Ministry of Karnataka Legislature ಕರ್ನಾಟಕ ವಿಧಾನ ಸಭೆ ಸಚಿವಾಲಯದಲ್ಲಿ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದ್ದು, ಉಳಿಕೆ ವೃಂದ & ಕಲ್ಯಾಣ ಕರ್ನಾಟಕ ಸ್ಥಳೀಯ ವೃಂದದಲ್ಲಿ ಖಾಲಿ ಇರುವ ಬ್ಯಾಕ್ ಲಾಗ್ ಕನ್ನಡ ವರದಿಗಾರರು ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. KLC ನಲ್ಲಿ ಖಾಲಿ ಇರುವ ವರದಿಗಾರರು ಹುದ್ದೆಗಳ ನೇಮಕಾತಿಗೆ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಆಫ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತರು 30-04-2024 ರ ಒಳಗೆ ಅರ್ಜಿ ಸಲ್ಲಿಸಬಹುದು.
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಭಾರತದಲ್ಲಿ ಕಾನೂನು ರೀತ್ಯಾ ಸ್ಥಾಪಿತವಾದ ಯಾವುದೇ ಅಂಗೀಕೃತ ವಿಶ್ವವಿದ್ಯಾಲಯದಿಂದ ಯಾವುದೇ ಪದವಿಯನ್ನು ಹೊಂದಿರಬೇಕು.
ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿಯವರು ನಡೆಸುವ ಪ್ರವೀಣ ದರ್ಜೆಯ ಕನ್ನಡ ಶೀಘ್ರಲಿಪಿ & ಪ್ರೌಢ ದರ್ಜೆಯ ಕನ್ನಡ ಬೆರಳಚ್ಚು ಪರೀಕ್ಷೆಗಳಲ್ಲಿ ಉತ್ತೀರ್ಣ ಹೊಂದಿರಬೇಕು.
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಕನಿಷ್ಟ 18 ವರ್ಷ ಪೂರೈಸಿರಬೇಕು & 35 ವರ್ಷವನ್ನು ಮೀರಿರಬಾರದು.
ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ (SC/ST): 05 ವರ್ಷ
ಇತರೆ ಹಿಂದೂಳಿದ ವರ್ಗ (OBC) : 03 ವರ್ಷ
ಅಂಗವಿಕಲ (PWD): ಅವರ ಕೆಟಗೆರಿಯಲ್ಲಿ 10 ವರ್ಷ ಸಡಿಲಿಕೆ ಇರುತ್ತದೆ.
ಸಾಮಾನ್ಯ ಅರ್ಹತಾ ಅಭ್ಯರ್ಥಿಗಳಿಗೆ: ರೂ. 500/-
ಪ್ರವರ್ಗ 2ಎ/ 2ಬಿ/ 3ಎ/ 3ಬಿ ಅಭ್ಯರ್ಥಿಗಳಿಗೆ : ರೂ. 500/-
ಪ.ಜಾ/ ಪಪಂ/ ಕೆ1 ಅಭ್ಯರ್ಥಿಗಳಿಗೆ: ಅರ್ಜಿ ಶುಲ್ಕ ಇರುವುದಿಲ್ಲ
ಅಭ್ಯರ್ಥಿಗಳು ಅರ್ಜಿ ಶುಲ್ಕವನ್ನು ಇಂಡಿಯನ್ ಪೋಸ್ಟಲ್ ಆರ್ಡರ್ ಮುಖಾಂತರ ಪಾವತಿ ಮಾಡಬಹುದು.
Ministry of Karnataka Legislature ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಭಾರತದಲ್ಲಿ ಕಾನೂನು ರೀತ್ಯಾ ಸ್ಥಾಪಿತವಾದ ಯಾವುದೇ ಅಂಗೀಕೃತ ವಿಶ್ವವಿದ್ಯಾಲಯದಿಂದ ಯಾವುದೇ ಪದವಿಯನ್ನು ಹೊಂದಿರಬೇಕು.
ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿಯವರು ನಡೆಸುವ ಪ್ರವೀಣ ದರ್ಜೆಯ ಆಂಗ್ಲ ಶೀಘ್ರಲಿಪಿ & ಪ್ರೌಢ ದರ್ಜೆಯ ಆಂಗ್ಲ ಬೆರಳಚ್ಚು ಪರೀಕ್ಷೆಗಳಲ್ಲಿ ಉತ್ತೀರ್ಣ ಹೊಂದಿರಬೇಕು.
ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಲಿಖಿತ ಪರೀಕ್ಷೆ/ ಕೌಶಲ್ಯ ಪರೀಕ್ಷೆ ನಡೆಸಲಾಗುತ್ತದೆ.
ಆಸಕ್ತ ಹಾಗೂ ಅರ್ಹ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಅರ್ಜಿ ನಮೂನೆಯನ್ನು ಭರ್ತಿ ಮಾಡಿ, ಇತ್ತೀಚಿನ ಫೋಟೊ, ಅಗತ್ಯ ವಿದ್ಯಾರ್ಹತೆ, ಅನುಭವ & ಇನ್ನಿತರ ಅಗತ್ಯ ದಾಖಲೆಗಳನ್ನು ಲಗತ್ತಿಸಿ ದಿನಾಂಕ: 30.04.2024 ರ ಒಳಗಾಗಿ ಖುದ್ದಾಗಿ ಅಥವಾ ಅಂಚೆ ಮೂಲಕ ಕಾರ್ಯದರ್ಶಿ, ಕರ್ನಾಟಕ ವಿಧಾನ ಸಭೆ ಸಚಿವಾಲಯ, ಅಂಚೆ ಪೆಟ್ಟಿಗೆ ಸಂಖ್ಯೆ- 5074 ವಿಧಾನಸೌಧ, ಬೆಂಗಳೂರು- 560001 ಇವರ ವಿಳಾಸಕ್ಕೆ ಸಲ್ಲಿಸುವುದು.