Thursday, May 7, 2026
Thursday, May 7, 2026

Siddaramaiah ಬಿಜೆಪಿ ಆಪರೇಷನ್ ಕಮಲ,ಕೈ ಶಾಸಕರಿಗೆ ₹50 ಕೋಟಿ ಆಫರ್- ಸಿದ್ಧರಾಮಯ್ಯ ಆರೋಪ

Date:

Siddaramaiah ಲೋಕಸಭೆ ಚುನಾವಣೆಗೂ ಮುನ್ನ ಬಿಜೆಪಿ ಆಪರೇಷನ್ ಕಮಲ ನಡೆಸಲು ಯತ್ನಿಸುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದ್ದು, ಕೈ ಶಾಸಕರಿಗೆ 50ಕೋಟಿ ರೂ.ಆಫರ್‌ ನೀಡಲಾಗಿದೆ ಎಂದು ಹೇಳಿದ್ದಾರೆ.
ಇಂಡಿಯಾ ಟುಡೇ ಟಿವಿಯ ಕನ್ಸಲ್ಟಿಂಗ್ ಎಡಿಟರ್ ರಾಜ್‌ದೀಪ್ ಸರ್ದೇಸಾಯಿ ಅವರೊಂದಿಗೆ ನಡೆಸಿದ ವಿಶೇಷ ಸಂದರ್ಶನದಲ್ಲಿ ಮಾತನಾಡಿದ ಸಿದ್ದರಾಮಯ್ಯ, ಆಡಳಿತಾರೂಢ ಕಾಂಗ್ರೆಸ್‌ನ ಶಾಸಕರಿಗೆ ಪಕ್ಷ ತ್ಯಜಿಸಲು ಬಿಜೆಪಿ 50 ಕೋಟಿ ರೂಪಾಯಿಗಳ ಆಫರ್‌ ನೀಡಿದೆ ಎಂದು ಹೇಳಿದ್ದಾರೆ.
ಕರ್ನಾಟಕದಲ್ಲಿ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷ ನಿರೀಕ್ಷಿತ ಫಲಿತಾಂಶ ನೀಡದೆ ಸೋತರೆ ಕಾಂಗ್ರೆಸ್ ಸರ್ಕಾರ ಪತನವಾಗಲಿದೆ ಎಂಬ ಬಿಜೆಪಿ ಟೀಕೆಗೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ಕಳೆದ ಒಂದು ವರ್ಷದಿಂದ ಅವರು ನಮ್ಮ ಸರ್ಕಾರವನ್ನು ಒಡೆಯಲು ಪ್ರಯತ್ನಿಸುತ್ತಿದ್ದಾರೆ. ನಮ್ಮ ಶಾಸಕರಿಗೆ 50 ಕೋಟಿ ರೂ.ಗಳ ಆಫರ್‌ ನೀಡಲಾಯಿತು, ಅವರು ಪ್ರಯತ್ನಿಸಿದರು ಮತ್ತು ವಿಫಲರಾಗಿದ್ದಾರೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
Siddaramaiah ಲೋಕಸಭೆ ಚುನಾವಣೆಯಲ್ಲಿ ಸೋತರೆ ಕಾಂಗ್ರೆಸ್ ಸರ್ಕಾರ ಪತನವಾಗುವ ಕುರಿತ ಟೀಕೆಯನ್ನು ಸಿದ್ದರಾಮಯ್ಯ ಅವರು ತಳ್ಳಿ ಹಾಕಿದ್ದಾರೆ. ನಮ್ಮ ಶಾಸಕರು ಪಕ್ಷ ಬಿಡುವುದಿಲ್ಲ. ಒಬ್ಬ ಶಾಸಕರೂ ಕೂಡ ಕಾಂಗ್ರೆಸ್‌ ಪಕ್ಷವನ್ನು ಬಿಡುವುದಿಲ್ಲ. ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ತನ್ನ ಪೂರ್ಣ ಐದು ವರ್ಷಗಳ ಅವಧಿಯನ್ನು ಪೂರ್ಣಗೊಳಿಸುತ್ತದೆ ಎಂದು ಹೇಳಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Kuvempu University ಹತ್ತು ಚಿನ್ನದ ಪದಕ ಮುಡಿಗೇರಿಸಿದ ಕುವೆಂಪು ವಿವಿಗೇ ಪ್ರಥಮ ವಿದ್ಯಾರ್ಥಿಎಂ.ಎ.(ಕನ್ನಡ) ವಿಭಾಗದ ಪ್ರತಿಭೆ, ಹೆಚ್.ಎಂ.ಅಭಿಷೇಕ್.

Kuvempu University ಕುವೆಂಪು ವಿಶ್ವವಿದ್ಯಾಲಯದ ಘಟಿಕೋತ್ಸವದಲ್ಲಿ ವಿದ್ಯಾರ್ಥಿಗಳು ಶೈಕ್ಷಣಿಕ ಸಾಧನೆಯ ಮೂಲಕ ಗಮನ...

Kuvempu university ಕುವೆಂಪು ವಿವಿಯಿಂದ ಗೌರಗ ಡಾಕ್ಟರೇಟ್ ಪಡೆದ ಮಹನಿಯರ ಮಾಹಿತಿ

Kuvempu university ಕುವೆಂಪು ವಿಶ್ವವಿದ್ಯಾಲಯದ 35ನೇ ವಾರ್ಷಿಕ ಘಟಿಕೋತ್ಸವದಲ್ಲಿ ನಾಡಿನ ಮೂವರು ಗಣ್ಯ...

Kuvempu University ವಿದ್ಯಾರ್ಥಿಗಳು ಜೀವನದಲ್ಲಿ ಯಶಸ್ಸಿನ ಎತ್ತರಗಳನ್ನ ಸಾಧಿಸಿ, ದೇಶದ ಅಭಿವೃದ್ಧಿಗೆ ಕೊಡುಗೆ ನೀಡಿ- ಗೌ.ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್

Kuvempu University “ಕೇವಲ ಉದ್ಯೋಗಾಕಾಂಕ್ಷಿಯಾಗಿರದೆ ಅವಕಾಶಗಳ ಸೃಷ್ಟಿಕರ್ತರಾಗಿ. ಸ್ಟಾರ್ಟ್‌ಅಪ್ ಸಂಸ್ಕೃತಿ, ನಾವೀನ್ಯತೆ...

S.N. Channabasappa ಕನ್ನಡ ಸಾಹಿತ್ಯ ಪರಿಷತ್ತಿನ 111 ವರ್ಷಗಳ ಸೇವೆ ಅಪ್ರತಿಮ- ಎಸ್.ಎನ್.ಚನ್ನಬಸಪ್ಪ

S.N. Channabasappa "ಕನ್ನಡ ನಾಡು, ನುಡಿ ಮತ್ತು ಸಂಸ್ಕೃತಿಯನ್ನು ಕಟ್ಟುವಲ್ಲಿ ಕನ್ನಡ...