Income Tax Department ಲೋಕಸಭಾ ಚುನಾವಣೆ ಇನ್ನೇನು ಹತ್ತಿರ ಬರುತ್ತಿದೆ. ಈ ಸಂದರ್ಭದಲ್ಲಿಯೇ, ಆದಾಯ ತೆರಿಗೆ ಇಲಾಖೆಯು ಕಾಂಗ್ರೆಸ್ ಗೆ ದೊಡ್ಡ ಶಾಕ್ ನೀಡಿದೆ. ದಂಡ, ಬಡ್ಡಿ ಸೇರಿದಂತೆ ಐಟಿ ಇಲಾಖೆಗೆ 1700 ಕೋಟಿ ರೂಪಾಯಿ ಕಟ್ಟುವ ಅನಿವಾರ್ಯತೆ, ಕಾಂಗ್ರೆಸ್ ಗೆ ಬಂದಿದೆ.
ತೆರಿಗೆ ನೋಟಿಸ್ ಗಳನ್ನು ಪ್ರಶ್ನಿಸಿ. ಸಲ್ಲಿಸಿದ ಅರ್ಜಿಯನ್ನ ದೆಹಲಿ ಹೈಕೋರ್ಟ್ ವಜಗೊಳಿಸಿತ್ತು. ನಂತರ ಆದಾಯ ತೆರಿಗೆ ಇಲಾಖೆಯಿಂದ 1700 ಕೋಟಿ ರೂಪಾಯಿ ಮೊತ್ತದ ಡಿಮ್ಯಾಂಡ್ ನೋಟಿಸ್ ನ್ನು ಕಾಂಗ್ರೆಸ್ ಸ್ವೀಕರಿಸಿದೆ.
ಏಪ್ರಿಲ್ 19 ರಿಂದ ಪ್ರಾರಂಭವಾಗುವ ಲೋಕಸಭೆ ಚುನಾವಣೆಗೆ ಮುಂಚಿತವಾಗಿ ಬಿಜೆಪಿ ತೆರಿಗೆ ಅಧಿಕಾರಿಗಳನ್ನು ವಿಪಕ್ಷಗಳ ವಿರುದ್ಧ ದುರ್ಬಳಿಕೆ ಮಾಡಿಕೊಳ್ಳುತ್ತಿದೆ ಎಂದು ಕಾಂಗ್ರೆಸ್ ಆರೋಪಿಸಿದೆ. ಈ ಬಗ್ಗೆ ಎಐಸಿಸಿ ಕೇಂದ್ರ ಕಚೇರಿಯಲ್ಲಿ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಮತ್ತು ರಾಜ್ಯಸಭಾ ಸದಸ್ಯ ಅಜಯ್ ಮಾಕನ್ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ್ದಾರೆ.
Income Tax Department ಕೇಂದ್ರ ಸರ್ಕಾರ ಕಾರ್ಯ ವಿಧಾನವನ್ನ ಬಳಸಿಕೊಂಡು ವಿರೋಧ ಪಕ್ಷಗಳ ಮೇಲೆ ದಾಳಿ ಮಾಡುತ್ತಿದೆ. ಇದು ಪ್ರಜಾಪ್ರಭುತ್ವವನ್ನು ಕುಗ್ಗಿಸುವ ಪ್ರಯತ್ನವಾಗಿದೆ. ಬಿಜೆಪಿ ಕೂಡ ಯಾವುದೇ ಐಟಿ ರಿಟರ್ನ್ ಪಾವತಿಸಿಲ್ಲ. ಆದರೂ, ಸುರಕ್ಷಿತವಾಗಿದೆ. ಈ ಹಿಂದೆಯೂ ನಮ್ಮ ಖಾತೆಗಳನ್ನು ಸ್ಥಗಿತಗೊಳಿಸಲಾಗಿತ್ತು. ಈಗ ಹಣ ಪಾವತಿ ಮಾಡುವಂತೆ ಸೂಚಿಸಲಾಗಿದೆ. ಇದರಿಂದ ಮುಂದೆ ಬರುವ ಚುನಾವಣೆ ವೇಳೆ ಪಕ್ಷಕ್ಕೆ ಭಾರಿ ಹಿನ್ನಡೆ ಉಂಟಾಗಲಿದೆ ಎಂದು ಹೇಳಿದ್ದಾರೆ.