Wednesday, September 16, 2026
Wednesday, September 16, 2026

B.Y.Raghavendra ನಮ್ಮ ಹಣ ಕಿತ್ತುಕೊಂಡು ಗ್ಯಾರಂಟಿ ನೀಡುತ್ತಿದ್ದಾರೆ ಎಂದು ಮಹಿಳೆಯರೇ ಹೇಳುತ್ತಿದ್ದಾರೆ- ಬಿ.ವೈ.ರಾಘವೇಂದ್ರ

Date:

B.Y.Raghavendra ಈ ಚುನಾವಣೆಯಲ್ಲಿ ಕಾಂಗ್ರೆಸ್‌ನ ಗ್ಯಾರಂಟಿಗಳ ಆಟ ನಡೆಯುವುದಿಲ್ಲ ಎಂದು ಸಂಸದ ಬಿ ವೈ ರಾಘವೇಂದ್ರ ಹೇಳಿದರು.
ಶುಕ್ರವಾರ ಆದಿಚುಂಚನಗಿರಿ ಮಠಕ್ಕೆ ಭೇಟಿ ಕಾಲಭೈರವೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.
ಗ್ಯಾರಂಟಿಗೆ ಬೆಲೆ ಇಲ್ಲವಾಗಿದೆ. ಕ್ಷೇತ್ರದಲ್ಲಿ ಪ್ರವಾಸ ಮಾಡಿದ ಸಂದರ್ಭದಲ್ಲಿ ಕಾಂಗ್ರೆಸ್ ಸರಕಾರದ ಗ್ಯಾರಂಟಿಗಳಿಗೆ ಬೆಲೆ ಇಲ್ಲ ಎಂಬುದು ಗೊತ್ತಾಗಿದೆ. ನಮ್ಮ ಸಭೆಗಳಲ್ಲಿ ಮಹಿಳೆಯರು ಗಣನೀಯ ಪ್ರಮಾಣದಲ್ಲಿ ಸೇರುತ್ತಿರುವುದೇ ಇದಕ್ಕೆ ಸಾಕ್ಷಿ. ನಮ್ಮ ಹಣ ಕಿತ್ತುಕೊಂಡು ಗ್ಯಾರಂಟಿ ನೀಡುತ್ತಿದ್ದಾರೆ ಎಂದು ಸಭೆಗಳಲ್ಲಿ ಮಹಿಳೆಯರೇ ಈ ಬಗ್ಗೆ ಹೇಳುತ್ತಿದ್ದಾರೆ ಎಂದರು.
ರಾಜ್ಯದಲ್ಲಿ ಬರಗಾಲ ತೀವ್ರವಾಗಿದೆ. ಸರಕಾರ ಕೇಂದ್ರದಿಂದ ಬರಪರಿಹಾರ ಬಂದಿಲ್ಲ ಎಂದು ಹೇಳುತ್ತಿದೆಯೇ ವಿನಾ ತನ್ನ ಜವಾಬ್ದಾರಿಯನ್ನು ಪೂರೈಸುತ್ತಿಲ್ಲ ನೆರೆಗೆ ಕೇಂದ್ರದಿಂದ ಅನುದಾನ ಬಾರದಿದ್ದರೂ ಈ ಹಿಂದೆ ಬಿಜೆಪಿ ಸರಕಾರ ರಾಜ್ಯ ಸರಕಾರದಿಂದಲೇ ರೈತರ ನೆರವಿಗೆ ಬಂದಿದ್ದರು. ಆದರೆ ಇಂದಿನ ಕಾಂಗ್ರೆಸ್ ಸರಕಾರ ಕೇಂದ್ರದ ಮೇಲೆ ಗೂಬೆ ಕೂರಿಸುತ್ತಿದೆ
ಕೈಲಾಗದವರು ಮೈ ಪರಚಿಕೊಂಡರು ಎಂದು ಸಿದ್ದರಾಮಯ್ಯ ಸರಕಾರ ಬರೀ ಕೇಂದ್ರದತ್ತ ಬೊಟ್ಟು ಮಾಡುತ್ತಿರುವುದು ಖಂಡನೀಯ ಎಂದು ಹೇಳಿದರು.
B.Y.Raghavendra ಪ್ರಧಾನಿ ರಾಜ್ಯಕ್ಕೆ ಭೇಟಿ ನೀಡುವುದರ ಬಗ್ಗೆ ಪ್ರಸ್ತಾಪಿಸಿದ ಅವರು, ರಾಜ್ಯಕ್ಕೆ ಪ್ರಧಾನಿ ನರೇಂದ್ರ ಮೋದಿ ಎಷ್ಟು ಸಾರಿ ಬಂದರೂ ನಮಗೆ ಒಳ್ಳೆಯದೆ, ಅವರು ಭೇಟಿಯಿಂದ ಕಾರ್ಯಕರ್ತರಲ್ಲಿ ಹುಮ್ಮಸ್ಸು ಮೂಡುತ್ತದೆ. ಪ್ರಧಾನಿ ಭೇಟಿಯಿಂದ ರಾಜ್ಯದ ಸಾಮಾನ್ಯ ಜನರು ಮತ್ತು ಬಿಜೆಪಿ ಕಾರ್ಯರ್ತರಲ್ಲಿ ಹೊಸ ಉತ್ಸಾಹ ಮೂಡಲಿದೆ ಎಂದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...