Thursday, September 17, 2026
Thursday, September 17, 2026

CM Siddharamaih ಪ್ರಧಾನಿ ಮೋದಿ ರಾಜ್ಯ ಭೇಟಿ ಕುರಿತುಸೀಎಂ ಪ್ರತಿಕ್ರಿಯೆ

Date:

CM Siddharamaih ಎನ್.ಡಿ.ಎ ಗೆ ಪೂರ್ಣ ಬಹುಮತ ದೊರಕುವುದಿಲ್ಲ, ಬಿಜೆಪಿ ವಿರುದ್ಧವಿರುವ ಇಂಡಿಯಾ ಮೈತ್ರಿಗೆ ಬಹುಮತ ದೊರೆಯಲಿದೆ.

400ಕ್ಕೂ ಹೆಚ್ಚು ಸ್ಥಾನ ಪಡೆಯುವುದಾಗಿ ಹೇಳಿಕೊಳ್ಳುತ್ತಿರುವ ಬಿಜೆಪಿಯದ್ದು ಜನರ ದಾರಿತಪ್ಪಿಸುವ ಕಾರ್ಯತಂತ್ರವಾಗಿದೆ.

ಮೋದಿಯವರು ಬಂದು ಹೋಗಲು ನನ್ನದೇನೂ ತಕರಾರಿಲ್ಲ. ಕರ್ನಾಟಕಕ್ಕೆ ಏನು ಮಾಡಿದ್ದಾರೆ ಎಂದು ರಾಜ್ಯದ ಜನತೆಗೆ ಹೇಳಬೇಕು. ನಿರುದ್ಯೋಗ ಯಾಕೆ ಮಿತಿಮೀರಿದೆ? ತೆರಿಗೆ ಹಂಚಿಕೆಯಲ್ಲಿ ರಾಜ್ಯಕ್ಕೆ ಯಾಕೆ ಅನ್ಯಾಯವಾಗುತ್ತಿದೆ? ಬರಗಾಲಕ್ಕೆ ಇಂದಿನವರೆಗೂ ಯಾಕೆ ಪರಿಹಾರ ನೀಡಿಲ್ಲ? ಎಂಬುದಕ್ಕೆಲ್ಲಾ ನರೇಂದ್ರ ಮೋದಿ ಅವರು
ಉತ್ತರ ಹೇಳಲಿ ಎಂದು ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹೇಳಿದ್ದಾರೆ.

ಪ್ರಧಾನಿ ಮೋದಿ
ಅವರೇ ನಮ್ಮ ಕನ್ನಡಿಗ ಮತದಾರರು ನಿಮ್ಮ ಮೇಲೆ ಭರವಸೆ ಇಟ್ಟು ಮೊದಲ ಬಾರಿ ಹದಿನೇಳು, ಎರಡನೇ ಬಾರಿ ಇಪ್ಪತ್ತೈದು ಸಂಸದರನ್ನು ನಿಮ್ಮ ಪಕ್ಷದಿಂದ ಗೆಲ್ಲಿಸಿ ಲೋಕಸಭೆಗೆ ಕಳಿಸಿ ನಿಮ್ಮನ್ನು ಪ್ರಧಾನಮಂತ್ರಿ ಮಾಡಿದರು.

CM Siddharamaih ನಿಮ್ಮ ಮೇಲೆ ಇಷ್ಟೊಂದು ಪ್ರೀತಿ-ಅಭಿಮಾನ ತೋರಿದ ನಮ್ಮ ಮತದಾರರಿಗೆ ಕಳೆದ ಹತ್ತು ವರ್ಷಗಳಲ್ಲಿ ನೀವು ಮಾಡಿದ ಸಾಧನೆಯನ್ನು ತಿಳಿಸುವುದು ಬೇಡವೇ? ಈ ಬಾರಿಯಾದರೂ ಅದೇ ಹಳೆಯ ಹಿಂದು-ಮುಸ್ಲಿಮ್, ಭಾರತ -ಪಾಕಿಸ್ತಾನ, ಮಂದಿರ -ಮಸೀದಿ ಬಗೆಗಿನ ಟೇಪ್ ರೆಕಾರ್ಡರ್ ಪ್ಲೇ ಮಾಡುವುದನ್ನು ಕಡಿಮೆ ಮಾಡಿ ನಿಮ್ಮ ಹತ್ತು ವರ್ಷಗಳ ಸಾಧನೆಯ ಬಗ್ಗೆ ಹತ್ತು ನಿಮಿಷ ಮಾತನಾಡುತ್ತೀರಾ? ನಿರುದ್ಯೋಗ, ಬೆಲೆ ಏರಿಕೆ ಮತ್ತು ಭ್ರಷ್ಟಾಚಾರಗಳಿಗೆ ಸಂಬಂಧಿಸಿದಂತೆ ನಿಮ್ಮ ಸರ್ಕಾರದ ಮೇಲಿನ ಆರೋಪಗಳಿಗೆ ಉತ್ತರ ನೀಡುತ್ತೀರಾ? ಎಂದಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...