Friday, December 19, 2025
Friday, December 19, 2025

Geeta Shivaraj kumar ರಾಜ್ಯದಲ್ಲಿ ಗ್ಯಾರಂಟಿ ಯೋಜನೆಗಳಿಂದ ಬಡ ಅಶಕ್ತ ಕುಟುಂಬದ ಮಹಿಳೆಯರ ಬದುಕು ಸುಂದರ- ಗೀತಾ ಶಿವರಾಜ್ ಕುಮಾರ್

Date:

Geeta Shivaraj kumar ಶಿವಮೊಗ್ಗ ಜಿಲ್ಲೆಯ ಅಭಿವೃದ್ಧಿ ವಿಚಾರದಲ್ಲಿ ಬದಲಾವಣೆ ತರಲು ಕಾಂಗ್ರೆಸ್ ಪಕ್ಷದತ್ತ ಜನರು ಒಲವು ತೋರುತ್ತಿದ್ದಾರೆ. ಆದ್ದರಿಂದ, ಈ ಭಾರಿಯ ಚುನಾವಣೆಯಲ್ಲಿ ನನ್ನ ಗೆಲವು ನಿಶ್ಚಿತ’ ಎಂದು ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ ಭರವಸೆ ವ್ಯಕ್ತಪಡಿಸಿದರು.
ಅವರು ಶಿಕಾರಿಪುರ ತಾಲೂಕಿನ ವ್ಯಾಪ್ತಿಯ ತೊಗರ್ಸಿ ಗ್ರಾಮದಲ್ಲಿ ಮಂಗಳವಾರ ಆಯೋಜಿಸಿದ್ದ ಕಾಂಗ್ರೆಸ್ ಸಭೆಯಲ್ಲಿ ಮತಯಾಚನೆ ಮಾತನಾಡಿದರು.
ರಾಜ್ಯದಲ್ಲಿ ಗ್ಯಾರಂಟಿ ಯೋಜನೆಗಳಿಂದ ಬಡ ಕುಟುಂಬದ ಮಹಿಳೆಯರು, ಅಶಕ್ತ ಕುಟುಂಬಗಳು ಸುಂದರ ಬದುಕು ಕಟ್ಟಿಕೊಂಡಿದ್ದಾರೆ. ಇಲ್ಲಿ ಗ್ಯಾರಂಟಿ ಭಾಗ್ಯಗಳು ಎಲ್ಲಾ ಧರ್ಮ, ಸಮುದಾಯಗಳ ಜನಮನ ಗೆದ್ದಿವೆ. ಇದರಿಂದ, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಅವರ ಕನಸು ನನಸಾಗಿದೆ ಎಂದರು.
Geeta Shivaraj kumar ಮಾಜಿ ಮುಖ್ಯಮಂತ್ರಿ ದಿವಂಗತ ಬಂಗಾರಪ್ಪ ಅವರಿಗೆ ತಾಲ್ಲೂಕಿನ ಜನ ಪ್ರೀತಿಯಿಂದ ಕಾಣುತ್ತಿದ್ದರು. ಅವರ ಜನಪರ ಸೇವೆಯನ್ನು ಮುಂದುವರೆಸಿಕೊAಡು ಹೋಗಲು ನನಗೂ ಅವಕಾಶ ಕಲ್ಪಿಸಿಕೊಡಿ ಎಂದು ಕೋರಿದರು.
ಕೆಪಿಸಿಸಿ ವಕ್ತಾರ ಆಯನೂರು ಮಂಜುನಾಥ ಮಾತನಾಡಿ, ಬಿಜೆಪಿಯ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ ಅವರ ಕುಟುಂಬ ಈ ಭಾಗದಲ್ಲಿ ಯಾವುದೇ ನಾಯಕರನ್ನು ಬೆಳೆಯಲು ಬಿಡಲಿಲ್ಲ. ೪೦ ವರ್ಷಗಳಿಂದ ಈ ಭಾಗದ ಬಿಜೆಪಿ ನಿಷ್ಠಾವಂತ ಕಾರ್ಯಕರ್ತರಿಗೆ ಅನ್ಯಾಯ ಮಾಡಿಕೊಂಡು ಬರಲಾಗುತ್ತಿದೆ. ಇದು ಯಡಿಯೂರಪ್ಪ ಕುಟುಂಬ ಸದಸ್ಯರ ಸಾಧನೆ ಎಂದು ವ್ಯಂಗ್ಯವಾಡಿದರು

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Interact Club ಮಕ್ಕಳಿಗೆ ಉತ್ತಮ ಶಿಕ್ಷಣ ಮತ್ತು ಭವಿಷ್ಯ ರೂಪಿಸುವಲ್ಲಿ ಪೋಷಕರ ಪಾತ್ರ ಬಹಳ ಮುಖ್ಯ – ರಮೇಶ್

ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ ಬೆಳೆಸುವಲ್ಲಿ ಇಂಟರಾಕ್ಟ್ ಕ್ಲಬ್ ಸಹಕಾರಿ ಎಂದು ಕ್ಷೇತ್ರ...

Veereshwar Punyashram Samskruth School ವೀರೇಶ್ವರ ಪುಣ್ಯಾಶ್ರಮದಲ್ಲಿ ಗಾಯಕ ನಿಜಗುಣಿ ಮಂಗಿ ಅವರ ಹಿಂದೂಸ್ತಾನಿ ಗಾಯನ

Veereshwar Punyashram Samskruth School ಸಾಗರ ರಸ್ತೆಯ ವೀರೇಶ್ವರ ಪುಣ್ಯಾಶ್ರಮ ಸಂಸ್ಕತ...

Rotary Shivamogga ರೇಬೀಸ್ ಮಾರಣಾಂತಿಕ‌ ಕಾಯಿಲೆಯಾಗುವ ಸಾಧ್ಯತೆ ಇದೆ, ನಿರ್ಲಕ್ಷ್ಯ ಬೇಡ- ಡಾ.ಅರವಿಂದ್

Rotary Shivamogga ರೇಬೀಸ್ ಮಾರಣಾಂತಿಕ ಕಾಯಿಲೆ ಆಗುವ ಸಾಧ್ಯತೆ ಇರುತ್ತದೆ. ಆದ್ದರಿಂದ...