Tuesday, October 1, 2024
Tuesday, October 1, 2024

DC Shivamogga ಅರ್ಥಪೂರ್ಣ ಮತ್ತು ಸರಳ ಜಯಂತಿ ಆಚರಣೆ : ಗುರುದತ್ತ ಹೆಗಡೆ

Date:

DC Shivamogga ಲೋಕಸಭಾ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವ ಪ್ರಯುಕ್ತ ಡಾ.ಬಾಬು ಜಗಜೀವನರಾಂ ಮತ್ತು ಡಾ.ಬಿ.ಆರ್.ಅಂಬೇಡ್ಕರ್‍ರವರ ಜಯಂತಿಗಳನ್ನು ಸರಳವಾಗಿ ಹಾಗೂ ಅರ್ಥಪೂರ್ಣವಾಗಿ ಆಚರಿಸಲಾಗುವುದು ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಹೇಳಿದರು.

ಏ.5 ರಂದು ಡಾ.ಬಾಬು ಜಗಜೀವನರಾಂ ಮತ್ತು ಏ.14 ರಂದು ಡಾ.ಬಿ.ಆರ್.ಅಂಬೇಡ್ಕರ್‍ರವರ ಜನ್ಮ ದಿನಾಚರಣೆ ಕಾರ್ಯಕ್ರಮದ ಕುರಿತು ಇಂದು ಜಿಲ್ಲಾಡಳಿತ ಕಚೇರಿಯಲ್ಲಿ ಏರ್ಪಡಿಸಲಾಗಿದ್ದ ಪುರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಲೋಕಸಭಾ ಚುನಾವಣಾ ನೀತಿ ಸಂಹಿತೆ ಜಾರಿ ಹಿನ್ನೆಲೆ ಸರ್ಕಾರವು ಜಯಂತಿಗಳನ್ನು ಸರಳವಾಗಿ ಆಚರಿಸುವಂತೆ ನಿರ್ದೇಶನ ನೀಡಿದ್ದು ಅದರ ಪ್ರಕಾರ ಏ.5 ರಂದು ಡಾ.ಬಾಬು ಜಗಜೀವನರಾಂ ಮತ್ತು ಏ.14 ರಂದು ಡಾ.ಬಿ.ಆರ್.ಅಂಬೇಡ್ಕರ್‍ರವರ ಜಯಂತಿಗಳನ್ನು ಸರಳವಾಗಿ ಮತ್ತು ಅರ್ಥಪೂರ್ಣವಾಗಿ ಆಚರಿಸಲು ಕ್ರಮ ವಹಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಅವರು ಸೂಚನೆ ನೀಡಿದರು.

ಸಭೆಯಲ್ಲಿ ದಲಿತ ಸಂಘಟನೆಗಳ ಮುಖಂಡರುಗಳು ಮಾತನಾಡಿ, ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವ ಹಿನ್ನೆಲೆಯಲ್ಲಿ ಜಯಂತಿಗಳನ್ನು ಯಾವುದೇ ಮೆರವಣಿಗೆ ಇಲ್ಲದೇ, ಒಳಾಂಗಣದಲ್ಲಿ ಸರಳವಾಗಿ, ಡಾ.ಬಿ.ಆರ್.ಅಂಬೇಡ್ಕರ್‍ರವರ ವಿಚಾರಧಾರೆಗಳ ಕುರಿತು ಓರ್ವ ಉಪನ್ಯಾಸಕರಿಂದ ಉಪನ್ಯಾಸ ನೀಡಲು ಹಾಗೂ ಕ್ರಾಂತಿಗೀತೆ-ಶಾಸ್ತ್ರೀಯ ಸಂಗೀತ ಗಾಯನಕ್ಕೆ ಅವಕಾಶ ನಿಡಬೇಕೆಂದರು ಕೋರಿದರು.

