Madhu Bangarappa ಗೀತಾ ಶಿವರಾಜ್ ಕುಮಾರ್ ಅವರ ಬಗ್ಗೆ ಮಾತನಾಡುವ ಹಕ್ಕು ಸಂಸದ ರಾಘವೇಂದ್ರ ಅವರಿಗಿಲ್ಲ. ಗೀತಕ್ಕನ ಪ್ರಚಾರ ಜೋರಾಗಿದ್ದು, ಮನೆಮಗಳಂತೆ ಎಲ್ಲರೂ ಸ್ವಾಗತಿಸುತ್ತಿದ್ದಾರೆ. ಅತಿ ಹೆಚ್ಚು ಮತಗಳ ಅಂತರದಿAದ ಅವರು ಗೆದ್ದೇ ಬರುತ್ತಾರೆ ಎಂದು ಸಚಿವ ಮಧು ಬಂಗಾರಪ್ಪ ಹೇಳಿದರು.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸಂಸದ ರಾಘವೇಂದ್ರ ಅವರಿಗಿಂತ ಮೊದಲೆ ನಾನು ಅವರ ಅಪ್ಪ ಬಿ.ಎಸ್. ಯಡಿಯೂರಪ್ಪನವರ ಪರ ಚುನಾವಣಾ ಪ್ರಚಾರ ಮಾಡಿದ್ದೆ ಎಂಬುದು ಅವರಿಗೆ ನೆನಪಿರಲಿ ಎಂದರು.
ಕ್ಷೇತ್ರದಲ್ಲಿ ಈಗಾಗಲೇ ಒಳ್ಳೆಯ ಪ್ರಚಾರ ಮಾಡುತ್ತಿದ್ದೇವೆ. ಗೀತಾ ಮತ್ತು ಶಿವರಾಜ್‌ಕುಮಾರ್ ಪ್ರತಿದಿನ ೧೬-೧೭ ಗ್ರಾಪಂ ವ್ಯಾಪ್ತಿಯಲ್ಲಿ ಚುನಾವಣಾ ಪ್ರಚಾರ ಮಾಡುತ್ತಿದ್ದಾರೆ. ಮೊದ ಮೊದಲು ನಾನು ಅವರ ಜೊತೆ ಹೋಗುತ್ತಿದ್ದೆ. ಈಗ ಅವರೇ ಸಮರ್ಥವಾಗಿ ಪ್ರಚಾರ ಕಾರ್ಯದಲ್ಲಿ ತೊಡಗಿದ್ದಾರೆ ಎಂದರು.
ಯಾವುದೇ ಚುನಾವಣೆಗಳು ಜನರ ಮೇಲೆ ಒತ್ತಡ ತರಬಾರದು. ಒತ್ತಡ ಹಾಕಿ ಮತ ಪಡೆಯ ಬಾರದು. ಜನರೇ ಸ್ವತಂತ್ರವಾಗಿ ನಿರ್ಧರಿಸಿ ಸರ್ಕಾರ ರಚನೆಗೆ ಕಾರಣವಾಗ ಬೇಕು. ಕಾಂಗ್ರೆಸ್ ಪಕ್ಷದ ಸಿದ್ಧಾಂತಗಳನ್ನು ಜನರು ಒಪ್ಪಿಕೊಂಡಿದ್ದಾರೆ. ಈ ಬಾರಿ ಕೇಂದ್ರದಲ್ಲಿ ಖಂಡಿತಾ ಕಾಂಗ್ರೆಸ್ ಸರ್ಕಾರ ರಚನೆಯಾಗುತ್ತದೆ ಎಂದರು.
ಕರ್ನಾಟಕದಲ್ಲಿ ಬರಗಾಲ ಬಂದು ಕುಡಿಯುವ ನೀರಿಗೂ ಸಂಕಷ್ಟವಾದರೂ ಕೇಂದ್ರಕ್ಕೆ ಕರುಣೆ ಬರಲಿಲ್ಲ. ರಾಜ್ಯಕ್ಕೆ ಬರಬೇಕಾದ ಅನುದಾನ ಕೇಳಲು ಕೋರ್ಟ್ಗೆ ಹೋಗಬೇಕಾದ ಅನಿವಾರ್ಯತೆ ಸೃಷ್ಟಿಸಿದ್ದಾರೆ. ಕೋರ್ಟ್ ಕೂಡ ಛೀಮಾರಿ ಹಾಕಿದರೂ ಇವರಿಗೆ ನಾಚಿಕೆ ಇಲ್ಲ ಎಂದರು.
Madhu Bangarappa ಕರ್ನಾಟಕದ ಬಿಜೆಪಿ ಸಂಸದರು ರಾಜ್ಯದ ಪರಿಸ್ಥಿತಿ ಬಗ್ಗೆ ಒಂದೇ ಒಂದು ಮಾತನಾಡಲಿಲ್ಲ. ಆದರೆ ಇಂತಹ ಸಂಕಷ್ಟದ ಸಂದರ್ಭ ದಲ್ಲೂ ಕೂಡ ಕೇಂದ್ರ ಸರ್ಕಾರ ರಾಜ್ಯಕ್ಕೆ ಬರಬೇಕಾದ ೧.೫೬ ಲಕ್ಷ ಕೋಟಿ ರೂ.ಗಳನ್ನು ನೀಡಿಲ್ಲ. ಇದಕ್ಕೆಲ್ಲ ಮತದಾರ ಚುನಾವಣೆಯಲ್ಲಿ ಉತ್ತರ ಕೊಡುತ್ತಾನೆ ಎಂದರು.
Madhu Bangarappa ಈ ಬಾರಿ ಖಂಡಿತ ಕೇಂದ್ರದಲ್ಲಿ ಕಾಂಗ್ರೆಸ್ ಸರ್ಕಾರ ರಚನೆಯಾಗುತ್ತದೆ- ಮಧು ಬಂಗಾರಪ್ಪ
Date: