Wednesday, September 16, 2026
Wednesday, September 16, 2026

Yaduveer Krishnadatta  Wodeyar ಯದುವೀರ್ ಆಸ್ತಿ ವಿವರ ಸಲ್ಲಿಕೆ:₹5 ಕೋಟಿ ಆಸ್ತಿ ಘೋಷಣೆ

Date:

Yaduveer Wodeyar ಮೈಸೂರು-ಕೊಡಗು ಲೋಕಸಭಾ ಕ್ಷೇತ್ರಕ್ಕೆ ಬಿಜೆಪಿ ಅಭ್ಯರ್ಥಿಯಾಗಿ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಇಂದು ತಮ್ಮ ಉಮೇದುವಾರಿಕೆ ಸಲ್ಲಿಸಿದ್ದು, ಈ ವೇಳೆ ತಮ್ಮ ಆಸ್ತಿ ಘೋಷಣೆ ಮಾಡಿದ್ದಾರೆ.

ನಾಮಪತ್ರ ಸಲ್ಲಿಕೆ ವೇಳೆ ರಾಜಮಾತೆ ಪ್ರಮೋದಾದೇವಿ ಒಡೆಯರ್ ಪುತ್ರ ಯದುವೀರ್ ಒಡೆಯರ್ ಅವರಿಗೆ ಸಾಥ್ ನೀಡಿದರು. ನಾಮಪತ್ರ ಸಲ್ಲಿಕೆ ವೇಳೆ ಯದುವೀರ್ ಒಡೆಯರ್ 5 ಕೋಟಿ ರೂಪಾಯಿ ಆಸ್ತಿಯನ್ನು ಘೋಷಿಸಿಕೊಂಡಿದ್ದು, ತಮ್ಮ ಒಡೆತನದಲ್ಲಿ ಯಾವುದೇ ಮನೆ, ಕೃಷಿ ಭೂಮಿ, ನಿವೇಶನ ಮತ್ತು ಕಾರು ಹೊಂದಿಲ್ಲವೆಂದು ಯದುವೀರ್ ಒಡೆಯರ್ ಅಫಿಡವಿಟ್ನಲ್ಲಿ ಮಾಹಿತಿ ನೀಡಿದ್ದಾರೆ.

4 ಕೆಜಿ ಚಿನ್ನ:
ತಮ್ಮ ಅಫಿಡವಿಟ್ ನಲ್ಲಿ ಘೋಷಿಸಿಕೊಂಡಿರುವಂತೆ ಯದುವೀರ್ ಬಳಿ 1 ಲಕ್ಷ ರೂಪಾಯಿ ನಗದು ಹೊಂದಿದ್ದು, ವಿವಿಧ ಬ್ಯಾಂಕ್ ಖಾತೆಗಳಲ್ಲಿ ಸುಮಾರು 1.36 ಕೋಟಿ ರೂ. ಹೊಂದಿದ್ದಾರೆ. ಇದರ ಜೊತೆಗೆ 3.25 ಕೋಟಿ ಮೌಲ್ಯದ 4 ಕೆಜಿ ಚಿನ್ನ, 14 ಲಕ್ಷ ರೂಪಾಯಿ ಮೌಲ್ಯದ 20 ಕೆಜಿ ಬೆಳ್ಳಿಯನ್ನು ಹೊಂದಿದ್ದಾರೆ. ಒಟ್ಟು 4.99 ಕೋಟಿ ರೂಪಾಯಿ ಚರಾಸ್ತಿ ಹೊಂದಿರುವುದಾಗಿ ನಾಮಪತ್ರ ಸಲ್ಲಿಕೆ ವೇಳೆ ಯದುವೀರ್ ಒಡೆಯರ್ ಘೋಷಿಸಿಕೊಂಡಿದ್ದಾರೆ.

Yaduveer Krishnadatta  Wodeyar ಅಂತೆಯೇ ಯದುವೀರ್ ಪತ್ನಿ ತ್ರಿಷಿಕಾ ಅವರು, 75 ಸಾವಿರ ನಗದು, ಬ್ಯಾಂಕ್ನಲ್ಲಿ 1 ಲಕ್ಷ ರೂಪಾಯಿ ಹಣ ಠೇವಣಿ ಹೊಂದಿದ್ದಾರೆ. 5.5 ಲಕ್ಷ ರೂಪಾಯಿ ಮೌಲ್ಯದ 100 ಗ್ರಾಂ ಚಿನ್ನದ ಗಟ್ಟಿ , 90 ಲಕ್ಷ ರೂಪಾಯಿ ಮೌಲ್ಯದ 2 ಕೆಜಿ ಚಿನ್ನ ಮತ್ತು 7 ಲಕ್ಷ ರೂಪಾಯಿ ಮೌಲ್ಯದ 10 ಕೆಜಿ ಬೆಳ್ಳಿಯನ್ನು ಹೊಂದಿದ್ದಾರೆ. ತ್ರಿಷಿಕಾ ಒಟ್ಟು 1.04 ಕೋಟಿ ರೂಪಾಯಿ ಮೌಲ್ಯದ ಚಿರಾಸ್ತಿಯನ್ನು ಹೊಂದಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...