Sunday, August 2, 2026
Sunday, August 2, 2026

SVEEP Committee Shivamogga ಈ ಬಾರಿ ಶಿಕಾರಿಪುರ ವಿಧಾನಸಭಾ ಕ್ಷೇತ್ರದಲ್ಲಿ ಶೇ100 ಮತದಾನದ ಗುರಿ-ಭರತ್

Date:

SVEEP Committee Shivamogga ಶಿವಮೊಗ್ಗ ಜಿಲ್ಲೆ ಮತ್ತು ಶಿಕಾರಿಪುರ ತಾಲ್ಲೂಕು ಸ್ವೀಪ್ ಸಮಿತಿ ವತಿಯಿಂದ ಶಿಕಾರಿಪುರ ಪುರಸಭೆ ವತಿಯಿಂದ ಶನಿವಾರ ನಡೆಯುವ ವಾರದ ಸಂತೆಯಲ್ಲಿ ಮತದಾನ ಜಾಗೃತಿ ಕಾರ್ಯಕ್ರಮ ನಡೆಸಿಕೊಡಲಾಯಿತು.

ದಿನಾಂಕ 7.05.2024 ರಂದು ನಡೆಯುವ ಶಿವಮೊಗ್ಗ ಲೋಕಸಭಾ ಚುನಾವಣೆಯಲ್ಲಿ ಶಿಕಾರಿಪುರ ವಿಧಾನಸಭಾ ಕ್ಷೇತ್ರದಲ್ಲಿ ಶೇಕಡ ನೂರರಷ್ಟು ಮತದಾನ ಮಾಡುವ ಮೂಲಕ ರಾಜ್ಯದಲ್ಲಿಯೇ ಅತಿ ಹೆಚ್ಚು ಮತದಾನ ನಡೆದ ತಾಲೂಕು ಎಂಬ ಹೆಗ್ಗಳಿಕೆಗೆ ಪಾತ್ರರಾಗಬೇಕು ಎಂದು ಮುಖ್ಯ ಅಧಿಕಾರಿ ಭರತ್ ಕರೆ ನೀಡಿದರು.

ಪುರಸಭೆಯ ವ್ಯವಸ್ಥಾಪಕರಾದ ರಾಜಕುಮಾರ್ ಮಾತನಾಡಿ, “ಚುನಾವಣೆ ಪರ್ವ- ದೇಶದ ಗರ್ವ”, “ನನ್ನ ಮತ ನನ್ನ ಹಕ್ಕು” ಎಂಬ ಘೋಷವಾಕ್ಯಗಳೊಂದಿಗೆ ಪುರಸಭೆಯ ಮತದಾನ ಜಾಗೃತಿ ವಾಹನದಲ್ಲಿ ಚುನಾವಣಾ ಆಯೋಗದ ಎಲ್ಲಾ ರೀತಿಯ ಆಪ್ ಗಳನ್ನ ಅಳವಡಿಸಲಾಗಿದ್ದು ಸಾರ್ವಜನಿಕರು ಡೌನ್ಲೋಡ್ ಮಾಡಿಕೊಂಡು ಚುನಾವಣೆಗೆ ಸಂಬಂಧಿಸಿದ ಹೆಚ್ಚಿನ ಮಾಹಿತಿಯನ್ನು ಪಡೆಯಬಹುದು ಹಾಗೂ ದೂರುಗಳನ್ನು ಸಹ ದಾಖಲಿಸಬಹುದಾಗಿದೆ ಎಂದು ತಿಳಿಸಿದರು.

SVEEP Committee Shivamogga ಮತದಾನ ನಡೆಯುವ ದಿನಾಂಕದವರೆಗೂ ಶಿಕಾರಿಪುರ ಪಟ್ಟಣದ ಎಲ್ಲಾ ವಾರ್ಡ್‍ಳಲ್ಲಿ ಪ್ರತಿದಿನ ಈ ವಾಹನವು ಸಂಚರಿಸಲಿದ್ದು ಸಾರ್ವಜನಿಕರು ಅಗತ್ಯ ಮಾಹಿತಿಯನ್ನು ಪಡೆದುಕೊಳ್ಳುವಂತೆ ಎಂಸಿಸಿ ಅಧಿಕಾರಿ ವೀರಭದ್ರಯ್ಯ ತಿಳಿಸಿದರು.

ಈ ಸಂದರ್ಭದಲ್ಲಿ ಕಂದಾಯ ಅಧಿಕಾರಿ ಪರಶುರಾಮ್, ಹೊನ್ನಾಳಿ ಸುರೇಶ್,. ಸಿಬ್ಬಂದಿಗಳಾದ ಮೋಹನ್ ರವಿ , ದೇವರಾಜ್, ಸುರೇಶ್ ರಾಘವೇಂದ್ರ ಸೇರಿದಂತೆ ವ್ಯಾಪಾರಸ್ಥರು ಮತ್ತು ಸಾರ್ವಜನಿಕರು ಹಾಜರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ₹ 6.400 ಕೋಟಿ ವೆಚ್ಚದ ಶಿವಮೊಗ್ಗ- ತುಮಕೂರು ಚತುಷ್ಪಥ ರಸ್ತೆ ಮುಂದಿನ ಮಾರ್ಚ್ ಗೆ ಸಿದ್ಧ- ಬಿ.ವೈ.ರಾಘವೇಂದ್ರ

B.Y. Raghavendra ಮಲೆನಾಡು ಹಾಗೂ ರಾಜಧಾನಿ ಬೆಂಗಳೂರು ನಡುವಿನ ಸಂಪರ್ಕವನ್ನು ಕ್ರಾಂತಿಕಾರಕವಾಗಿ...

S. N. Channabasappa ಬಡಾವಣೆಗಳಿಗೆ ಮೂಲಭೂತ ಸೌಕರ್ಯ ಒದಗಿಸುವುದು ನಮ್ಮ ಮುಖ್ಯ ಕರ್ತವ್ಯ- ಎಸ್.ಎನ್.ಚನ್ನಬಸಪ್ಪ

S. N. Channabasappa ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಒಳಪಡುವ...

Rotary Club of Shivamogga ಮಕ್ಕಳಲ್ಲಿ ರೋಟರಿ ಸಂಸ್ಥೆ ನಾಯಕತ್ವ ಗುಣಗಳನ್ನ ಬೆಳೆಸುತ್ತದೆ- ಡಿ.ಕೆ.ನರಹರಿ

Rotary Club of Shivamogga ರೋಟರಿ ಸಂಸ್ಥೆಯು ಮಕ್ಕಳಿಗೆ ಶಾಲಾ ಹಂತದಲ್ಲಿಯೇ...

B.Y. Raghavendra ಹವಾಮಾನ ಆಧಾರಿತ ಬೆಳೆವಿಮೆ: ಅರ್ಜಿ ಸಲ್ಲಿಕೆ ಅಂತಿಮ ದಿನಾಂಕ ವಿಸ್ತರಿಸಿ- ಸಂಸದ ಬಿ.ವೈ‌.ರಾಘವೇಂದ್ರ

B.Y. Raghavendra ಮುಂಗಾರು ಹಂಗಾಮಿನಲ್ಲಿ ರಾಜ್ಯಾದ್ಯಂತ ವಾಡಿಕೆಗಿಂತ ಶೇ.34 ರಷ್ಟು ಮಳೆ...