Sunday, August 23, 2026
Sunday, August 23, 2026

K. S. Eshwarappa ಕುಟುಂಬ ರಾಜಕಾರಣದಿಂದ ಬಿಜೆಪಿ ಮುಕ್ತ ಮಾಡಲು ನನ್ನ ಸ್ಪರ್ಧೆ- ಈಶ್ವರಪ್ಪ

Date:

K. S. Eshwarappa ನಾನು ಮೋದಿ ಪರ ಧ್ವನಿ ಎತ್ತುತ್ತೇನೆ. ಆದರೆ, ಮೋದಿ ಅವರ ಕಾರ್ಯಕ್ರಮಕ್ಕೆ ಹೋಗುವುದಿಲ್ಲ ಎಂದು ಮಾಜಿ ಉಪ ಮುಖ್ಯ ಮಂತ್ರಿ ಕೆ.ಎಸ್ ಈಶ್ವರಪ್ಪ ಅವರು ಹೇಳಿದ್ದಾರೆ.

ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು,ಸಂಧಾನಕ್ಕೆ ಆರಗ ಜ್ಞಾನೇಂದ್ರ ಹಾಗೂ ಕೆಲವರು ನಿವಾಸಕ್ಕೆ ಬಂದಿದ್ದರು. ಆದರೆ ಯಾವುದೇ ಕಾರಣಕ್ಕೂ ಪಕ್ಷೇತರ ಸ್ಪರ್ಧೆಯಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ. ಎಲ್ಲರೂ ಕರೆಮಾಡಿ ನೀವು ಸ್ಪರ್ಧಿಸಬೇಕೆಂದು ಹೇಳುತ್ತಿದ್ದಾರೆ. ಎಲ್ಲ ಮೋರ್ಚಾದವರು ನನಗೆ ಕರೆ ಮಾಡುತ್ತಿದ್ದಾರೆ. ನೀವು ಚುನಾವಣಾ ನಿವೃತ್ತಿ ತೆಗೆದುಕೊಳ್ಳಬೇಡಿ ಅಂತಿದ್ದಾರೆ. ನನ್ನ ನಿರ್ಧಾರದಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ತಿಳಿಸಿದ್ದಾರೆ.

ನನ್ನ ಮಗನಿಗೆ ಟಿಕೆಟ್ ಕೊಟ್ಟಿಲ್ಲ ಎಂದು ಸ್ಪರ್ಧಿಸುತ್ತಿಲ್ಲ. ಪಕ್ಷದಲ್ಲಿ ಅನೇಕ ಹಿಂದುತ್ವವಾದಿಗಳಿಗೆ ಮೋಸವಾಗಿದೆ. ರಾಜ್ಯಾಧ್ಯಕ್ಷರು ಲಿಂಗಾಯತರೇ ಬೇಕು ಅಂದಿದ್ದರೆ ಯತ್ನಾಳ್ ಅವರನ್ನು ಮಾಡಬೇಕಿತ್ತು. ಯತ್ನಾಳ್ ಅವರನ್ನ ಯಾಕೆ ಮಾಡಲಿಲ್ಲ? ಲಿಂಗಾಯತರು ಬೆಳೆಯುವುದು ಇವರಿಗೆ ಇಷ್ಟವಿಲ್ಲ ಓಕೆ. ಒಕ್ಕಲಿಗ ನಾಯಕರನ್ನಾದರೂ ಮಾಡಬಹುದಿತ್ತು. ಯಾಕೆ ಮಾಡಿಲ್ಲ. ಶೋಭಾ ಕರಂದ್ಲಾಜೆ ವಿರುದ್ಧ ಗೋಬ್ಯಾಕ್ ಅಭಿಯಾನ ನಡೆದರೂ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ ಸಿ.ಟಿ.ರವಿಗೆ ಟಿಕೆಟ್ ಯಾಕೆ ಕೊಡಿಸಲಿಲ್ಲ ಎಂದು ಪ್ರಶ್ನಿಸಿದ್ದಾರೆ.

