Monday, May 4, 2026
Monday, May 4, 2026

Actor Ramya ಮಂಡ್ಯ ಕ್ಷೇತ್ರ ಪ್ರಚಾರಕ್ಕೆ ಸ್ಟಾರ್ ರಮ್ಯಾ ಎಂಟ್ರಿ, ಕಾಂಗ್ರೆಸ್ ಮಾಸ್ಟರ್ ಪ್ಲಾನ್

Date:

Actor Ramya ಮೈತ್ರಿ ಅಭ್ಯರ್ಥಿ ಹೆಚ್.ಡಿ ಕುಮಾರಸ್ವಾಮಿಗೆ ಸಂಸದೆ ಸುಮಲತಾ ಬೆಂಬಲ ಸೂಚಿಸಿದ ಬೆನ್ನಲ್ಲೇ, ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್ ಚಂದ್ರು ಪರ ಮಾಜಿ ಸಂಸದೆ, ನಟಿ ರಮ್ಯಾ ಪ್ರಚಾರಕ್ಕೆ ಒಪ್ಪಿಗೆ ಸೂಚಿಸಿದ್ದಾರೆಂದು ತಿಳಿದುಬಂದಿದೆ.

ಇದರಂತೆ ಸಂಸದರಾಗಿದ್ದ 6 ತಿಂಗಳಲ್ಲೇ ಜನಮನ ಗೆದ್ದಿದ್ದ ರಮ್ಯಾ ಅವರನ್ನು ಪ್ರಚಾರಕ್ಕೆ ಕರೆಸಿ ಮತದಾರರನ್ನ ಸೆಳೆಯಲು ಕಾಂಗ್ರೆಸ್ ಮಾಸ್ಟರ್ ಪ್ಲ್ಯಾನ್ ಮಾಡಿದೆ.

ರಮ್ಯಾ ಜೊತೆ ಕಾಂಗ್ರೆಸ್ ಶಾಸಕ ಗಣಿಗ ರವಿಕುಮಾರ್ ಈಗಾಗಲೇ ಮಾತುಕತೆ ನಡೆಸಿದ್ದು, ಮಂಡ್ಯ ಕ್ಷೇತ್ರದ ಕ್ಯಾಂಪೇನ್‍ಗೆ ಬರಲು ಅವರು ಒಪ್ಪಿಗೆ ಸೂಚಿಸಿದ್ದಾರೆ. ಮುಂದಿನ ವಾರ ಅಭ್ಯರ್ಥಿ ಜೊತೆ ರೋಡ್ ಶೋ ನಡೆಸುವ ಸಾಧ್ಯತೆ ಇದೆ ಎಂದು ಮೂಲಗಳಿಂದ ತಿಳಿದುಬಂದಿದೆ.

Actor Ramya ಒಕ್ಕಲಿಗರ ಭದ್ರಕೋಟೆಯಲ್ಲಿ ಗೆಲುವು ಸಾಧಿಸಲು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್ ಸಹ ಎಂಟ್ರಿ ಕೊಡಲಿದ್ದಾರೆ.
ಏಪ್ರಿಲ್ 17 ಅಥವಾ 20 ರಂದು ಮಂಡ್ಯದಲ್ಲಿ ಬೃಹತ್ ಸಮಾವೇಶ ನಡೆಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ಈ ಸಮಾವೇಶದಲ್ಲಿ ರಾಹುಲ್ ಗಾಂಧಿ ಸೇರಿದಂತೆ ಕಾಂಗ್ರೆಸ್ ನಾಯಕರು ಹೆಚ್‍ಡಿಕೆ ವಿರುದ್ಧ ತಂತ್ರ ಹೆಣೆದು ಮತದಾರರನ್ನು ಸೆಳೆಯಲು ಮುಂದಾಗಿದ್ದಾರೆಂದು ತಿಳಿದುಬಂದಿದೆ.

