Geeta Shivaraj kumar ಹಕ್ಕಿ- ಪಿಕ್ಕಿ ಸಮುದಾಯಕ್ಕೆ ಮಾಜಿ ಮುಖ್ಯಮಂತ್ರಿ ದಿವಂಗತ ಬಂಗಾರಪ್ಪ ಅವರ ಕೊಡುಗೆ ಅಪಾರ’ ಎಂದು ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ ಹೇಳಿದರು.
ತಾಲ್ಲೂಕಿನ ಬಿ.ಬೀರನಹಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಹಕ್ಕಿ ಪಿಕ್ಕಿ ಕ್ಯಾಂಪ್ ನಲ್ಲಿ ಬುಧವಾರ ಆಯೋಜಿಸಿದ್ದ ಪ್ರಚಾರ ಸಭೆಯಲ್ಲಿ ಅವರು ಮಾತನಾಡಿದರು.
ಹಕ್ಕಿಪಿಕ್ಕಿ ಅಲೆಮಾರಿ ಸಮುದಾಯಕ್ಕೆ ಬಂಗಾರಪ್ಪ ಆಡಳಿತದಲ್ಲಿ 101 ಜನ ರೈತರಿಗೆ ಭೂ ಹಕ್ಕು ಪತ್ರ ನೀಡಿದ್ದರು. ಅದೇ ರೀತಿ, ₹13 ಕೋಟಿ ವೆಚ್ಚದಲ್ಲಿ ಆಶ್ರಮ ಶಾಲೆ ತೆರೆದು ಬಡವರಿಗೆ ಆಶಾಕಿರಣ ಆಗಿದ್ದರು ಎಂದರು.
ಗ್ರಾಮದ ಎಲ್ಲಾ ಭಾಗದಲ್ಲಿ ರಸ್ತೆ, ಚರಂಡಿ ವ್ಯವಸ್ಥೆ, ಕುಡಿಯುವ ನೀರಿನ ಸೌಲಭ್ಯವನ್ನು ಕಲ್ಪಿಸಿಕೊಟ್ಟಿದ್ದರು. ಇಲ್ಲಿ 127 ಜನ ರೈತರು ಸಾಗುವಳಿ ಪತ್ರವನ್ನು ಬಂಗಾರಪ್ಪ ಅವರ ಕಾಲದಲ್ಲಿ ಪಡೆದಿದ್ದರು ಎಂದರು.
ಬಂಗಾರಪ್ಪ ಅವರ ಹಾದಿಯಲ್ಲಿ ಸಾಗಲು, ನನಗೂ ಅವಕಾಶ ಕಲ್ಪಿಸಿಕೊಡಿ. ಮೇ.೭ ರಂದು ನಡೆಯುವ ಚುನಾವಣೆಯಲ್ಲಿ ಅಮೂಲ್ಯವಾದ ಮತ ನೀಡಿ ಆಶೀರ್ವದಿಸಿ ಎಂದು ಕೋರಿದರು.
Geeta Shivaraj kumar ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಜಿ.ಪಲ್ಲವಿ ಮಾತನಾಡಿ, ಸಮುದಾಯದ ಏಳಿಗೆಗೆ ಕಾಂಗ್ರೆಸ್ ಪಕ್ಷ ಸದಾ ಸಿದ್ದ. ಹಿಂದುಳಿದ ಸಮುದಾಯದವರು ಬಿ.ಆರ್.ಅಂಬೇಡ್ಕರ್ ನೀಡಿದ ಕಾನೂನನ್ನು ಮೊದಲು ತಿಳಿದುಕೊಳ್ಳಬೇಕು. ಸಂವಿಧಾನವನ್ನು ಅಳಿಸಲು ಹೊರಟವರನ್ನು ಈ ಚುನಾವಣೆಯಲ್ಲಿ ಸೋಲಿಸಬೇಕು. ಇಲ್ಲಿ ಗೀತಾ ಶಿವರಾಜಕುಮಾರ ಅವರಿಗೆ ಮತ ನೀಡಿ, ಆರಿಸಬೇಕು ಎಂದರು.
ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷೆ ವೇದ ವಿಜಯ್ ಕುಮಾರ್ ಮಾತನಾಡಿ, ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ ಅವರಿಗೆ ಸಮುದಾಯದ ಸಹಕಾರ ಬೇಕು ಎಂದು ಕೋರಿದರು.
ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ ಅವರು ಪಿಳ್ಳಂಗಿರಿ, ಕೂಡ್ಲಿ, ಬಿ.ಬೀರನಹಳ್ಳಿ, ಶೆಟ್ಟಿಹಳ್ಳಿ, ಹಸೂಡಿ ಫಾಂ, ನಿದಿಗೆ- ಬಿದರೆ, ಸೋಗಾನೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಪ್ರಚಾರ ಸಭೆ ನಡೆಯಿತು.