Sunday, August 2, 2026
Sunday, August 2, 2026

Yugadhi Festival ಕುಂಚೇನಹಳ್ಳಿಯಲ್ಲಿ ಶಿವರಾಜ್ ಕುಮಾರ್ & ಗೀತಾ ಶಿವರಾಜ್ ಕುಮಾರ್ ಯುಗಾದಿ ಆಚರಣೆ ಸಡಗರ

Date:

Yugadhi Festival ಲೋಕಸಭಾ ಚುನಾವಣೆಯಲ್ಲಿ ಭರ್ಜರಿ ಪ್ರಚಾರ ಕೈಗೊಂಡಿರುವ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್ ಕುಮಾರ್ ಮತ್ತು ನಟ ಶಿವರಾಜ್ ಕುಮಾರ್ ಅವರು ಏಪ್ರಿಲ್ ೯ರಂದು ಮಂಗಳವಾರ ಸಂಜೆ ೫ ಗಂಟೆಗೆ ಶಿವಮೊಗ್ಗ ತಾಲ್ಲೂಕಿನ ಕುಂಚೇನಹಳ್ಳಿಯಲ್ಲಿ ಯುಗಾದಿ ಆಚರಣೆಯಲ್ಲಿ ಭಾಗವಹಿಸಲಿದ್ದಾರೆ.

ಲಂಬಾಣಿ ಸಮುದಾಯದ ಪ್ರಮುಖ ಹಬ್ಬ ‘ಆಟಮ್’ ಯುಗಾದಿ ಹಬ್ಬ ಆಚರಣೆಯಲ್ಲಿ ಮಂಗಳವಾರ ಸಂಜೆ ೫ ಗಂಟೆಗೆ ಶಿವಣ್ಣ ದಂಪತಿ ಭಾಗವಹಿಸಲಿದ್ದಾರೆ.

ಬಂಜಾರ ಸಮುದಾಯದ ಉಡುಗೆಯಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಗ್ರಾಮಕ್ಕೆ ಆಗಮಿಸುವ ಗೀತಾ ಶಿವರಾಜ್ ಕುಮಾರ್ ಮತ್ತು ಶಿವರಾಜ್ ಕುಮಾರ್ ಅವರಿಗೆ ಲಂಬಾಣಿ ಸಮುದಾಯದ ಸಾಂಪ್ರದಾಯಿಕ ಸ್ವಾಗತ ನೀಡಲಾಗುವುದು.

Yugadhi Festival ಬಳಿಕ ಅವರು ಸೇವಾಲಾಲ್ ದೇವಾಲಯ ಸೇರಿದಂತೆ ಗ್ರಾಮದ ವಿವಿಧ ದೇವಾಲಯಗಳಿಗೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಲಿದ್ದಾರೆ. ದೇವರ ದರ್ಶನದ ಬಳಿಕ ಆಟಮ್ ಹಬ್ಬದ ಆಚರಣೆ ಸಂಪ್ರದಾಯ ಚಟುವಟಿಕೆಗಳಲ್ಲಿ ಭಾಗವಹಿಸಲಿದ್ದಾರೆ.

ಶಿವರಾಜ್ ಕುಮಾರ್ ಹಾಗೂ ಗೀತಾ ಶಿವರಾಜ್ ಕುಮಾರ್ ಆಗಮಿಸುತ್ತಿರುವುದು ಊರಿನ ಜನರ ಸಂಭ್ರಮ ಇಮ್ಮಡಿಕೊಳ್ಳುವಂತೆ ಮಾಡಿದೆ. ಅದರಲ್ಲಿಯೂ ಕುಂಚೇನಹಳ್ಳಿಯಲ್ಲಿ ಲಂಬಾಣಿ ಸಮುದಾಯದ ವಿಶೇಷ ಆಟಮ್ ಯುಗಾದಿ ಆಚರಣೆಯಲ್ಲಿ ದಂಪತಿ ಭಾಗವಹಿಸುತ್ತಿರುವುದು ಗ್ರಾಮದ ಜನರ ನಿರೀಕ್ಷೆ ಹೆಚ್ಚಿಸಿದೆ.

ಶಿವಣ್ಣ ದಂಪತಿ ಆಗಮನದ ಹಿನ್ನೆಲೆಯಲ್ಲಿ ಗ್ರಾಮದಲ್ಲಿ ಸಿದ್ಧತೆ ಮಾಡಿಕೊಳ್ಳಲಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Breaking News ತೀರ್ಥಹಳ್ಳಿಯಲ್ಲಿ ಮಳೆಗೆ ಶೆಡ್ ಕುಸಿತ: ಮೂವರ ಸಾವು.ಡಿಸಿಎಂ. ಡಾ.ಜಿ.ಪರಮೇಶ್ವರ ಸಂತಾಪ.

Breaking News ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಇಂದಿರಾನಗರದಲ್ಲಿ ಭಾರೀ ಮಳೆಗೆ ಗುಡ್ಡ...

D.K.Shivakumar ರಾಜಕೀಯಕ್ಕಿಂತ ರಾಜ್ಯದ ರೈತರ ಮತ್ತುಜನರ ಹಿತವೇ ಮುಖ್ಯ,- ಡಿ.ಕೆ.ಶಿವಕುಮಾರ್

D.K.Shivakumar ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಈ...

S.N. Channabasappa ಇಂದು ಪ್ರತಿಭಟನೆ ಎನ್ನುವುದು ಜಗತ್ತಿನ ವರ್ತಮಾನವಾಗಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಇಂಗ್ಲಿಷ್ ಪ್ರಾಧ್ಯಾಪಕ ಡಾ.ಸಿ. ಚನ್ನಪ್ಪ ವಾಲೆಮನೆ ಅವರ ‘ವಾಯ್ಸ್...