ಇದರ ನಡುವೆ ಸಿಎಂ ಸಿದ್ದರಾಮಯ್ಯರಿಂದ ಒಂದು ದಿನ, ಮಂಡ್ಯ ಲೋಕಾಸಭಾ ಕ್ಷೇತ್ರದ ಕೆ.ಆರ್ ನಗರ, ಕೆ.ಆರ್ ಪೇಟೆಯಲ್ಲಿ ಮತಯಾಚನೆ ನಡೆಯಲಿದೆ. ಇನ್ನೊಂದು ದಿನ ಡಿಸಿಎಂ ಡಿ.ಕೆ ಶಿವಕುಮಾರ್ ಮಂಡ್ಯದಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ. ಈ ಮೂಲಕ ಮಂಡ್ಯವನ್ನ ಸಾಕಷ್ಟು ಪ್ರತಿಷ್ಠೆಯ ಕ್ಷೇತ್ರವಾಗಿ ಕಾಂಗ್ರೆಸ್ ತೆಗೆದುಕೊಂಡಿದೆ.

ಮತ್ತೊಂದೆಡೆ ಮೈತ್ರಿ ಬಲ ಹೆಚ್ಚಿಸಿರುವ ಸಂಸದೆ ಸುಮಲತಾ, ಮೈತ್ರಿ ಅಭ್ಯರ್ಥಿ ಕುಮಾರಸ್ವಾಮಿ ಪರ ಪ್ರಚಾರಕ್ಕಿಳಿಯಲು ಸಿದ್ಧತೆ ನಡೆಸಿದ್ದಾರೆ.

ಸ್ಥಳೀಯ ನಾಯಕರೊಂದಿಗೆ ಪ್ರಚಾರ ನಡೆಸಲು ಮಾತುಕತೆ ನಡೆದಿದ್ದು, ಈ ಮೂಲಕ ಸುಮಲತಾ ಬೆಂಬಲಿಗರು ಹಾಗೂ ಮಹಿಳಾ ಮತದಾರರನ್ನು ಸೆಳೆಯಲು ತಂತ್ರ ರೂಪಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shivamogga Police ಗಾಡಿಕೊಪ್ಪ ಸಂಚಾರ ನಿಯತ್ರಣ ಓಕೆ. ಆದರೆ ಮಿಕ್ಕ ಸಮಸ್ಯೆಗಳಿಗೆ ಪರಿಹಾರವಿಲ್ಲ ಯಾಕೆ?

Shivamogga Police ಗಾಡಿಕೊಪ್ಪ‌,ಶಿವಮೊಗ್ಗದ ಸೆಟಲೈಟ್ ಟೌನ್ ಎಂಬ ವ್ಯಾಪ್ತಿಗೆ ಬೆಳೆದುಬಿಟ್ಟಿದೆ. ಅಲ್ಕಿನ ವೃತ್ತಕ್ಕೆ...

Shivamogga Airport ಶಿವಮೊಗ್ಗಏರ್ ಪೋರ್ಟ್ ನಲ್ಲಿನೈಟ್ ಲ್ಯಾಂಡಿಂಗ್ಕಾಮಗಾರಿಯು ಜೂನ್ ತಿಂಗಳಲ್ಲಿ ಮುಗಿಯಲಿದೆ- ನಂಜಯ್ಯ‌ಮಠ

Shivamogga Airport ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಕರ್ಯ ನಿಗಮ ಮಂಡಳಿಯ (ಕೆಎಸ್‌ಐಡಿಸಿ)...

B.Y. Raghavendra ಬಿಎಸ್ ವೈ ಅಭಿಮಾನೋತ್ಸವ ಕೇವಲ ಸಮಾರಂಭವಲ್ಲ.ನಮ್ಮನಾಯಕರಿಗೆ ಸಲ್ಲಿಸುವ ಗೌರವ- ಬಿ.ವೈ.ರಾಘವೇಂದ್ರ.

B.Y. Raghavendra ಇದೇ ಮೇ 9ರಂದು ಚಿತ್ರದುರ್ಗದಲ್ಲಿ ಆಯೋಜಿಸಲಾಗಿರುವ ರೈತ ನಾಯಕ, ಮಾಜಿ...