Thursday, September 17, 2026
Thursday, September 17, 2026

Byrathi Suresh ಕಾಂಗ್ರೆಸ್ ಅಭ್ಯರ್ಥಿಗಳ ಸೋಲು ಸಿಎಂ ಕುರ್ಚಿಗೇ ಕಂಟಕವಾಗಬಹುದು- ಸಚಿವ ಭೈರತಿ ಸುರೇಶ್

Date:

Byrathi Suresh ಲೋಕಸಭಾ ಚುನಾವಣಾ ಕಣ ದಿನದಿಂದ ದಿನಕ್ಕೆ ರಂಗೇರುತ್ತಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಶಿಷ್ಯ, ಸಚಿವ ಬೈರತಿ ಸುರೇಶ್ ಅವರು ಕಾಂಗ್ರೆಸ್ ಅಭ್ಯರ್ಥಿಗಳು ಸೋತರೆ ಸಿಎಂ ಸ್ಥಾನಕ್ಕೆ ಕಂಟಕವಾಗಲಿದೆ ಎಂದಿದ್ದಾರೆ.

ಕೋಲಾರ ನಗರದ ಹಾಲಿಸ್ಟರ್ ಭವನದಲ್ಲಿ ನಡೆದ ಕುರುಬ ಸಮುದಾಯದ ಮುಖಂಡ ಸಭೆಯಲ್ಲಿ ಮಾತನಾಡಿದ ಸಚಿವ ಬೈರತಿ ಸುರೇಶ್ ಅವರು, ನಮ್ಮ ಅಭ್ಯರ್ಥಿಗಳು ಸೋತರೆ ಸಿದ್ದರಾಮಯ್ಯ ಅವರ ಸೀಟಿಗೆ ಕಂಟಕವಾಗುತ್ತದೆ. ನೀವು ಆ ಕೆಲಸ ಮಾಡಬೇಡಿ. ನಿಮಗೆ ನಾನು ಕೈಮುಗಿದು ಕೇಳಿಕೊಳ್ಳುತ್ತೇನೆ ಎಂದರು.

Byrathi Suresh ನೀವೆಲ್ಲರೂ ಸೇರಿ ಕುರುಬ ಸಮುದಾಯದ ಸಿದ್ದರಾಮಯ್ಯನವರ ಕೈ ಬಲಪಡಿಸಬೇಕು. ನಿಮ್ಮ ಬೆಂಬಲ ಕಾಂಗ್ರೆಸ್ ಪಕ್ಷದ ಮೇಲಿರಲಿ. ಸಿದ್ದರಾಮಯ್ಯ ನವರ ಮೇಲಿರಲಿ. ಕೋಲಾರ ಕಾಂಗ್ರೆಸ್ ಅಭ್ಯರ್ಥಿ ಕೆವಿ ಗೌತಮ್ ಮೇಲಿರಲಿ. ನೀವು ಬೇರೆ ಮನಸ್ಸು ಮಾಡಿ ಬೇರೆ ಅಭ್ಯರ್ಥಿ ಏನಾದರೂ ಗೆದ್ದರೆ ಸಿದ್ದರಾಮಯ್ಯನವರ ಸೀಟಿಗೆ ಕಂಟಕವಾಗಲಿದೆ. ಅವರ ಸೀಟಿಕೆ ಕಂಟಕವಾದರೆ ನೀವೇ ನೇರವಾಗಿ ಹೊಣೆಗಾರರಾಗುತ್ತೀರಿ ಎಂದು ಹೇಳಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...