ಯಡಿಯೂರಪ್ಪ ಅವರ ಮೇಲೆ ವರಿಷ್ಠರು ನಂಬಿಕೆ ಇಟ್ಟಿದ್ದಾರೆ. ಅವರೊಬ್ಬ ದೊಡ್ಡ ನಾಯಕರು ಎನ್ನುವ ಭ್ರಮೆಯಲ್ಲಿ ವರಿಷ್ಠರು ಇದ್ದಾರೆ. ನನ್ನ ಮಗನಿಗೆ ಟಿಕೆಟ್ ನೀಡಿದೆ ಮೋಸ ಮಾಡಿದ್ದಾರೆ.
ತುಂಬಾ ನಾಯಕರಿಗೆ ಮೋಸ ಆಗಿದೆ. ನಾನು ಕೊನೆಯವರೆಗೆ ಪಕ್ಷವನ್ನು ತಾಯಿ ಅಂತಾ ನಂಬಿದ್ದೇನೆ. ಪಕ್ಷದ ಸೂಚನೆಯಂತೆ ನಡೆದುಕೊಂಡು ಬಂದಿದ್ದೇನೆ ಎಂದು ಹೇಳಿದ್ದಾರೆ.

K. S. Eshwarappa ಕುಟುಂಬ ರಾಜಕಾರಣದ ಬಗ್ಗೆ ಮಾತನಾಡಿದ ಅವರು, ನಾವು ದಿನನಿತ್ಯ ಕಾಂಗ್ರೆಸ್ ಪಕ್ಷವನ್ನ ಟೀಕೆ ಮಾಡುತ್ತಿದ್ದೇವೆ. ಆದರೆ, ರಾಜ್ಯದಲ್ಲಿ ಬಿಜೆಪಿ ಯಡಿಯೂರಪ್ಪ ಅವರ ಕುಟುಂಬದ ಕಪಿಮುಷ್ಠಿಯಲ್ಲಿ ಸಿಲುಕಿದೆ. ಹಠ ಹಿಡಿದು ಯಡಿಯೂರಪ್ಪ ಮಗನಿಗೆ ರಾಜ್ಯಾಧ್ಯಕ್ಷ ಸ್ಥಾನ ಕೊಡಿಸಿದ್ದಾರೆ. ಪಕ್ಷ ಅಂದರೆ ತಾಯಿ, ಆ ತಾಯಿಯ ಕತ್ತು ಹಿಸುಕುತ್ತಿದ್ದಾರೆ. ಅಪ್ಪ ಮಕ್ಕಳ ಕೈಗೆ ಸಿಕ್ಕು ಪಕ್ಷ ಒದ್ದಾಡುತ್ತಿದೆ. ಯಡಿಯೂರಪ್ಪ ಅವರ ಕುಟುಂಬ ರಾಜಕಾರಣದಿಂದ ಪಕ್ಷ ಮುಕ್ತವಾಗಬೇಕಿದೆ. ಈ ಉದ್ದೇಶದಿಂದ ಈಗ ನಾನು ಸ್ಪರ್ಧೆ ಮಾಡಲು ಉದ್ದೇಶಿಸಿದ್ದೇನೆ ಎಂದು ವಾಗ್ದಾಳಿ ನಡೆಸಿದ್ದಾರೆ

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Karnataka Nataka Academy 2026-27 ನೇ ಸಾಲಿನ ಕರ್ನಾಟಕ ನಾಟಕ ಅಕಾಡೆಮಿ‌ ಪ್ರಶಸ್ತಿ‌ ಘೋಷಣೆ

Karnataka Nataka Academy ಕರ್ನಾಟಕ ನಾಟಕ ಅಕಾಡೆಮಿಯ 2026-27ನೇ ಸಾಲಿನ ಜೀವಮಾನ...

Paripurna Educational Charitable Trust ನಿತ್ಯ ದೇಹಕ್ಕೆ ಅಗತ್ಯವಿರುವಷ್ಟು ನೀರು ಸೇವಿಸಿ. ಸದೃಢ ಆರೋಗ್ಯ ಸಾಧಿಸಿ- ಸತೀಶ್ ಚಂದ್ರ

ಮಕ್ಕಳು ಪ್ರತಿ ದಿನ ದೇಹಕ್ಕೆ ಅಗತ್ಯ ಇರುವಷ್ಟು ನೀರು ಕುಡಿಯಬೇಕು. ಅಗತ್ಯವಿರುವಷ್ಟು...