Saturday, November 23, 2024
Saturday, November 23, 2024

Shivamogga Kote Marikamba Jatre ಶಿವಮೊಗ್ಗ ಶ್ರೀಮಾರಿಕಾಂಬ ಜಾತ್ರೆ ಹೇಗೆ ನಡೆಯುತ್ತದೆ? ಮಾಹಿತಿ

Date:


Shivamogga Kote Marikamba Jatre ಶಿವಮೊಗ್ಗ ನಗರದ ಮಲೆನಾಡಿನ ಹೆಬ್ಬಾಗಿಲೆಂದೇ ಪ್ರಸಿದ್ದಿ ಪಡೆದ ಕೆಳದಿ ಅರಸರ ಕೋಟೆ, ಅರಮನೆ, ಶ್ರೀ ಭೀಮೇಶ್ವರ, ಸೀತಾ ರಾಮಾಂಜನೇಯ
ದೇವಸ್ಥಾನ ಹಾಗೂ ವರಶಕ್ತಿ ಕೋಟೆ ಶ್ರೀ ಮಾರಿಕಾಂಬೆಯ ಗದ್ದುಗೆ ಇವುಗಳೆಲ್ಲಾ ತುಂಗಾನದಿಯ ತಟದಲ್ಲಿರುವುದೊಂದು ವಿಶೇಷ.

ಸುಮಾರು 500 ವರ್ಷಗಳ ಹಿಂದೆ ಮಲೆನಾಡಿನ ಪ್ರಾಂತ್ಯದ ಆಡಳಿತ ನಡೆಸುತ್ತಿದ್ದ ಶಿಸ್ತಿನ ಶಿವಪ್ಪನಾಯಕ ಎಂಬ ಅರಸರು ಶ್ರೀ ಮಾರಿಕಾಂಬೆಗೆ ಪೂಜೆ ಸಲ್ಲಿಸಿಯೇ ಯುದ್ಧಕ್ಕೆ
ಹೊರಡುತ್ತಿದ್ದರೆಂಬುದು ಇತಿಹಾಸದಿಂದ ತಿಳಿದುಬರುತ್ತದೆ.

ಬಯಲು ಮಾರಿಯೆಂದೇ ಜನರಿಂದ ಕರೆಯಲ್ಪಡುತ್ತಿದ್ದ ಶ್ರೀ ಮಾರಿಕಾಂಬೆ ಗದ್ದುಗೆ ಬಳಿ ಬಂದ
ಶ್ರೀ ಶ್ರೀಧರ ಸ್ವಾಮಿಗಳು ಇದು ಶಕ್ತಿ ಪೀಠವಾಗಿದ್ದು, ಈ ಮಹಾ ತಾಯಿಗೆ ನೇರಳು ಮಾಡಿ ಎಂದು ಊರಿನ ಪುರಪಿತೃಗಳಿಗೆ ತಿಳಿಸಿ ಸಾಗರದ ಕಡೆಗೆ ಪಯಾಣ ಬೆಳೆಸಿದರು.

ತದನಂತರ ಕಾರ್ಯಪ್ರವೃತರಾದ ನಗರದಲ್ಲಿನ ಅನೇಕ ಗಣ್ಯರುಗಳು ಸೇರಿ ಸಮಿತಿಯೊಂದನ್ನು
ರಚಿಸಿಕೊಂಡು ದೇವಾಲಯದ ಅಭಿವೃದ್ಧಿ ಕಾರ್ಯಗಳನ್ನು ಕಾಲಕಾಲಕ್ಕೆ ನಡೆಸಿಕೊಂಡು ಬರುತ್ತಿದ್ದಾರೆ. ನೂರಾರು ವರ್ಷಗಳಿಂದ ಎರಡು ವರ್ಷಕೊಮ್ಮೆ ನಡೆಯುವ ಶ್ರೀ ಮಾರಿಕಾಂಬೆ
ಜಾತ್ರೆಯನ್ನು ಇತ್ತೀಚಿನ ವರ್ಷಗಳಿಂದ ಸಂಪ್ರದಾಯ ಮತ್ತು ಅರ್ಥಪೂರ್ಣವಾಗಿ ನಡೆಸಿಕೊಂಡು ಬರಲಾಗುತ್ತಿದೆ.
ಈ ಬಾರಿ ಮಾರ್ಚ್ 12 ರ ಮಂಗಳವಾರ ಬೆಳಗಿನ ಜಾವ 5 ಗಂಟೆಗೆ ಸಮಿತಿ ವತಿಯಿಂದ ಮಂಗಳವಾದ್ಯದೊಂದಿಗೆ ಬಿ.ಬಿ.ರಸ್ತೆಯಲ್ಲಿನ ಬ್ರಾಹ್ಮಣ ಸಮಾಜದ ನಾಡಿಗರ ಕುಟುಂಬದವರನ್ನು ಪೂಜೆಗೆ ಆಹ್ವಾನಿಸಲಾಗುತ್ತದೆ.

