Friday, December 5, 2025
Friday, December 5, 2025

Model Code of Conduct ಪರವಾನಗಿಯಿಲ್ಲದೆ ಸಾಗಿಸುತ್ತಿದ್ದ ₹2,23,046 ಮೌಲ್ಯದ ಅಕ್ರಮ ಮದ್ಯ ವಶ

Date:

Model Code of Conduct ಲೋಕಸಭಾ ಚುನಾವಣಾ ನೀತಿ ಸಂಹಿತೆ ಜಾರಿ ಹಿನ್ನಲೆಯಲ್ಲಿ ಮಾ. 28 ರ ರಾತ್ರಿ ಸಾಗರ ಮಾರ್ಗವಾಗಿ ಬರುತ್ತಿದ್ದ ಟಾಟಾ ಏಸ್ ಗೂಡ್ಸ್ ವಾಹನದಲ್ಲಿ ಸಾಗಿಸುತ್ತಿದ್ದ ಅಂದಾಜು ರೂ. 2,23,046 ಮೌಲ್ಯದ ಪರವಾನಗಿ ಇಲ್ಲದ ಒಟ್ಟು 51.84 ಲೀಟರ್ ಅಕ್ರಮ ಮದ್ಯವನ್ನು ವಶಪಡಿಸಿಕೊಂಡು ಪ್ರಕರಣ ದಾಖಲಿಸಲಾಗಿದೆ.


