Friday, December 5, 2025
Friday, December 5, 2025

Geeta Shivarajkumar ತಂದೆ ಬಂಗಾರಪ್ಪ ಜನ ಸಾಮಾನ್ಯರಿಗೆ ನೆರಳಾಗಿದ್ದರು. ನಾನೂ ಅದೇ ಹಾದಿಯಲ್ಲಿ ಸಾಗುವೆ- ಗೀತಾ ಶಿವರಾಜ್ ಕುಮಾರ್

Date:

‘Geeta Shivarajkumar ರಾಜ್ಯ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳು ಜನ ಸಾಮಾನ್ಯರ ನಾಡಿ ಮಿಡಿತಕ್ಕೆ ಹತ್ತಿರವಾಗಿವೆ’ ಎಂದು ಲೋಕಸಭಾ ಶಿವಮೊಗ್ಗ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ್ ಹೇಳಿದರು.

ಹೊಳೆಹೊನ್ನೂರು ಬ್ಲಾಕ್ ಕಾಂಗ್ರೆಸ್ ಸಮಿತಿಯಿಂದ ಇಲ್ಲಿನ ಮೇಲಿನ ಹನಸವಾಡಿ ಹಾಗೂ ಬೇಡರಹೊಸಹಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಸೂಗೂರು ಗ್ರಾಮದಲ್ಲಿ ಆಯೋಜಿಸಿದ್ದ ಗ್ರಾಮ ಪಂಚಾಯತಿ ಮಟ್ಟದ ಕಾರ್ಯಕರ್ತರ ಪ್ರಚಾರ ಸಭೆಯಲ್ಲಿ ಅವರು ಮಾತನಾಡಿದರು.

‘ರಾಜ್ಯ ಕಾಂಗ್ರೆಸ್‌ ಸರ್ಕಾರ ನುಡಿದಂತೆ ನಡೆದು ಗ್ಯಾರಂಟಿ ಯೋಜನೆಗಳ ಮೂಲಕ ಜನರ ಹಿತ ಕಾಪಾಡುತ್ತಿದೆ. ಇಲ್ಲಿ ಗ್ಯಾರಂಟಿ ಯೋಜನೆಗಳ ಬಗ್ಗೆ ಕೆಲವರಿಂದ ಅಪಪ್ರಚಾರ ನಡೆಸಲಾಗುತ್ತಿದೆ. ಆದರೆ, ಎಲ್ಲ ಯೋಜನೆಗಳೂ ಯಶಸ್ವಿಯಾಗಿ ನಡೆಯುತ್ತಿವೆ ಎಂದರು.

ಮಾಜಿ ಮುಖ್ಯಮಂತ್ರಿ ಬಂಗಾರಪ್ಪ ಅವರು ಇಲ್ಲಿ ಆರಾಧನ, ಆಶ್ರಯದಂತಹ ಯೋಜನೆಗಳನ್ನು ಜಾರಿಗೆ ತಂದು ಜನಸಾಮಾನ್ಯರಿಗೆ ನೆರಳಾಗಿದ್ದರು. ಅದೇ ಹಾದಿಯಲ್ಲಿ ನಾನು ಸಾಗುತ್ತೇನೆ ಎಂದು ಭರವಸೆ ನೀಡಿದರು.

Geeta Shivarajkumar ಕೆಪಿಸಿಸಿ ವಕ್ತಾರ ಆಯನೂರು ಮಂಜುನಾಥ ಮಾತನಾಡಿ, ಜಿಲ್ಲೆಯಲ್ಲಿ ಬಡವರು, ಕೂಲಿ ಕಾರ್ಮಿಕರ ಬದುಕಿಗೆ ಗ್ಯಾರಂಟಿ ಯೋಜನೆಗಳು ಆಶಾಕಿರಣವಾಗಿವೆ‌. ಬಿಜೆಪಿ ಆಡಳಿತದಲ್ಲಿ ಬಡವರ ಪರ ಯಾವುದೇ ಜನಪರ ಯೋಜನೆಗಳನ್ನು ಜಾರಿಗೆ ತರಲಿಲ್ಲ. ಇಲ್ಲಿನ ಸೋಗಾನೆ ವಿಮಾನ ನಿಲ್ದಾಣ ಕೇವಲ ಶ್ರೀಮಂತರಿಗೆ ಮಾತ್ರ. ಅದರಿಂದ, ಸಾಮಾನ್ಯರಿಗೆ ಯಾವುದೇ ಪ್ರಯೋಜನ ಇಲ್ಲ ಎಂದರು.
ಕಾಂಗ್ರೆಸ್ ಪ್ರಚಾರ ಸಮಿತಿ ಜಿಲ್ಲಾ ಅಧ್ಯಕ್ಷ ಎನ್.ರಮೇಶ್ ಮಾತನಾಡಿದರು.
ಲೋಕಸಭಾ ಚುನಾವಣೆ ಜಿಲ್ಲಾ ಉಸ್ತುವಾರಿ ಅನಿಲ್ ಕುಮಾರ್ ತಡಕಲ್, ಬೋವಿ ನಿಗಮದ ಅಧ್ಯಕ್ಷ ಎಸ್.ರವಿಕುಮಾರ್, ಹೊಳೆಹೊನ್ನೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹನುಮಂತ, ಎಸ್.ತೀರ್ಥಪ್ಪ, ವೈ.ಎಚ್.ನಾಗರಾಜ, ಶಾಂತವೀರ ನಾಯ್ಕ್, ತಿಮ್ಮಣ್ಣ, ದಿನೇಶ್ ಪಾಟೀಲ್, ಗಿರೀಶ್, ಧರ್ಮಣ್ಣ, ಶಿವಾನಂದ, ವಿರೇಶ್, ಹನುಮಂತ ನಾಯ್ಕ್, ಲೋಕೇಶ್, ಮಂಜು ಮೇಸ್ತ್ರಿ, ಸಂದೀಪ ಇದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Indian Medical Association 30 ವರ್ಷ ದಾಟಿದ ಮಹಿಳೆಯರು ಪ್ಯಾಪ್ಸ್ ಮಿಯರ್ ಟೆಸ್ಟ್ ಅನ್ನು 3 ವರ್ಷಕ್ಕೆ ಒಂದು ಬಾರಿ‌ ಮಾಡಿಸಬೇಕು- ಡಾ.ರಕ್ಷಾರಾವ್

Indian Medical Association ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಜಾಗ್ರತೆ ವಹಿಸಬೇಕು...

MESCOM ಡಿಸೆಂಬರ್ ‌9. ಕುಂಸಿ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪವಿಭಾಗದಲ್ಲಿ ಡಿ. 09 ರಂದು ಬೆಳಗ್ಗೆ 11.00...