Friday, December 19, 2025
Friday, December 19, 2025

B.Y.Raghavendra ಈಶ್ವರಪ್ಪನವರ ಪರ ಹೋಗದಂತೆ ಬಿಜೆಪಿ ಕಾರ್ಯಕರ್ತರಿಗೆ ಅಭ್ಯರ್ಥಿ ರಾಘವೇಂದ್ರ ಮನವಿ

Date:

B.Y.Raghavendra ನಿನ್ನೆ ಈಶ್ವರಪ್ಪನವರ ನಾಮಪತ್ರ ಸಲ್ಲಿಕೆಗೆ ಬಿಜೆಪಿಯ ಕಾರ್ಯಕರ್ತರು ಪಾಲ್ಗೊಢಿರುವುದು ಬೆಳಕಿಗೆ ಬಂದಿದ್ದು ಇನ್ನುಮಂದೆ ಬಿಜೆಪಿ ಬಿ ಟೀಂ ಗೆ ಹೋಗದಂತೆ ಸಂಸದ ರಾಘವೇಂದ್ರರ ಭಾಷಣದಲ್ಲಿ ಮನವಿ ಮಾಡಿಕೊಂಡಿದ್ದಾರೆ.‌

ಅವರು ಗೋಪಾಳದ ಬಂಟರ ಭವನದಲ್ಲಿ ಬಿಜೆಪಿ ನಗರ ಮಹಿಳಾ ಮೋರ್ಚಾದ ಮಹಿಳಾ ಸಮಾವೇಶದಲ್ಲಿ ಭಾಗಿಯಾಗಿ ಮಾತನಾಡಿದರು.
ಏ.18 ರಂದು ಲೋಕಸಭಾ ಚುನಾವಣೆಗೆ ನಾಮಪತ್ರ ಸಲ್ಲಿಸುತ್ತಿದ್ದೇನೆ. 9-45 ಬೆಳಿಗ್ಗ ನಾಮಪತ್ರ ಸಲ್ಲಿಸುತ್ತಿದ್ದೇನೆ. ಮಾಜಿ ಸಿಎಂ ಕುಮಾರ ಸ್ವಾಮಿ ಮತ್ತು ಯಡಿಯೂರಪ್ಪನವರು ನಾಮಪತ್ರ ಸಲ್ಲಿಕೆ ಮೆರವಣಿಗೆಯಲ್ಲಿ ಭಾಗವಹಿಸಲಿದ್ದಾರೆ ಎಂದರು.

B.Y.Raghavendra ನಿನ್ನೆ ಈಶ್ವರರಪ್ಪನವರ ನಾಮಪತ್ರ ಸಲ್ಲಿಕೆಗೆ ಎಷ್ಟು ಜನ ಪಾಲ್ಗೊಂಡಿದ್ದೀರಿ ಎಂದು ಪ್ರಶ್ನಿಸಿದರು. ಸಭೆಯಲ್ಲಿ ಭಾಗವಜಿಸಿದ್ದ ಕೆಲ ಮಹಿಳೆಯರು ಕೈ ಎತ್ತಿದ್ದಾರೆ. ಪ್ರಾಮಾಣಿಕರಾಗಿ ಒಪ್ಪಿಕೊಂಡಿದ್ದೀರಿ ಇನ್ನೊಮ್ಮೆ ಈ ತಪ್ಪು ಮಾಡದಂತೆ. ಏ.18 ಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಮನವಿ ಮಾಡಿಕೊಂಡರು.
ದೇಶದಲ್ಲಿ ಪ್ರಧಾನಿ ಶೇ.೩೩% .ಮೀಸಲಾತಿ ಮಹಿಳೆಯರಿಗೆ ಕೊಟ್ಟಿದ್ದಾರೆ. ಚುನಾವಣಾ ಕಾವು ಏರುತ್ತಿದೆ. ಇಡೀ ಪ್ರಪಂಚದಲ್ಲಿ ಪ್ರಜ್ಞಾವಂತ ಮತದಾರರನ್ನು ಹೊಂದಿರುವ ದೇಶ ಭಾರತ.
ಪುರುಷರಿಗಿಂತ ಮಹಿಳೆಯರು ಹೆಚ್ಚು ಪ್ರಜ್ಣಾವಂತರು.