Model Code of Conduct ಅಬಕಾರಿ ಉಪ ಆಯುಕ್ತರು, ಶಿವಮೊಗ್ಗ ಜಿಲ್ಲೆ, ಶಿವಮೊಗ್ಗ ಹಾಗೂ ಅಬಕಾರಿ ಉಪ ಅಧೀಕ್ಷಕರು, ಸಾಗರ ಉಪ ವಿಭಾಗರವರ ಮಾರ್ಗದರ್ಶನದಲ್ಲಿ ದಿನಾಂಕ 28.03.2024 ರಂದು ರಾತ್ರಿ 09.45 ಕ್ಕೆ ಸಾಗರ ತಾಲ್ಲೂಕು ಕಾನಲೆ ಕ್ರಾಸ್ ಬಳಿ ರಸ್ತೆಗಾವಲು ನಡೆಸುತ್ತಿದ್ದಾಗ ಟಾಟಾ ಏಸ್ ಗೂಡ್ಸ್ ನಾಲ್ಕು ಚಕ್ರದ ವಾಹನವು ತಾಳಗುಪ್ಪ ಕಡೆಯಿಂದ ಸಾಗರ ಮಾರ್ಗವಾಗಿ ಬರುತ್ತಿದ್ದು ತಪಾಸಣೆ ನಡೆಸುವ ಸಲುವಾಗಿ ನಿಲ್ಲಿಸಲು ಸೂಚಿಸಿದಾಗ ವಾಹನವನ್ನು ನಿಲ್ಲಿಸದೇ ತಿರುಗಿಸುವ ಬರದಲ್ಲಿ ವಾಹನವು ಬಂದ್ ಆಗಿದ್ದು, ತಕ್ಷಣ ಚಾಲನೆ ಮಾಡುತ್ತಿದ್ದ ಓರ್ವ ವ್ಯಕ್ತಿಯು ವಾಹನದಿಂದ ಇಳಿದು ಓಡಲಾರಂಭಿಸಿದನು.
ಆತನ್ನನ್ನು ಹಿಡಿಯಲು ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಪ್ರಯತ್ನಿಸಲಾಗಿ ಸಿಗದೇ ಕತ್ತಲೆಯಲ್ಲಿ ಓಡಿ ಮರೆಯಾಗಿರುತ್ತಾನೆ. ನಂತರ ಬಿಳಿ ಬಣ್ಣದ ಟಾಟಾ ಏಸ್ ನಾಲ್ಕು ಚಕ್ರದ ವಾಹನದ ನೋಂದಣಿ ಸಂಖ್ಯೆ ಕೆಎ-15 9940 ವನ್ನು ತಪಾಸಣೆ ನಡೆಸಲು ನಿರ್ಧರಿಸಿ ಎಫ್‍ಎಸ್‍ಟಿ -4ಸಿ ತಾಳಗುಪ್ಪರವರನ್ನು ಸ್ಥಳಕ್ಕೆ ಕರೆಸಿಕೊಂಡು ವಾಹನವನ್ನು ತಪಾಸಣೆ ನಡೆಸಲಾಗಿ ವಾಹನದ ಚಾಲಕನ ಸೀಟಿನ ಪಕ್ಕದ ಸೀಟಿನ ಮೇಲೆ ಮತ್ತು ಕೆಳಗೆ 02 ನೀಲಿ ಬಣ್ಣದ ಪ್ಲಾಸ್ಟಿಕ್ ಚೀಲಗಳಿದ್ದು ಒಂದು ಚೀಲದಲ್ಲಿ 90 ಮಿ.ಲೀ ಒರಿಜಿನಲ್ ಛಾಯ್ಸ್ ವಿಸ್ಕಿ ಹೆಸರಿನ ಮದ್ಯ ತುಂಬಿದ 288 ಟೆಟ್ರಾ ಪ್ಯಾಕ್ ಗಳು ಹಾಗೂ ಎರಡನೇ ಚೀಲದಲ್ಲಿ 90 ಮಿ.ಲೀ ಕ್ಯಾಪ್ಟನ್ ಮಾರ್ಟಿನ್ ವಿಸ್ಕಿ ಹೆಸರಿನ 288 ಮದ್ಯ ತುಂಬಿದ ಟೆಟ್ರಾ ಪ್ಯಾಕ್‍ಗಳಿದ್ದು ಪರವಾನಿಗೆ ಇಲ್ಲದೆ ಒಟ್ಟು 51.84 ಲೀಟರ್ ಮದ್ಯ ವಾಹನದಲ್ಲಿ ದಾಸ್ತಾನು ಹೊಂದಿ ಅಕ್ರಮವಾಗಿ ಸಾಗಾಣಿಕೆ ಮಾಡುತ್ತಿದ್ದದ್ದು ಕಂಡುಬಂದಿರುತ್ತದೆ.
ಇದು ಕರ್ನಾಟಕ ಅಬಕಾರಿ ಕಾಯಿದೆ 1965 ರ ಕಲಂ 11,14, ರೀತ್ಯಾ ಅಪರಾಧವಾಗಿದ್ದು, ಇದೇ ಕಾಯಿದೆ ಅಡಿ 32(1), 38(ಎ), ರ ರೀತ್ಯಾ ಶಿಕ್ಷಾರ್ಹ ಅಪರಾಧವಾಗಿರುತ್ತದೆ. ಆರೋಪಿತನು ದಾಳಿ ವೇಳೆ ತಲೆಮರೆಸಿಕೊಂಡಿದ್ದು, ಮೇಲ್ಕಾಣಿಸಿದ ಮುದ್ದೆಮಾಲು ಹಾಗೂ ವಾಹನವನ್ನು ಪಂಚರ ಸಮಕ್ಷಮ ಪಂಚನಾಮೆಯಡಿಯಲ್ಲಿ ಜಫ್ತುಪಡಿಸಿಕೊಂಡು ಆರೋಪಿ ಹಾಗೂ ವಾಹನದ ಮಾಲೀಕರ ವಿರುದ್ಧ ಮೊಕದ್ದಮೆ ದಾಖಲು ಮಾಡಲಾಗಿರುತ್ತದೆ. ವಾಹನ ಮತ್ತು ಮುದ್ದೆಮಾಲಿನ ಅಂದಾಜು ಮೌಲ್ಯ 2,23,046 ರೂಗಳಾಗಿರುತ್ತದೆ ಎಂದು ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Indian Medical Association 30 ವರ್ಷ ದಾಟಿದ ಮಹಿಳೆಯರು ಪ್ಯಾಪ್ಸ್ ಮಿಯರ್ ಟೆಸ್ಟ್ ಅನ್ನು 3 ವರ್ಷಕ್ಕೆ ಒಂದು ಬಾರಿ‌ ಮಾಡಿಸಬೇಕು- ಡಾ.ರಕ್ಷಾರಾವ್

Indian Medical Association ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಜಾಗ್ರತೆ ವಹಿಸಬೇಕು...

MESCOM ಡಿಸೆಂಬರ್ ‌9. ಕುಂಸಿ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪವಿಭಾಗದಲ್ಲಿ ಡಿ. 09 ರಂದು ಬೆಳಗ್ಗೆ 11.00...