Siddaramaiah ನಮ್ಮ ಕಾರ್ಯಕರ್ತರಿಗೆ ನಾವು ಮಾಡಿರುವ ಕೆಲಸವನ್ನು ಜನರಿಗೆ ಮುಟ್ಟಿಸುವ ಕೆಲಸ ಮಾಡಬೇಕು ಎಂದು ಹೇಳಿದ್ದೇನೆ. ಹಿಂದಿನ ಬಾರಿ ನಮ್ಮ ಸರ್ಕಾರ 168 ಭರವಸೆಗಳಲ್ಲಿ 158 ಭರವಸೆಗಳನ್ನು ಈಡೇರಿಸಿತ್ತು. ಹಾಗಾಗಿ ನುಡಿದಂತೆ ನಡೆದಿದ್ದೇವೆ ಎಂದು ಹೆಮ್ಮೆಯಿಂದ ಹೇಳುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ.
ನಾವು ಹಣ ಕೇಳುತ್ತಿರುವುದು ಗ್ಯಾರಂಟಿಗಳಿಗೆ ಎಂದು ಸೀತಾರಾಮನ್
ಹೇಳುತ್ತಾರೆ. ಈ ಬಗ್ಗೆ ಒಂದೇ ವೇದಿಕೆಯಲ್ಲಿ ಚರ್ಚೆ ಮಾಡಲು ಬಿಜೆಪಿಯವರಿಗೆ ನಾವು ಆಹ್ವಾನ ನೀಡಿದ್ದೇವೆ. ಗ್ಯಾರಂಟಿಗಳಿಗೆ ಒಂದು ಪೈಸೆಯನ್ನೂ ಕೊಡಬೇಡಿ. ಮುಂದಿನ ವರ್ಷದಲ್ಲಿ ಗ್ಯಾರಂಟಿ ಯೋಜನೆಗಳಿಗೆ 52,009 ಕೋಟಿ ರೂ.ಗಳನ್ನು ಬಜೆಟ್ ನಲ್ಲಿ ಮೀಸಲಿರಿಸಲಾಗಿದೆ.
Siddaramaiah 2023-24 ರ ಬಜೆಟ್ ನಲ್ಲಿ ಭದ್ರಾ ಮೇಲ್ದಂಡೆ ಯೋಜನೆಗೆ 5,300 ಕೋಟಿ ರೂ.ಗಳನ್ನು ಕೊಡುತ್ತೇವೆ ಎಂದಿದ್ದರು, ಒಂದೇ ಒಂದು ಪೈಸೆ ಬಂದಿಲ್ಲ. ಬಜೆಟ್ ನಲ್ಲಿ ಘೋಷಿಸಿದಂತೆ ಹಣ ಕೊಟ್ಟಿದ್ದೇವೆ ಎಂದು ದೇವರ ಮೇಲೆ ಪ್ರಮಾಣ ಮಾಡಿ ಹೇಳಲಿ.
18,171 ಕೋಟಿ ರೂ.ಗಳ ಬರಪರಿಹಾರವನ್ನು ಕೊಡಲು ಮನವಿ ಮಾಡಿ 5 ತಿಂಗಳಾಗಿದ್ದರೂ ಒಂದು ರೂಪಾಯಿ ನೀಡಿಲ್ಲ. ರೈತರು ಕಷ್ಟದಲ್ಲಿದ್ದರೂ ಈವರೆಗೆ ಒಂದು ರೂಪಾಯಿ ಬಿಡುಗಡೆ ಮಾಡಿಲ್ಲ. ಇದು ಸತ್ಯ. ಬಿಜೆಪಿ
ಕರ್ನಾಟಕದ ಜನರನ್ನು ಅತ್ಯಂತ ಅಲಕ್ಷ್ಯದಿಂದ ಕಾಣುತ್ತಿದ್ದು, ಮಲತಾಯಿ ಧೋರಣೆ ತೋರುತ್ತಿದ್ದಾರೆ ಎಂದು ಹೇಳಿದ್ದಾರೆ.