Droupadi Murmu ತಿರುವನಂತಪುರಂ: ಕೇರಳ ಸರ್ಕಾರವು ಅಂಗೀಕರಿಸಿದ ನಾಲ್ಕು ಮಸೂದೆಗಳಿಗೆ ಒಪ್ಪಿಗೆಯನ್ನು ನೀಡಲು ಯಾವುದೇ ಕಾರಣವನ್ನು ನೀಡದೆ ತಡೆ ಹಿಡಿದಿದ್ದಕ್ಕಾಗಿ ಕೇರಳ ಸರ್ಕಾರವು ರಾಷ್ಟ್ರಪತಿ ದ್ರೌಪದಿ ಮುರ್ಮು ವಿರುದ್ಧ ಸುಪ್ರೀಂಕೋರ್ಟ್ ಕದ ತಟ್ಟಿದೆ.
ಕೇರಳ ವಿಧಾನಸಭೆಯಲ್ಲಿ ಅಂಗೀಕರಿಸಲಾಗಿದ್ದ ಮಸೂದೆಗಳಿಗೆ ಅಂಕಿತ ನೀಡದೆ ಅನಿರ್ದಿಷ್ಟ ವಿಳಂಬ ಉಂಟು ಮಾಡಿ ನಂತರ ಅವುಗಳನ್ನು ರಾಷ್ಟ್ರಪತಿಗಳ ಪರಿಗಣನೆಗೆ ಕಳುಹಿಸಿದ ಕೇರಳ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಅವರ ವಿರುದ್ಧವೂ ಕೇರಳ ಸರ್ಕಾರ ಸುಪ್ರೀಂ ಕೋರ್ಟ್ ಕದ ತಟ್ಟಿತ್ತು.
ಯಾವುದೇ ಕಾರಣ ನೀಡದೆ ನಾಲ್ಕು ವಿಧೇಯಕಗಳಿಗೆ ಒಪ್ಪಿಗೆಯನ್ನು ತಡೆಹಿಡಿಯುವ ರಾಷ್ಟ್ರಪತಿಗಳ ಕಾರ್ಯವು ಅತ್ಯಂತ ನಿರಂಕುಶವಾಗಿದೆ. ನಾಲ್ಕು ಮಸೂದೆಗಳಿಗೆ ಯಾವುದೇ ಕಾರಣ ನೀಡದೆ ಅಂಗೀಕಾರ ತಡೆಹಿಡಿದಿರುವುದು ಸಂವಿಧಾನದ ವಿಧಿ 14, 200 ಮತ್ತು 201ರ ಉಲ್ಲಂಘನೆಯಾಗಿದೆ. ಒಟ್ಟು 7 ಮಸೂದೆಗಳನ್ನು ರಾಷ್ಟ್ರಪತಿಗಳಿಗೆ ಅಂಕಿತ ಹಾಕಲು ಕಳುಹಿಸಿಕೊಡಲಾಗಿತ್ತು. ಸುಪ್ರೀಂ ಕೋರ್ಟ್‌ಗೆ ಸಲ್ಲಿಸಿರುವ ರಿಟ್ ಅರ್ಜಿಯಲ್ಲಿ ರಾಷ್ಟ್ರಪತಿಗಳ ಕಾರ್ಯದರ್ಶಿ, ಕೇರಳ ರಾಜ್ಯಪಾಲ, ರಾಜ್ಯಪಾಲರ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗಳನ್ನು ಪ್ರತಿವಾದಿಗಳನ್ನಾಗಿಸಲಾಗಿದೆ. ಕೇರಳ ಸರ್ಕಾರ ಪರವಾಗಿ ಹಿರಿಯ ವಕೀಲ ಸಿ ಕೆ ಶಶಿ ಸುಪ್ರೀಂ ಕೋರ್ಟಿನಲ್ಲಿ Droupadi Murmu ವಾದ ಮಂಡಿಸಲಿದ್ದಾರೆ.
Droupadi Murmu ರಾಜ್ಯದ ನಾಲ್ಕು ಮಸೂದೆ ತಡೆ ಹಿಡಿದರಾಷ್ಟ್ರಪತಿ ದ್ರೌಪದಿ ಮುರ್ಮು ವಿರುದ್ಧ ಸುಪ್ರೀಂ ನಲ್ಲಿ ಮನವಿ ಸಲ್ಲಿಸಿದ ಕೇರಳ ಸರ್ಕಾರ
Date: