Thursday, June 18, 2026
Thursday, June 18, 2026

Geetha Shivarajkumar ರೈತರಿಗೆ ಬೆಂಬಲ ಬೆಲೆ ಸಿಗುವಂತೆ ಕಾರ್ಯ ನಿರ್ವಹಿಸುವೆ- ಗೀತಾ ಶಿವರಾಜ್ ಕುಮಾರ್

Date:

Geetha Shivarajkumar ಶಿವಮೊಗ್ಗ ಜಿಲ್ಲೆಯ ಗ್ರಾಮಾಂತರ ಪ್ರದೇಶಗಳಿಗೆ ಮಾಜಿ ಮುಖ್ಯಮಂತ್ರಿ ಬಂಗಾರಪ್ಪ ಅವರು ಅಪಾರ ಕೊಡುಗೆ ನೀಡಿದ್ದಾರೆ.

ಅದೇ, ಧೈರ್ಯದಿಂದ ಗೀತಾಕ್ಕಗೆ ಮತ ನೀಡಿ, ಚುನಾವಣೆಯಲ್ಲಿ ಗೆಲುವು ಸಾಧಿಸಲು ಆಶೀರ್ವದಿಸಬೇಕು ಎಂದು ಕೇಳಿಕೊಳ್ಳುತ್ತಿದ್ದೇನೆ‌ ಎಂದು ಶಿಕ್ಷಣ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಮಧುಬಂಗಾರಪ್ಪ ಹೇಳಿದರು.

ತಾಲ್ಲೂಕಿನ ಹಾರನಹಳ್ಳಿ ಗ್ರಾಮದಲ್ಲಿ ಬುಧವಾರ ಆಯೋಜಿಸಿದ್ದ ಕಾಂಗ್ರೆಸ್ ಪಕ್ಷದ ಲೋಕಸಭಾ ಚುನಾವಣೆ ಶಿವಮೊಗ್ಗ ಕ್ಷೇತ್ರದ ಅಭ್ಯರ್ಥಿ ಗೀತಾ ಶಿವರಾಜಕುಮಾರ್ ಪರ ಪ್ರಚಾರ ಸಭೆಯಲ್ಲಿ ಮಾತನಾಡಿದರು.

ರಾಜ್ಯದಲ್ಲಿ ಗ್ಯಾರಂಟಿ ಯೋಜನೆಗಳು ಜನ ಸಾಮಾನ್ಯರಿಗೆ ದಾರಿ ದೀಪವಾಗಿವೆ. ಅದೇ ರೀತಿ, ಎಸ್.ಬಂಗಾರಪ್ಪ ಅವರ ಆಡಳಿತದ ಅವಧಿಯಲ್ಲಿ ಉಚಿತ ವಿದ್ಯುತ್ ಸೇರಿದಂತೆ ಅನೇಕ ಯೋಜನೆಗಳನ್ನು ಜಾರಿಗೆ ತಂದು ಶೋಷಿತ ವರ್ಗಕ್ಕೆ ನೆರಳಾಗಿ ನಿಂತಿದ್ದರು ಎಂದರು.

ಲೋಕಸಭಾ ಕ್ಷೇತ್ರ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ್ ಮಾತನಾಡಿ, ರೈತರಿಗೆ ಬೆಂಬಲ ಬೆಲೆ ಸಿಗುವ ನಿಟ್ಟಿನಲ್ಲಿ ಕಾರ್ಯ ನಿರ್ವಹಿಸುತ್ತೇನೆ. ರಾಜ್ಯ ಮಟ್ಟದಲ್ಲಿ ಸಚಿವ ಮಧು ಬಂಗಾರಪ್ಪ ರೈತರ ಕಷ್ಟಗಳಿಗೆ ನೆರವಾದರೆ, ಕೇಂದ್ರದ ಹಂತದಲ್ಲಿ ರೈತರ ಕಷ್ಟಗಳಿಗೆ ಸ್ಪಂದಿಸಲು ನಾನು ಶ್ರಮಿಸುತ್ತೇನೆ. ಅದೇ ಕಾರಣಕ್ಕೆ ನನಗೆ ಮತ ನೀಡಿ ಎಂದು ಕೋರಿದರು.

Geetha Shivarajkumar ನಟ ಶಿವರಾಜ ಕುಮಾರ್ ಮಾತನಾಡಿ, ಜನರು ಬದಲಾವಣೆ ಬಯಸುತ್ತಿದ್ದಾರೆ. ಗ್ಯಾರಂಟಿ ಯೋಜನೆಗಳ ಬಗ್ಗೆ ಹೆಚ್ಚು ಮಾತನಾಡುವುದಿಲ್ಲ. ಆದರೆ, ಈ ಯೋಜನೆಗಳಿಂದ ಬಡವರಿಗೆ ಸಹಾಯ ಆಗ ಬೇಕು. ಆಗ ಮಾತ್ರ ಸರ್ಕಾರದ ಯೋಜನೆಗಳಿಗೆ ಬೆಲೆ ಸಿಗಲಿದೆ. ಈ ನಿಟ್ಟಿನಲ್ಲಿ ಯೋಜನೆಗಳು ಜನಸಾಮಾನ್ಯರಿಗೆ ನೆರವಾಗಿವೆ ಎಂದು ನಾನು ಬಯಸುತ್ತೇನೆ ಎಂದು ಹೇಳಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ನಿರ್ಲಕ್ಷ್ಯ ಮಾಡದ ನಿಶ್ಶಬ್ದ ಕಾಯಿಲೆ, ಕಿಡ್ನಿ ಕ್ಯಾನ್ಸರ್- ಡಾ.ಯು‌.ಎಸ್.ಕಾರ್ತಿಕ್

Klive Special Article ಕಿಡ್ನಿ ಕ್ಯಾನ್ಸರ್ : ನೀವು ನಿರ್ಲಕ್ಷಿಸಬಾರದ ನಿಶ್ಯಬ್ದ...

K.S. Eshwarappa ಮನಸ್ಸು ಬಿಜೆಪಿ: ದೇಹ ಮಾತ್ರ ಹೊರಗೆ : ಕೆ.ಎಸ್.ಈಶ್ವರಪ್ಪ

K.S. Eshwarappa ಪಕ್ಷದ ಬೆಳವಣಿಗೆ ಮತ್ತು ಶುದ್ಧೀಕರಣಕ್ಕೆ ಆಗ್ರಹಿಸಿ ಬಿಜೆಪಿಯಿಂದ ಹೊರ...

ಸಮಾನತೆ, ಸ್ವಾವಲಂಬನೆ ಸಾಧಿಸುವಲ್ಲಿ ಸಹಕಾರ ಸಂಘಗಳ ಪಾತ್ರ ಅಪಾರ : ಶ್ರೀರಂಭಾಪುರಿಶ್ರೀ

ಸಮಾನತೆ, ಸ್ವಾವಲಂಬನೆ ಸಾಧನೆಯಲ್ಲಿ ಸಹಕಾರ ಸಂಘಗಳ ಪಾತ್ರ ಮಹತ್ವವಾದದು. ಅಭಿವೃದ್ಧಿಯನ್ನು ಸಾಧಿಸಲು...