Wednesday, December 17, 2025
Wednesday, December 17, 2025

Lok Sabha Election ಪರಿಣಿತ ರಾಜಕಾರಣಿ,ಮಾಜಿ ಸಚಿವ ಮಾಧುಸ್ವಾಮಿ ಬಿಜೆಪಿ ತೊರೆಯುತ್ತಾರೆಯೆ?

Date:

Lok Sabha Election ಲೋಕಸಭಾ ಚುನಾವಣೆಗೂ ಮುನ್ನ ಕಾಂಗ್ರೆಸ್‌ ರಣಕಹಳೆ ಮೊಳಗಿಸಿದೆ, ಬಿಜೆಪಿ ಮುಖಂಡ ಹಾಗೂ ಮಾಜಿ ಸಚಿವ ಜೆ.ಸಿ.ಮಾಧುಸ್ವಾಮಿ ಶೀಘ್ರದಲ್ಲೆ ಕಾಂಗ್ರೆಸ್ ಪಕ್ಷ ಸೇರುವ ಸಾಧ್ಯತೆ ಇದೆ. ಮಾಧುಸ್ವಾಮಿ 2023ರ ವಿಧಾನಸಭೆ ಚುನಾವಣೆಯಲ್ಲಿ ಚಿಕ್ಕನಾಯಕನಹಳ್ಳಿ ಕ್ಷೇತ್ರದಿಂದ ಜೆಡಿಎಸ್‌ನ ಸಿಬಿ ಸುರೇಶ್‌ಬಾಬು ವಿರುದ್ಧ ಸೋತಿದ್ದರು. 2018ರಲ್ಲಿ ಇದೇ ಕ್ಷೇತ್ರದಿಂದ ಸುರೇಶ್ ಬಾಬು ಅವರನ್ನು ಮಾಧುಸ್ವಾಮಿ ಸೋಲಿಸಿದ್ದರು.

ಚಿಕ್ಕನಾಯಕನಹಳ್ಳಿಯಿಂದ ನಾಲ್ಕು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದ ಮಾಧುಸ್ವಾಮಿ ಈ ಹಿಂದೆ ಜನತಾ ದಳದಲ್ಲಿದ್ದವರು. ಬಿಎಸ್ ಯಡಿಯೂರಪ್ಪ ಅವರ ಕೆಜೆಪಿ ಸೇರಿ ನಂತರ ಬಿಜೆಪಿ ಪಾಳಯಕ್ಕೆ ತೆರಳಿದ್ದರು. ಅವರು 2023 ರ ವಿಧಾನಸಭೆ ಚುನಾವಣೆ ಸೋಲಿನ ನಂತರ ಬಿಜೆಪಿ ನಾಯಕರೊಂದಿಗೆ ಮುನಿಸಿಕೊಂಡಿದ್ದಾರೆ. ಮತ್ತು ಅವರ ದುಸ್ಥಿತಿಗೆ ಪಕ್ಷದ ನಾಯಕತ್ವವನ್ನು ದೂಷಿಸಿದ್ದಾರೆ.

Lok Sabha Election 2023ರಲ್ಲಿ ತಮ್ಮನ್ನು ಸೋಲಿಸಿದ್ದು ಕಾಂಗ್ರೆಸ್‌ನ ಕಿರಣ್ ಕುಮಾರ್ ಎಂದು ಮಾಧುಸ್ವಾಮಿ ಆರೋಪಿಸಿದ್ದರು. ಯಡಿಯೂರಪ್ಪ ಸೇರಿದಂತೆ ಹಲವು ನಾಯಕರ ಆಪ್ತರು ಎನ್ನಲಾದ ಲಿಂಗಾಯತರಾದ ಕಿರಣ್ ಕುಮಾರ್ ಅವರು ಸುಮಾರು 50 ಸಾವಿರ ಮತಗಳನ್ನು ಪಡೆದಿದ್ದು ಲಿಂಗಾಯತ ಮತ ವಿಭಜನೆಯಾಗಲು ಜೆಡಿಎಸ್ ನ ಬಾಬು ಸುಮಾರು 10,000 ಮತಗಳಿಂದ ಗೆಲ್ಲಲು ನೆರವಾದರು. ಮಾಧುಸ್ವಾಮಿ ಕಾಂಗ್ರೆಸ್ ಸೇರುವುದರಿಂದ ತಿಪಟೂರು, ತುರುವೇಕೆರೆ, ಚಿಕ್ಕನಾಯಕನಹಳ್ಳಿ, ಗುಬ್ಬಿ, ತುಮಕೂರು ಗ್ರಾಮಾಂತರ, ತುಮಕೂರು ನಗರದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ಹೆಚ್ಚುವ ನಿರೀಕ್ಷೆಯಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Women and Child Development Department ಡಿಸೆಂಬರ್ 20. ಶಿವಮೊಗ್ಗದಲ್ಲಿ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ

Women and Child Development Department ಶಿವಮೊಗ್ಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್,...

Madhu Bangappa ಯಾವುದೇ ಶಾಲೆ ಆದರೂ ಕನ್ನಡ ಕಲಿಸಬೇಕು ಅಂತ ಮುಚ್ಚಳಿಕೆ ಬರೆಸಿಕೊಳ್ಳುತ್ತೇವೆ- ಮಧು ಬಂಗಾರಪ್ಪ

Madhu Bangappa ರಾಜ್ಯದ ಎಲ್ಲಾ ಮಾದರಿ ಬೋರ್ಡ್‌ಗಳು ಕಡ್ಡಾಯವಾಗಿ ಕನ್ನಡ...