ಆ ಕುಟುಂಬದ ಮುತ್ತೈದೆಯರು ಮಂಗಳದ್ರವ್ಯಾದಿಗಳೊಂದಿಗೆ ಮೆರವಣಿಗೆಯಲ್ಲಿ
ಬಾಸಿಂಗದೊಂದಿಗೆ ಗಾಂಧಿಬಜಾರಿನ ತವರು ಮನೆಯಲ್ಲಿರುವ ಶ್ರೀ ಮಾರಿಕಾಂಬೆಗೆ ಉಡಿ ತುಂಬಿ, ಪೂಜೆ ಸಲ್ಲಿಸುತ್ತಾರೆ.


Shivamogga Kote Marikamba Jatre ದ ನಂತರ ವಿಶ್ವಕರ್ಮ ಸಮಾಜದವರು
ಸಾರ್ವಜನಿಕವಾಗಿ ಪೂಜೆಯನ್ನು ಆರಂಭಿಸುತ್ತಾರೆ. ಮಂಗಳವಾರ ರಾತ್ರಿ 10 ಗಂಟೆಯವರೆಗೂ ಲಕ್ಷಾಂತರ ಮುತ್ತೈದೆಯರು ಶ್ರೀ ಮಾರಿಕಾಂಬೆಗೆ ಮಾಡ್ಲಕ್ಕಿ
ನೀಡಿ ಉಡಿ ತುಂಬಿ ತಮ್ಮಪೂಜೆಯನ್ನು ಸಲ್ಲಿಸುತ್ತಾರೆ.

ಇದೆ ದಿನದಿಂದು ಮಾರಿ ಗದ್ದುಗೆಯಲ್ಲಿ ಬೆಳಿಗ್ಗೆ 5 ರಿಂದ ಎಡೆ ಪೂಜೆ ಆರಂಭವಾಗುತ್ತದೆ.ಮಂಗಳವಾರ ರಾತ್ರಿ 9 ಗಂಟೆ ನಂತರ ಮಾರಿಕಾಂಬೆಯನ್ನು
ರಥದಲ್ಲಿ ಕೂರಿಸಿ ಮೆರವಣಿಗೆಯಲ್ಲಿ
ಉಪ್ಪಾರ ಸಮಾಜ ಬಾಂಧವರು ಗದ್ದಿಗೆಗೆ ತಂದು ಪ್ರತಿಷ್ಠಾಪಿಸುತ್ತಾರೆ.

ಈ ಮಧ್ಯೆ ಗಂಗಾಪರಮೇಶ್ವರಿ ದೇವಸ್ಥಾನದಿಂದ
ಗಂಗೆಪೂಜೆಯೊಂದಿಗೆ ಅಮ್ಮನವರನ್ನು ಮಂಗಳವಾದ್ಯದೊಂದಿಗೆ ಎದುರುಗೊಂಡು ಗಂಗಾಮತಸ್ಥ ಸಮಾಜದವರು ಪೂಜೆ ಸಲ್ಲಿಸುತ್ತಾರೆ.

ಬುಧವಾರ ಬೆಳಗಿನ ಜಾವ 4 ಗಂಟೆ ಸುಮಾರಿಗೆ ವಿದ್ಯಾನಗರದ ಕರ್ಲಹಟ್ಟಿಯ ಹರಿಜನ ಸಮಾಜ ಬಾಂಧವರು ಬೇವಿನುಡುಗೆಯೊಂದಿಗೆ ಆಗಮಿಸಿ
ಶ್ರೀ ಮಾರಿಕಾಂಬೆಗೆ ಪೂಜೆ ಸಲ್ಲಿಸಿದ ನಂತರ ಅಮ್ಮನವರನ್ನು ಗದ್ದುಗೆಯಲ್ಲಿ ಪ್ರತಿಷ್ಠಾಪಿಸಲಾಗುತ್ತದೆ.

ಕುರುಬ ಜನಾಂಗದ ಗುತ್ಯಮ್ಮದೇವಾಲಯದ
ಅರ್ಚಕರಾದ ಚೌಡಿಕೆ ಕುಟುಂಬದವರು ನೈವೇದ್ಯ ಮಾಡಿ ಪೂಜೆ ಸಲ್ಲಿಸುತ್ತಾರೆ.