DC Shivamogga ಹಾಗೂ ಡಾ.ಬಾಬು ಜಗಜೀವನರಾಂ ಭವನದ ಕಾಮಗಾರಿ ಬಹುದಿನಗಳಿಂದ ನೆನೆಗುದಿಗೆ ಬಿದ್ದಿದ್ದು, ಆದಷ್ಟು ಶೀಘ್ರದಲ್ಲಿ ಕಾಮಗಾರಿ ಪೂರ್ಣಗೊಳಿಸಿ ಮುಂದಿನ ದಿನಗಳಲ್ಲಿ ಅಲ್ಲಿಯೇ ಡಾ.ಬಾಬು ಜಗಜೀವನರಾಂ ಜಯಂತಿ ಆಚರಣೆ ಆಗುವಂತೆ ಕ್ರಮ ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿಗಳಲ್ಲಿ ಮುಖಂಡರು ಮನವಿ ಮಾಡಿದರು. ಅಲ್ಲದೇ ಸರ್ಕಾರಿ ಕಚೇರಿಗಳಲ್ಲಿ ದೇವರುಗಳ ಭಾವಚಿತ್ರಗಳ ಬದಲಾಗಿ ರಾಷ್ಟ್ರನಾಯಕರ ಭಾವಚಿತ್ರಗಳನ್ನು ಇರಿಸುವಂತೆ ನಿರ್ದೇಶನ ನೀಡಬೇಕೆಂದು ಕೋರಿದರು.

ಸಭೆಯಲ್ಲಿ ದಲಿತ ಸಂಘಟನೆಗಳ ಮುಖಂಡರಾದ ಆರ್.ಶಿವಣ್ಣ, ಹಾಲೇಶಪ್ಪ, ರಾಜಕುಮಾರ್, ಹರಮಘಟ್ಟ ರಂಗಪ್ಪ, ಪ್ರಭು, ಬೂದಿಗೆರೆ ಬಸವರಾಜ್, ಪ್ರಕಾಶ್ ಇತರೆ ಮುಖಂಡರು ಹಾಗೂ ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಮಲ್ಲೇಶಪ್ಪ, ವಿವಿಧ ಇಲಾಖೆಗಳ ಅಧಿಕಾರಿಗಳು ಹಾಜರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

CM Siddharamaih ಪರಿಹಾರ ರೂಪದಲ್ಲಿ ಪಡೆದಿದ್ದ ನಿವೇಶನಗಳನ್ನ ಪತ್ನಿ ಹಿಂದಿರುಗಿಸಿದ್ದಾರೆ- ಸಿದ್ಧರಾಮಯ್ಯ

CM Siddharamaih ಮೈಸೂರಿನ ಮುಡಾ ಭೂಸ್ವಾಧೀನ ನಡೆಸದೆ ವಶಕ್ಕೆ ಪಡೆದಿದ್ದ...

R. Ashok ಸಿದ್ಧರಾಮಯ್ಯನವರಿಗೆ ತಮ್ಮ ತಪ್ಪಿನ ಅರಿವಾಯಿತಲ್ಲ”-ಆರ್ .ಅಶೋಕ್ ಪ್ರತಿಕ್ರಿಯೆ

R. Ashok ಮೂಡಾ ಹಗರಣದಲ್ಲಿ ಕಾನೂನಿನ ಕುಣಿಕೆ ಬಿಗಿಯಾಗುತ್ತಿದ್ದಂತೆ ಸಿಎಂ ಸಿದ್ಧರಾಮಯ್ಯ...

Shivamogga-Bhadravathi Urban Development Authority ಊರಗಡೂರು ನಿವೇಶನ ಪಡೆಯಲು ಅರ್ಜಿ ಸಲ್ಲಿಕೆ ಅಂತಿಮ ದಿನಾಂಕ ಮುಂದೂಡಿಕೆ

Shivamogga-Bhadravathi Urban Development Authority ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರವು ಶಿವಮೊಗ್ಗ ನಗರದ...