Lok Sabha Elections ಕೇಂದ್ರ ಚುನಾವಣಾ ಆಯೋಗವು ಮಾರ್ಚ್ 15, ರಂದು ಲೋಕಸಭಾ ಚುನಾವಣೆಯನ್ನು ಘೋಷಿಸಿದ್ದು, ವೇಳಾಪಟ್ಟಿಯನ್ನು ಪ್ರಕಟಿಸಿದೆ. ದೇಶಾದ್ಯಂತ 7 ಹಂತಗಳಲ್ಲಿ ಚುನಾವಣೆ ನಡೆಯಲಿದೆ. ಚುನಾವಣಾ ಆಯೋಗದ ಘೋಷಣೆಯಂತೆ ಕರ್ನಾಟಕದಲ್ಲಿ ಲೋಕಸಭಾ ಚುನಾವಣೆಯು 2 ಹಂತದಲ್ಲಿ ನಡೆಯಲಿದೆ. ಕರ್ನಾಟಕದಲ್ಲಿ ಮೊದಲ ಹಂತದ ಮತದಾನ ಏಪ್ರಿಲ್ 26,ಹಾಗೂ ಎರಡನೇ ಹಂತ ಮತದಾನ ಮೇ 7ರಂದು ನಡೆಯಲಿದೆ.
ಇಂದಿನಿಂದಲೇ ರಾಜ್ಯದಲ್ಲಿ ಮಾದರಿ ನೀತಿ ಸಂಹಿತೆ ಜಾರಿಯಾಗಿದೆ. ಫಲಿತಾಂಶ ಬರುವವರೆಗೂ ನೀತಿ ಸಂಹಿತೆ ಜಾರಿಯಲ್ಲಿರುತ್ತದೆ. ಮೊದಲ ಹಂತದ ಮತದಾನ ಏಪ್ರಿಲ್ 26ರಂದು ನಡೆಯಲಿದ್ದರೆ, ಎರಡನೇ ಹಂತದ ಮತದಾನ ಮೇ7ರಂದು ನಡೆಯಲಿದೆ.
ದೇಶಾದ್ಯಂತ ಮತ ಎಣಿಕೆ ಒಂದೇ ದಿನ ನಡೆಯಲಿದ್ದು, ಜೂನ್ 4 ರಂದು ಫಲಿತಾಂಶ ಬರಲಿದೆ.
ಕರ್ನಾಟಕದಲ್ಲಿ ಒಂದನೇ ಹಂತದಲ್ಲಿ 14 ಕ್ಷೇತ್ರಗಳಾದ ಬೆಂಗಳೂರು ದಕ್ಷಿಣ, ಬೆಂಗಳೂರು ಉತ್ತರ, ಬೆಂಗಳೂರು ಕೇಂದ್ರ, ಮೈಸೂರು, ಮಂಡ್ಯ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಕೋಲಾರ, ತುಮಕೂರು, ಹಾಸನ, ಉಡುಪಿ-ಚಿಕ್ಕಮಗಳೂರು, ಚಿತ್ರದುರ್ಗ, ಚಿಕ್ಕಬಳ್ಳಾಪುರ, ದಕ್ಷಿಣ ಕನ್ನಡ ಈ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ನಡೆಯಲಿದೆ.
Lok Sabha Elections ಎರಡನೇ ಹಂತದ ಮತದಾನ ಮೇ. 7ರಂದು ನಡೆಯಲಿರುವ ಮತದಾನ ಕ್ಷೇತ್ರಗಳೆಂದರೆ ಶಿವಮೊಗ್ಗ, ದಾವಣಗೆರೆ, ಬೀದರ್, ಬಳ್ಳಾರಿ, ಕೊಪ್ಪಳ, ಉತ್ತರ ಕನ್ನಡ, ಚಿಕ್ಕೋಡಿ, ವಿಜಯಪುರ, ಹುಬ್ಬಳ್ಳಿ ಧಾರವಾಡ, ಕಾವೇರಿ ಗದಗ, ರಾಯಚೂರು, ಕಲ್ಬುರ್ಗಿ, ಬಾಗಲಕೋಟೆ ಈ ಕ್ಷೇತ್ರದಲ್ಲಿ ಮತದಾನ ನಡೆಯಲಿದೆ.