Sunday, August 2, 2026
Sunday, August 2, 2026

Geetha Shivarajkumar ಚಂದ್ರಗುತ್ತಿ ದೇವಿ ಆಶೀರ್ವಾದ ಪಡೆದ ಗೀತಾ ಶಿವರಾಜ್ ಕುಮಾರ್

Date:

Geetha Shivarajkumar ಐತಿಹಾಸಿಕ ಹಾಗೂ ಪುರಾಣ ಪ್ರಸಿದ್ಧ ಮಲೆನಾಡಿನ ಶಕ್ತಿ ಕೇಂದ್ರವಾದಚಂದ್ರಗುತ್ತಿ ಶ್ರೀ ರೇಣುಕಾಂಬ ದೇವಸ್ಥಾನಕ್ಕೆ ಹೋಳಿ ಹುಣ್ಣಿಮೆಯ ದಿನವಾದ ಸೋಮವಾರ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ನಿಯೋಜಿತ ಅಭ್ಯರ್ಥಿ ಗೀತಾ ಶಿವರಾಜ್‌ಕುಮಾರ್, ಚಲನಚಿತ್ರ ನಟ ಶಿವರಾಜ್‌ಕುಮಾರ್ ಮತ್ತು ಸಚಿವ ಎಸ್. ಮಧು ಬಂಗಾರಪ್ಪ ಭೇಟಿ ನೀಡಿ ರೇಣುಕಾಂಬೆಗೆ ವಿಶೇ? ಪೂಜೆ ಸಲ್ಲಿಸಿದರು.
ನಂತರ ದೇವಸ್ಥಾನದ ಆವರಣದಲ್ಲಿರುವ ಪರಿವಾರ ದೇವರುಗಳಾದ ಕಾಲಭೈರವ, ನಾಗದೇವತೆ, ಮಾತಂಗಿ, ಪರಶುರಾಮ, ತ್ರಿಶೂಲದ ಭೈರಪ್ಪ, ದೇಗುಲಕ್ಕೆ ತೆರಳಿ ಪೂಜೆ ಸಲ್ಲಿಸಿದರು.
ನಂತರ ಪತ್ರಕರ್ತರೊಂದಿಗೆ ಮಾತನಾಡಿದ ಕಾಂಗ್ರೆಸ್ ನಿಯೋಜಿತ ಅಭ್ಯರ್ಥಿ ಗೀತಾ ಶಿವರಾಜ್‌ಕುಮಾರ್, ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳು ಮತ್ತು ತಂದೆ ಎಸ್. ಬಂಗಾರಪ್ಪ ಅವರು ಕ್ಷೇತ್ರ ಮತ್ತು ಜಿಲ್ಲೆಗೆ ಮಾಡಿರುವ ಅಭಿವೃದ್ಧಿ ಕಾರ್ಯಗಳು ತಮ್ಮ ಗೆಲುವಿಗೆ ನೆರವಾಗಲಿವೆ. ಚುನಾವಣಾ ಪೂರ್ವವಾಗಿ ಈಗಾಗಲೇ ಜಿಲ್ಲೆಯಾದ್ಯಂತ ಪ್ರವಾಸ ಕೈಗೊಂಡಿದ್ದೇವೆ. ಜನತೆಯಿಂದ ಉತ್ತಮ ಬೆಂಬಲ ವ್ಯಕ್ತವಾಗುತ್ತಿದೆ. ಜನತೆ ಒಮ್ಮೆ ನನಗೆ ತಮ್ಮ ಸೇವೆ ಮಾಡುವ ಅವಕಾಶ ಕಲ್ಪಿಸಿದರೆ ಕ್ಷೇತ್ರದ ಮನೆ ಮಗಳಾಗಿ ಮತ್ತು ಸಚಿವ ಮಧು ಬಂಗಾರಪ್ಪ ಹಾಗೂ ಪಕ್ಷದ ಹಿರಿಯರ ಮಾರ್ಗದರ್ಶನದಲ್ಲಿ ಜಿಲ್ಲೆಯ ಅಭಿವೃದ್ಧಿಗೆ ಶ್ರಮಿಸುತ್ತೇವೆ ಎಂದು ತಿಳಿಸಿದರು.
ಚಲನಚಿತ್ರನಟ ಶಿವರಾಜ್‌ಕುಮಾರ್ ಮಾತನಾಡಿದರು.
ಈ ಸಂದರ್ಭದಲ್ಲಿ ಆರ್ಯ ಈಡಿಗ ಸಮಾಜ ತಾಲೂಕು ಅಧ್ಯಕ್ಷ ಎಚ್. ಗಣಪತಿ ಹುಲ್ತಿಕೊಪ್ಪ, ಜಿ.ಪಂ. ಮಾಜಿ ಸದಸ್ಯ ತಬಲಿ Geetha Shivarajkumar ಬಂಗಾರಪ್ಪ, ಗ್ರಾ.ಪಂ. ಉಪಾಧ್ಯಕ್ಷ ಎಂ.ಬಿ. ರೇಣುಕಾಪ್ರಸಾದ್, ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ₹ 6.400 ಕೋಟಿ ವೆಚ್ಚದ ಶಿವಮೊಗ್ಗ- ತುಮಕೂರು ಚತುಷ್ಪಥ ರಸ್ತೆ ಮುಂದಿನ ಮಾರ್ಚ್ ಗೆ ಸಿದ್ಧ- ಬಿ.ವೈ.ರಾಘವೇಂದ್ರ

B.Y. Raghavendra ಮಲೆನಾಡು ಹಾಗೂ ರಾಜಧಾನಿ ಬೆಂಗಳೂರು ನಡುವಿನ ಸಂಪರ್ಕವನ್ನು ಕ್ರಾಂತಿಕಾರಕವಾಗಿ...

S. N. Channabasappa ಬಡಾವಣೆಗಳಿಗೆ ಮೂಲಭೂತ ಸೌಕರ್ಯ ಒದಗಿಸುವುದು ನಮ್ಮ ಮುಖ್ಯ ಕರ್ತವ್ಯ- ಎಸ್.ಎನ್.ಚನ್ನಬಸಪ್ಪ

S. N. Channabasappa ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಒಳಪಡುವ...

Rotary Club of Shivamogga ಮಕ್ಕಳಲ್ಲಿ ರೋಟರಿ ಸಂಸ್ಥೆ ನಾಯಕತ್ವ ಗುಣಗಳನ್ನ ಬೆಳೆಸುತ್ತದೆ- ಡಿ.ಕೆ.ನರಹರಿ

Rotary Club of Shivamogga ರೋಟರಿ ಸಂಸ್ಥೆಯು ಮಕ್ಕಳಿಗೆ ಶಾಲಾ ಹಂತದಲ್ಲಿಯೇ...

B.Y. Raghavendra ಹವಾಮಾನ ಆಧಾರಿತ ಬೆಳೆವಿಮೆ: ಅರ್ಜಿ ಸಲ್ಲಿಕೆ ಅಂತಿಮ ದಿನಾಂಕ ವಿಸ್ತರಿಸಿ- ಸಂಸದ ಬಿ.ವೈ‌.ರಾಘವೇಂದ್ರ

B.Y. Raghavendra ಮುಂಗಾರು ಹಂಗಾಮಿನಲ್ಲಿ ರಾಜ್ಯಾದ್ಯಂತ ವಾಡಿಕೆಗಿಂತ ಶೇ.34 ರಷ್ಟು ಮಳೆ...