ಬುಧವಾರ ಬೆಳಿಗ್ಗೆ 6 ರಿಂದ ಮಧ್ಯಾಹ್ನ 10 ಗಂಟೆಯವರೆಗೆ ವಾಲ್ಮೀಕಿ
ಸಮಾಜದವರು, 10ರಿಂದ 2 ಗಂಟೆಯವರೆಗೆ ಉಪ್ಪಾರ ಸಮಾಜದವರು, ತದನಂತರ ರಾತ್ರಿ 11 ಗಂಟೆ ವರೆಗೆ ಮಡಿವಾಳ ಸಮಾಜದವರು ಸರದಿಯಂತೆ 4
ದಿನಗಳ ಕಾಲ ಗದ್ದಗೆಯಲ್ಲಿ ಅಮ್ಮನವರಿಗೆ ಪೂಜೆಯನ್ನು ಸಲ್ಲಿಸುತ್ತಾರೆ. ಮಾರ್ಚ್ 16 ರ ಶನಿವಾರ ರಾತ್ರಿ 7 ಗಂಟೆಗೆ ಸಮಿತಿ ವತಿಯಿಂದ ದೇವಿಗೆ
ಮಹಾಮಂಗಳಾರತಿ ಸಲ್ಲಿಸಿದ್ದನಂತರ ಶ್ರೀ ಮಾರಿಕಾಂಬೆಯ ಉತ್ಸವ ವಿವಿಧ ಜಾನಪದ ತಂಡಗಳ ಮೆರುಗಿನೊಂದಿಗೆ ಲಕ್ಷಾಂತರ ಮಂದಿ ಭಕ್ತಾದಿಗಳು
ಅತ್ಯಂತ ಸಂಭ್ರಮದಿಂದ ಅಮ್ಮನವರನ್ನು ವನ ಪ್ರವೇಶಕ್ಕೆ ಕಳಿಸಿಕೊಡುವ ಮೂಲಕ ಎರಡು ವರ್ಷಕ್ಕೊಮ್ಮೆ ನಡೆಯುವ ಜಾತ್ರೆಗೆ ತೆರೆ ಎಳೆಯಲಾಗುತ್ತದೆ.

ಮಡಿವಾಳ ಸಮಾಜದವರು ಅಮ್ಮನವರನ್ನು ಮಧ್ಯರಾತ್ರಿ ವನಕ್ಕೆ ತೆಗೆದುಕೊಂಡು ಹೋಗಿ ಅಂತಿಮವಾಗಿ ಸಮಾಜದ ಸಂಪ್ರದಾಯದಂತೆ ಶಾಸ್ತ್ರವನ್ನು ನಡೆಸಿ,
ಪೂಜೆ ಸಲ್ಲಿಸಿ ವನದಿಂದ ಹಿಂದಿರುಗುತ್ತಾರೆ.

ಮಾರ್ಚ್ 15 ರಿಂದ 17 ರ ವರೆಗೆ ಶಿವಮೊಗ್ಗ ನಗರದ ನೆಹರೂ ಕ್ರೀಡಾಂಗಣದಲ್ಲಿ ರಾಜ್ಯದ ಪೈಲ್ವಾನರುಗಳಿಗೆ ಪ್ರೋತ್ಸಾಹಿಸುವ ದೃಷ್ಟಿಯಿಂದ ರಾಜ್ಯ –
ಅಂತರರಾಜ್ಯದ ಹೆಸರಾಂತ ಪೈಲ್ವಾನರುಗಳಿಂದ ರಾಜ್ಯಮಟ್ಟದ ಕುಸ್ತಿ ಪಂದ್ಯಾವಳಿಯನ್ನು ನಡೆಸಲಾಗುತ್ತದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Akhila Bharatiya Sahitya Parishad ಅಖಿಲ ಭಾರತೀಯ ಸಾಹಿತ್ಯ ಪರಿಷತ್ತಿನ ಆಶ್ರಯದಲ್ಲಿ “ರಾಜ್ಯೋತ್ಸವ ಕವಿಗೋಷ್ಠಿ”

Akhila Bharatiya Sahitya Parishad ಅಖಿಲ ಭಾರತೀಯ ಸಾಹಿತ್ಯ ಪರಿಷತ್ ಕರ್ನಾಟಕ...

Mohare Hanumantharaya Award ಪ್ರಶಸ್ತಿ ಪುರಸ್ಕೃತ ಪತ್ರಕರ್ತ, ‘ಕ್ರಾಂತಿ ದೀಪ ‘ಮಂಜುನಾಥ್ ಅವರಿಗೆ ಸನ್ಮಾನ

Mohare Hanumantharaya Award ಪತ್ರಿಕೋದ್ಯಮದ ಪ್ರತಿಷ್ಠಿತ ಪ್ರಶಸ್ತಿಗಳಲ್ಲಿ ಒಂದಾದ ಮೊಹರೆ ಹಣಮಂತರಾಯ...

MESCOM ನವೆಂಬರ್ 23 .ಹೊಳಲೂರು ಸುತ್ತಮುತ್ತ ವಿದ್ಯುತ್ ಸರಬರಾಜು ವ್ಯತ್ಯಯ

MESCOM ಹೊಳಲೂರು ಗ್ರಾಮದ 66/11 ಕೆವಿ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ...

Rotary Club Shimoga ಪ್ರೌಢಾವಸ್ಥೆಯು ದೇಹದಲ್ಲಿ ಅನೇಕ ಬದಲಾವಣೆ ತರುತ್ತದೆ.ಅದನ್ನ ಗಮನಿಸಬೇಕು- ಡಾ.ಮೋಕ್ಷಾ

Rotary Club Shimoga ರೋಟರಿ ಸಂಸ್ಥೆಯು ನಿಸ್ವಾರ್ಥವಾಗಿ ವಿಶ್ವದ ಎಲ್ಲ ಭಾಗಗಳಲ್ಲಿ...