ಕಾಂಗ್ರೆಸ್ ಗ್ಯಾರಂಟಿ ಮೂಲಕ ಆಕಾಶ ಕೋರುತ್ತಿದೆ.
ಐದು ಕೆಜಿ ಅಕ್ಕಿ ಕೊಡುತ್ತಿರುವುದು ನರೇಂದ್ರ ಮೋದಿ. ಕೇಂದ್ರದ ಅಕ್ಕಿಗೆ ಸಿದ್ದರಾಮಯ್ಯ ಫೋಟೋ ಹಾಕಿದ್ದಾರೆ. ಶಕ್ತಿ ಯೋಜನೆ ಜಾರಿ ಬಳಿಕ ಗ್ರಾಮೀಣ ಭಾಗದಲ್ಲಿ ಬಸ್ ಗಳು ಸಿಗುತ್ತಿಲ್ಲ. ವಿದ್ಯಾರ್ಥಿಗಳಿಗೆ ಸಮಸ್ಯೆಯಾಗುತ್ತಿದೆ.‌
ಭಾಗ್ಯಲಕ್ಷ್ಮೀ ಬಾಂಡ್ ಯೋಜನೆ ಜಾರಿಗೆ ತರಲಾಗಿತ್ತು. ೧.೨೫ ಲಕ್ಷ ಆ ಮಕ್ಕಳ ಖಾತೆಗೆ ಹಣ ಜಮಾ ಆಗಲಿದೆ. ಸುಕನ್ಯ ಸಮೃದ್ಧಿ ಯೋಜನೆ ಹಣವನ್ನು ಅಂಚೆ ಇಲಾಖೆಯಲ್ಲಿ ಠೇವಣಿ ಇಟ್ಟರೆ ಶೇ.೭.೫ ಬಡ್ಡಿ ನೀಡಲಾಗುತ್ತಿದೆ. ಕಾಂಗ್ರೆಸ್ ದು ಗೊಂದಲದ ಗ್ಯಾರೆಂಟಿ ಬಿಜೆಪಿದು ನಂಬಿಕೆಯ ಗ್ಯಾರೆಂಟಿ ಎಂದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Interact Club ಮಕ್ಕಳಿಗೆ ಉತ್ತಮ ಶಿಕ್ಷಣ ಮತ್ತು ಭವಿಷ್ಯ ರೂಪಿಸುವಲ್ಲಿ ಪೋಷಕರ ಪಾತ್ರ ಬಹಳ ಮುಖ್ಯ – ರಮೇಶ್

ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ ಬೆಳೆಸುವಲ್ಲಿ ಇಂಟರಾಕ್ಟ್ ಕ್ಲಬ್ ಸಹಕಾರಿ ಎಂದು ಕ್ಷೇತ್ರ...

Veereshwar Punyashram Samskruth School ವೀರೇಶ್ವರ ಪುಣ್ಯಾಶ್ರಮದಲ್ಲಿ ಗಾಯಕ ನಿಜಗುಣಿ ಮಂಗಿ ಅವರ ಹಿಂದೂಸ್ತಾನಿ ಗಾಯನ

Veereshwar Punyashram Samskruth School ಸಾಗರ ರಸ್ತೆಯ ವೀರೇಶ್ವರ ಪುಣ್ಯಾಶ್ರಮ ಸಂಸ್ಕತ...

Rotary Shivamogga ರೇಬೀಸ್ ಮಾರಣಾಂತಿಕ‌ ಕಾಯಿಲೆಯಾಗುವ ಸಾಧ್ಯತೆ ಇದೆ, ನಿರ್ಲಕ್ಷ್ಯ ಬೇಡ- ಡಾ.ಅರವಿಂದ್

Rotary Shivamogga ರೇಬೀಸ್ ಮಾರಣಾಂತಿಕ ಕಾಯಿಲೆ ಆಗುವ ಸಾಧ್ಯತೆ ಇರುತ್ತದೆ. ಆದ್ದರಿಂದ...