Saturday, October 17, 2026
Saturday, October 17, 2026

Rotary Club Shimoga ಕ್ರೀಡಾಕೂಟಗಳಿಂದ ಆತ್ಮವಿಶ್ವಾಸದ ವೃದ್ಧಿ- ಸಿ.ರಾಜು

Date:

Rotary Club Shimoga  ಕ್ರೀಡಾಕೂಟದಲ್ಲಿ ಭಾಗವಹಿಸುವಲ್ಲಿ ಆತ್ಮವಿಶ್ವಾಸ ವೃದ್ಧಿಸುವ ಜತೆಯಲ್ಲಿ ಸಕರಾತ್ಮಕ ಮನೋಭಾವ ನಮ್ಮಲ್ಲಿ ಬೆಳೆಯುತ್ತದೆ ಎಂದು ರೋಟರಿ ಕ್ಲಬ್ ಶಿವಮೊಗ್ಗ ಮಲೆನಾಡು ಸಂಸ್ಥೆ ಅಧ್ಯಕ್ಷ ಸಿ.ರಾಜು ಅಭಿಪ್ರಾಯಪಟ್ಟರು.
ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಪ್ರಯುಕ್ತ ಶಿವಮೊಗ್ಗ ನಗರದ ಗೋಪಾಳಗೌಡ ಚಂದನ ಪಾರ್ಕಿನಲ್ಲಿ ರೋಟರಿ ಕ್ಲಬ್ ಶಿವಮೊಗ್ಗ ಮಲೆನಾಡು ಸಂಸ್ಥೆ ವತಿಯಿಂದ ಆಯೋಜಿಸಿದ್ದ ಷಟಲ್ ಬ್ಯಾಡ್ಮಿಂಟನ್ ಕ್ರೀಡಾಕೂಟದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು.
ಮಹಿಳೆಯರು ಮನೆಯ ಸಾಂಸಾರಿಕ ಜವಾಬ್ದಾರಿ, ಒತ್ತಡದ ಜೀವನಶೈಲಿಯ ನಡುವೆಯು ಸಮಯ ಮಾಡಿಕೊಂಡು ಕ್ರೀಡಾಕೂಟಗಳಲ್ಲಿ ಭಾಗವಹಿಸಲು ಆಸಕ್ತಿ ವಹಿಸಬೇಕು. ಇದರಿಂದ ದೈಹಿಕ ಸಾಮಾರ್ಥ್ಯ ಹಾಗೂ ಆರೋಗ್ಯ ಜಾಗೃತಿಯು ಬೆಳೆಯುತ್ತದೆ ಎಂದು ತಿಳಿಸಿದರು.
ರೋಟರಿ ಸಂಸ್ಥೆಯು ಸೇವಾ ಚಟುವಟಿಕೆಗಳನ್ನು ಆಯೋಜಿಸುವ ಜತೆಯಲ್ಲಿ ಇಂತಹ ಸ್ಪರ್ಧೆಗಳನ್ನು ಹಮ್ಮಿಕೊಂಡು ಬರುತ್ತಿದೆ. ಆರೋಗ್ಯ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ವಿಶೇಷ ಕಾರ್ಯಕ್ರಮಗಳನ್ನು ರೂಪಿಸಿ ನಡೆಸುತ್ತಿದೆ ಎಂದರು.
ರೋಟರಿ ಮಂಜುಳಾ ರಾಜು ಮಾತನಾಡಿ, ಮುಂದಿನ ದಿನಗಳಲ್ಲಿ ಬೃಹತ್ ಮಟ್ಟದ ಕ್ರೀಡಾಕೂಟ ಸ್ಪರ್ಧೆಗಳನ್ನು ಆಯೋಜಿಸಲಾಗುವುದು ಎಂದು ಹೇಳಿದರು. ಮಹಿಳಾ ದಿನಾಚರಣೆ ಪ್ರಯುಕ್ತ ಆಯೋಜಿಸಿದ್ದ ಸ್ಪರ್ಧೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು ಭಾಗವಹಿಸಿದ್ದರು.
Rotary Club Shimoga  ರೋಟರಿ ಕ್ಲಬ್ ಶಿವಮೊಗ್ಗ ಮಲೆನಾಡು ಸಂಸ್ಥೆಯ ಪ್ರಕಾಶಮೂರ್ತಿ, ರಶ್ಮಿ, ಮಲ್ಲಿಕಾರ್ಜುನ್, ಮಂಜುಳಾ ರಾಜು, ಇನ್ನಿತರ ಸದಸ್ಯರು, ಸ್ಥಳೀಯರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

World Mental Health Day ಶಿವಮೊಗ್ಗದಲ್ಲಿ ವಿಶ್ವ ಮಾನಸಿಕ ದಿನಾಚರಣೆ ಜಾಗೃತಿ ಜಾಥಾ

World Mental Health Day ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆಯ ಅಂಗವಾಗಿ...

Mysuru Dasara ದಸರಾ ಪುಸ್ತಕ ಮೇಳ: ಪುಸ್ತಕಗಳ ವೀಕ್ಷಿಸಿದ ಅಭಿನವ ಗವಿ ಸಿದ್ದೇಶ್ವರ ಸ್ವಾಮೀಜಿ

Mysuru Dasara ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026ರ ಉದ್ಘಾಟನೆಮಾಡಿದ...

Mysuru Dasara ಮೈಸೂರು ದಸರಾ ವಿದ್ಯುತ್ ದೀಪಾಲಂಕಾರಕ್ಕೆ ಸಚಿವ ಜಾರ್ಜ್ ಚಾಲನೆ

ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾಗಿರುವ ವಿದ್ಯುತ್‌ ದೀಪಾಲಂಕಾರಕ್ಕೆ...