Tuesday, October 1, 2024
Tuesday, October 1, 2024

B.Y.Vijayendra ಈಶ್ವರಪ್ಪನವರೇ ಪಕ್ಷದ ಹಿತದೃಷ್ಟಿಯಿಂದ ಕೈಜೋಡಿಸಬೇಕು- ಬಿ.ವೈ.ವಿಜಯೇಂದ್ರ

Date:

B.Y.Vijayendra ಕೆ.ಎಸ್‌. ಈಶ್ವರಪ್ಪನವರೆ ಇನ್ನೂ ಕಾಲ ಮಿಂಚಿಲ್ಲ, ಕೈ ಜೋಡಿಸಿ ತಮಗೆ ವಿನಂತಿ ಮಾಡುತ್ತೇನೆ. ನಿಮ್ಮ ಸಮಸ್ಯೆ ಇದ್ದರೆ ದೆಹಲಿ ನಾಯಕರ ಜೊತೆ ಮಾತನಾಡಿ, ನಾವಂತೂ ನಿಮ್ಮ ಜೊತೆ‌ ಇರುತ್ತೇವೆ, ನೀವು ಸಹ ನಮ್ಮ ಜೊತೆ ಇರಬೇಕು ಎಂಬುದು ನಮ್ಮ ಆಸೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಹೇಳಿದ್ದಾರೆ.
ಶಿವಮೊಗ್ಗದಲ್ಲಿ ಚುನಾವಣಾ ಪ್ರಚಾರ ಸಂಬಂಧ ಮಾತನಾಡಿದ ಅವರು, ಮನೆ ಮನೆಯಲ್ಲಿ ‌ಮೋದಿ ಬಗ್ಗೆ ಮಾತನಾಡ್ತಿದ್ದಾರೆ. ಮೋದಿ ಮತ್ತೊಮ್ಮೆ ಪ್ರಧಾನಮಂತ್ರಿ ಆಗಬೇಕು ಅಂತಾ ಹರಸುತ್ತಿದ್ದಾರೆ. ರಾಜ್ಯದಲ್ಲಿ 28 ಸ್ತಾನ ಬರುತ್ತವೆ. ಇದರಲ್ಲಿ ಯಾವುದೇ ಅನುಮಾನ ‌ಇಲ್ಲ, ಕಾಂಗ್ರೆಸ್ ಪಕ್ಷ ದಿಕ್ಕಾಪಾಲಾಗುತ್ತದೆ. ಯಾವುದೇ ಸ್ಥಾನ ಗೆಲ್ಲಲ್ಲ, ರಾಜ್ಯದಲ್ಲಿ ಕಾಂಗ್ರೆಸ್‌ ಗೆದ್ದರೇ ಅದು ಪ್ರಪಂಚದಲ್ಲಿ 8 ನೇ ಅದ್ಬುತ ಎಂದರು.
B.Y.Vijayendra ಈಶ್ವರಪ್ಪರವರೇ ನೀವು ಹಿರಿಯರು ಪಕ್ಷ ಕಟ್ಟಲು ನಿಮ್ದು‌ ದೊಡ್ಡ ಪಾಲಿದೆ, ಯಾವುದೋ ಪರಿಸ್ಥಿತಿ ಸಂದರ್ಭ ಈ ಸನ್ನಿವೇಶಕ್ಕೆ ತಮ್ಮನ್ನು ದೂಡಿದೆ. ಮೋದಿ ಪ್ರಧಾನಮಂತ್ರಿ ಆಗಲು ಪಕ್ಷದ ಹಿತದೃಷ್ಟಿಯಿಂದ ತಾವು ಕೈಜೋಡಿಸಬೇಕು, ನಿಮ್ಮ ಸಮಸ್ಯೆಗಳನ್ನು ದೆಹಲಿ ನಾಯಕರ ಜೊತೆ ಮಾತನಾಡಿ ಸರಿಪಡಿಸಿಕೊಳ್ಳಿ ನಿಮ್ಮೊಂದಿಗೆ ನಾವು ಇರುತ್ತೇವೆ ಎಂದಿದ್ದಾರೆ. ಈಶ್ವರಪ್ಪ ಅವರಿಗೆ ಇನ್ನು ಕಾಲ ಮಿಂಚಿಲ್ಲ ಎಂದರು
ರಾಘವೇಂದ್ರ ಅಭಿವೃದ್ಧಿ ಬಗ್ಗೆ ಜನ ಮಾತನಾಡ್ತಿದ್ದಾರೆ. ಅವರು ಈ ಸಲ 2 ಲಕ್ಷ ಮತಗಳ ಅಂತರ ನೀಡಿದರು. ಗೆಲ್ಲುತ್ತಾರೆ. ಪ್ರೀತಂಗೌಡ ಜೊತೆ ಮಾತನಾಡಿದ್ದೇನೆ. ಅವರಿಗೆ ಮೈಸೂರು ಚಾಮರಾಜನಗರ ‌ಜವಾಬ್ದಾರಿ ಕೊಟ್ಟಿದ್ದೇವೆ, ಎಲ್ಲವೂ ಸರಿ ಹೋಗುತ್ತದೆ ಎಂದರು.
ಪ್ರಜ್ವಲ್ ರೇವಣ್ಣ ಹೆಚ್ಚಿನ ಬಹುಮತದಿಂದ ಗೆಲ್ಲುತ್ತಾರೆ, ಪ್ರಧಾನಮಂತ್ರಿ, ಅಮಿತ್ ಶಾ ಇನ್ನು ನಾಲ್ಕೈದು ಬಾರಿ ರಾಜ್ಯಕ್ಕೆ ಪ್ರಚಾರಕ್ಕೆ ಬರುತ್ತಾರೆ. ಯೋಗಿ ಆದಿತ್ಯನಾಥ್ ಸಹ ರಾಜ್ಯಕ್ಕೆ ಪ್ರಚಾರಕ್ಕೆ ಬರುತ್ತಾರೆ ಎಂದು ಮಾಹಿತಿ ನೀಡಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Gandhi Jayanti ಸಾಗರ ತಾಲ್ಲೂಕಿನಲ್ಲಿ ಯಶಸ್ವಿಯಾಗಿ ನಡೆದ ಸ್ವಚ್ಛತಾ ಹಿ ಸೇವಾ ಚಟುವಟಿಕೆ

