುವಾಗಿ ವಿದ್ಯಾರ್ಥಿಗಳನ್ನು ಕೂಡ ಈ ಕಾರ್ಯಕ್ರಮದಲ್ಲಿ ಭಾಗಿಯಾಗಿಸುವುದು ನಮ್ಮ ಉದ್ದೇಶವಾಗಿದೆ. 150 ರೂ. ಪ್ರವೇಶ ಶುಲ್ಕವನ್ನು ನಿಗದಿ ಪಡೆಸಿದ್ದೇವೆ ಎಂದ ಅವರು, ಈ ಕಾರ್ಯಕ್ರಮದಲ್ಲಿ 500 ಜನ ಭಾಗಿಯಾಗುವ ಸಾಧ್ಯತೆ ಇದೆ ಎಂದರು.
International Women’s Day ಪೇಮಥಾನ್ ಗೇಮ್ ನಲ್ಲಿ ವಿಜೇತರಾದವರಿಗೆ ಅತಿ ಹೆಚ್ಚು ರಿಯಾಯಿತಿ ದರದಲ್ಲಿ ಆರೋಗ್ಯ ತಪಾಸಣೆ ಮಾಡಲಾಗುತ್ತದೆ. ಎಂದು ನಾರಾಯಣ ಮಲ್ಟಿ ಸ್ಪೆಷಾಲಟಿ ಆಸ್ಪತ್ರೆಯ ಸೀನಿಯರ್ ಮ್ಯಾನೇಜರ್ ಶೈಲೇಶ್ ತಿಳಿಸಿದರು.
ಫೆಮಥಾನ್ ಮಾರ್ಗ
ಶಿವಮೊಗ್ಗ ನಗರದ ನೆಹರು ಕ್ರೀಡಾಂಗಣದಿಂದ ಆರಂಭಗೊಂಡು ಕೋರ್ಟ್ ಸರ್ಕಲ್ ಡಿ ವಿ ಎಸ್ ಸರ್ಕಲ್-ಬಿ.ಹೆಚ್ ರಸ್ತೆ-ಶಿವಪ್ಪನಾಯಕ ವೃತ್ತ – ಗೋಪಿ ವೃತ್ತ -ಜೈಲ್ ಸರ್ಕಲ್ ಮೂಲಕ ಹಾದು ನಾರಾಯಣ ಮಲ್ಟಿ ಸ್ಪೆಷಾಲಿಟಿ ಕ್ಲಿನಿಕ್ ಶಿವಮೂರ್ತಿ ವೃತ್ತದಲ್ಲಿ ಮುಕ್ತಾಯಗೊಳ್ಳಲಿದೆ.