Wednesday, September 16, 2026
Wednesday, September 16, 2026

Chhattisgarh Police ಛತ್ತೀಸ್ ಗಢದ ದುರ್ಗ್ ಜಿಲ್ಲೆಯಲ್ಲಿ ಬಸ್ ಅಫಘಾತ 15 ಸಾವು

Date:

Chhattisgarh Police ಛತ್ತೀಸ್‌ಗಢದ ದುರ್ಗ್ ಜಿಲ್ಲೆಯಲ್ಲಿ ಮಂಗಳವಾರ ಬಸ್ಸೊಂದು ‘ಮುರುಮ್’ ಮಣ್ಣಿನ ಗಣಿಗಾರಿಕೆ ಗುಂಡಿಗೆ ಬಿದ್ದಿದ್ದರಿಂದ ಕನಿಷ್ಠ 15 ಜನರು ಸಾವಿಗೀಡಾಗಿದ್ದು, 12ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದು,
ಇವರೆಲ್ಲರೂ ಖಾಸಗಿ ಸಂಸ್ಥೆಯ ಉದ್ಯೋಗಿಗಳು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸಂತ್ರಸ್ತರು ಡಿಸ್ಟಿಲರಿಯಿಂದ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದಾಗ ಕುಮ್ಹಾರಿ ಪೊಲೀಸ್ ಠಾಣಾ ವ್ಯಾಪ್ತಿಯ ಖಾಪ್ರಿ ಗ್ರಾಮದ ಬಳಿ ರಾತ್ರಿ 8.30 ರ ಸುಮಾರಿಗೆ ಈ ಘಟನೆ ನಡೆದಿದೆ ಎಂದು ದುರ್ಗ್ ಪೊಲೀಸ್ ವರಿಷ್ಠಾಧಿಕಾರಿ ಜಿತೇಂದ್ರ ಶುಕ್ಲಾ ತಿಳಿಸಿದ್ದಾರೆ.

ಪ್ರಾಥಮಿಕ ಮಾಹಿತಿ ಪ್ರಕಾರ, 30 ಕ್ಕೂ ಹೆಚ್ಚು ಜನರಿದ್ದ ಬಸ್ ರಸ್ತೆಯಿಂದ ಸ್ಕಿಡ್ ಆಗಿ 40 ಅಡಿ ಆಳದ ‘ಮುರುಮ್’ ಗಣಿಯಲ್ಲಿ ಬಿದ್ದಿದೆ. ಅಪಘಾತದಲ್ಲಿ ಮೂವರು ಮಹಿಳೆಯರು ಸೇರಿದಂತೆ 15 ಜನರು ಸಾವಿಗೀಡಾಗಿದ್ದಾರೆ ಎಂದು ಹೇಳಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...

B.Y.Raghavendra ಸ್ಥಳೀಯರ ಆಹವಾಲು ಕೇಳದೇ , ವಾಸ್ತವ ಸ್ಥಿತಿ ಅರಿಯದೇ ಕಸ್ತೂರಿ ರಂಗನ್ ವರದಿ ನೀಡಲಾಗಿದೆ- ಬಿ.ವೈ.ರಾಘವೇಂದ್ರ

B.Y.Raghavendra ಕಸ್ತೂರಿ ರಂಗನ್‌ ಸಮಿತಿಯ ಶಿಫಾರಸ್ಸುಗಳಲ್ಲಿ ಕೆಲವು ಮಾರ್ಪಾಡುಗೊಳಿಸಿ, ಅರಣ್ಯ ಭೂಮಿಯೆಂದು...