Gandhi Jayanti ಭಾರತ ಸರ್ಕಾರದ, ಯುವ ವ್ಯವಹಾರ ಮತ್ತು ಕ್ರೀಡಾ...

Karnataka State Farmers Association ಆನೆದಾಳಿಗೆ ಮೃತಪಟ್ಟ ಪುರದಾಳ್ ನಿವಾಸಿಗೆ ₹25 ಲಕ್ಷ ಪರಿಹಾರ ನೀಡಲು ಆಗ್ರಹ

Karnataka State Farmers Association ಶಿವಮೊಗ್ಗ ನಗರದ ಅಂಚಿನಲ್ಲಿರುವ ಪುರದಾಳ್...

Shakahari Film ಶಾಖಾಹಾರಿ ಚಿತ್ರಕ್ಕೆ ಕಾನೂನು ಜಯ

Shakahari Film ಶಿವಮೊಗ್ಗದ ಕೀಳಂಬಿ ಮೀಡಿಯಾ ಲ್ಯಾಬ್ ನಿರ್ಮಿಸಿದ್ದ ಶಾಖಾಹಾರಿ...

Mahatma Gandhi ರಾಜ್ಯಮಟ್ಟದ ಬಾಪೂಜಿ ಪ್ರಬಂಧ ಸ್ಪರ್ಧೆ, ಫಲಿತಾಂಶ ಪ್ರಕಟ

Mahatma Gandhi ರಾಷ್ಟ್ರಪಿತ ,ಮಹಾತ್ಮ ಗಾಂಧೀಜಿಯವರ 155 ನೇ ಜಯಂತಿ ಅಂಗವಾಗಿ...