World Consumers Rights Day ಇಂದು ವಿಶ್ವ ಗ್ರಾಹಕ ಹಕ್ಕುಗಳ ದಿನ. ಪ್ರತಿ ವರ್ಷ ಮಾರ್ಚ್ 15 ರಂದು ವಿಶ್ವ ಗ್ರಾಹಕ ಹಕ್ಕುಗಳ ದಿನ ವನ್ನು ಆಚರಣೆ ಮಾಡಲಾಗುತ್ತದೆ. ಗ್ರಾಹಕರಲ್ಲಿ ಅರಿವು ಮೂಡಿಸುವ ಸಲುವಾಗಿ ಪ್ರತಿ ವರ್ಷ ಈ ದಿನವನ್ನು ವಿಶ್ವದಾದ್ಯಂತ ಆಚರಣೆ ಮಾಡಲಾಗುತ್ತದೆ.
ವಿಶ್ವ ಗ್ರಾಹಕ ಹಕ್ಕುಗಳ ದಿನವನ್ನು 1983 ರಲ್ಲಿ ಮೊದಲ ಬಾರಿಗೆ ಆಚರಣೆ ಮಾಡಲಾಯಿತು. ಅಂದಿನಿಂದ ಇದನ್ನು ಪ್ರತಿವರ್ಷ ಮಾರ್ಚ್ 15ರಂದು ಜಾಗತಿಕವಾಗಿ ಆಚರಿಸಲಾಗುತ್ತದೆ.
ಗ್ರಾಹಕರ ಸುರಕ್ಷತೆ ಕಾಯ್ದೆಯ ಪ್ರಕಾರ ಗ್ರಾಹಕರಾಗಿ ಯಾವುದೇ ವಸ್ತು ಖರೀದಿಸುವಾಗ ವಸ್ತುವಿನ ಗುಣಮಟ್ಟ, ಸುರಕ್ಷತೆ, ವಸ್ತುವಿನ ಉತ್ಪಾದನೆ ಮತ್ತು ಅದರ ಕೊನೆಯ ಅವಧಿಯನ್ನು ಪರಿಶೀಲಿಸಬೇಕು ಎಂದು ಈ ದಿನದಂದು ಜನರಲ್ಲಿ ಜಾಗೃತಿ ಮೂಡಿಸಲಾಗುವುದು.
ಭಾರತದಲ್ಲೂ ಪ್ರತಿ ವರ್ಷ ಗ್ರಾಹಕರ ಹಕ್ಕುಗಳ ದಿನವನ್ನು ಆಚರಣೆ ಮಾಡಲಾಗುತ್ತದೆ. ಈ ದಿನದಂದು ವಿಚಾರ ಸಂಕಿರಣಗಳು, ಚರ್ಚಾಗೋಷ್ಠಿಗಳು, ಪ್ರಬಂಧ ಸ್ಪರ್ಧೆಗಳನ್ನು ಆಯೋಜಿಸುವ ಮೂಲಕ ಜನರಲ್ಲಿ ಜಾಗೃತಿ ಮೂಡಿಸುವ ಕೆಲಸ ಮಾಡಲಾಗುತ್ತದೆ.
ಭಾರತದಲ್ಲಿನ ಗ್ರಾಹಕರ ಕುಂದುಕೊರತೆಗಳನ್ನು ರಾಷ್ಟ್ರೀಯ ಗ್ರಾಹಕ ವಿವಾದಗಳ ಪರಿಹಾರ ಆಯೋಗವು ಪರಿಹರಿಸುತ್ತದೆ.
World Consumers Rights Day ಇದು 1988 ರಲ್ಲಿ ಗ್ರಾಹಕ ಸಂರಕ್ಷಣಾ ಕಾಯಿದೆಯಡಿಯಲ್ಲಿ ಜಾರಿಗೆ ತರಲಾಯಿತು. ಡಿಸೆಂಬರ್ 24, 1986ರಲ್ಲಿ ಅಧಿಕೃತವಾಗಿ ಭಾರತದಲ್ಲಿ ವಿಶ್ವ ಗ್ರಾಹಕರ ದಿನವನ್ನು ಆಚರಣೆಗೆ ತರಲಾಯಿತು. ಭಾರತದಲ್ಲಿ ಡಿಸೆಂಬರ್ 24 ನ್ನು ಗ್ರಾಹಕ ಹಕ್ಕುಗಳ ದಿನವಾಗಿ ಆಚರಿಸಲಾಗುತ್ತದೆ.