SSLC Exam ಇಂದಿನಿಂದ 2023-24ನೇ ಸಾಲಿನ SSLC ವಾರ್ಷಿಕ ಪರೀಕ್ಷೆಗಳು ರಾಜ್ಯದಲ್ಲಿ ಆರಂಭಗೊಂಡಿದೆ. ಶಿಕ್ಷಣ ಇಲಾಖೆ ಪರೀಕ್ಷೆಗೆ ತಯಾರಿ ಮಾಡಿಕೊಂಡಿದೆ.
ರಾಜ್ಯದ 2,750 ಕೇಂದ್ರಗಳಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆಗಳು ನಡೆಯಲಿವೆ. ಒಟ್ಟು 8,69,968 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ ಮಾಡಿಕೊಂಡಿದ್ದಾರೆ.
ಒಟ್ಟು ವಿದ್ಯಾರ್ಥಿಗಳ ನೋಂದಣಿಯಲ್ಲಿ 8,10,368 ರೆಗ್ಯುಲರ್ ವಿದ್ಯಾರ್ಥಿಗಳಾಗಿದ್ದಾರೆ. 18,225 ಖಾಸಗಿ ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ ಮಾಡಿಕೊಂಡಿದ್ರೆ, 41,375 ಪುನರಾವರ್ತಿತ ವಿದ್ಯಾರ್ಥಿಗಳಿದ್ದಾರೆ. ಒಟ್ಟು ವಿದ್ಯಾರ್ಥಿಗಳ ಪೈಕಿ 4,41,910 ಬಾಲಕರು ಮತ್ತು 4,28,058 ಬಾಲಕಿಯರು ಪರೀಕ್ಷೆಯನ್ನು ಬರೆಯುತ್ತಿದ್ದಾರೆ.
ಪ್ರತಿ ಪರೀಕ್ಷಾ ಕೇಂದ್ರಗಳಿಗೆ ಅಗತ್ಯ ಪೊಲೀಸ್ ಭದ್ರತೆಯನ್ನು ಒದಗಿಸಲಾಗುತ್ತದೆ. ಎಲ್ಲ ಪರೀಕ್ಷಾ ಕೇಂದ್ರಗಳಲ್ಲಿ ಸಿಸಿಟಿವಿ ಕ್ಯಾಮರಾಗಳನ್ನು ಅಳವಡಿಕೆ ಮಾಡಲಾಗಿದೆ. ಸಿಸಿಟಿವಿ ಕ್ಯಾಮರಾ ಮೂಲಕ ಪರೀಕ್ಷಾ ಅವ್ಯವಹಾರಗಳ ಬಗ್ಗೆ ನಿಗಾ ಇರಿಸಲಾಗುತ್ತದೆ.
SSLC Exam ನಿರ್ದೇಶಕರು ಮತ್ತು ಸಹನಿರ್ದೇಶಕರ ವೃಂದದ ಅಧಿಕಾರಿಗಳನ್ನು ಜಿಲ್ಲಾ ಮೇಲುಸ್ತುವಾರಿ ಅಧಿಕಾರಿಗಳನ್ನಾಗಿ ನೇಮಕ ಮಾಡಲಾಗಿದೆ. ಇಲಾಖೆಯ ವಿವಿಧ ಹಂತದ ಅಧಿಕಾರಿಗಳನ್ನು ಪರೀಕ್ಷಾ ಕೇಂದ್ರಗಳಿಗೆ ಸ್ಥಾನಿಕ ಜಾಗೃತ ದಳದಅಧಿಕಾರಿಗಳನ್ನಾಗಿ ನೇಮಿಸಲಾಗಿದೆ.